![Lalu](https://www.udayavani.com/wp-content/uploads/2025/02/Lalu-2-415x282.jpg)
![Lalu](https://www.udayavani.com/wp-content/uploads/2025/02/Lalu-2-415x282.jpg)
Team Udayavani, Nov 10, 2021, 10:39 AM IST
ಬೆಳ್ತಂಗಡಿ: ತಾಲೂಕಿನ ಏಕೈಕ ಸ್ವಾತಂತ್ರ್ಯ ಹೋರಾಟ ಗಾರಾರಗಿರುವ ಬೆಳ್ತಂಗಡಿ ತಾಲೂಕಿನ ಪಡಂಗಡಿ ಗ್ರಾಮದ 98 ವರ್ಷದ ಹಿರಿಯ ದೇಶಾಭಿಮಾನಿ ಪಡಂಗಡಿ ಭೋಜರಾಜ ಹೆಗ್ಡೆ ಮಂಗಳವಾರ ಸ್ವಗೃಹದಲ್ಲಿ ನಿಧನರಾಗಿದ್ದು ಅವರ ಪಾರ್ಥಿವ ಶರೀರಕ್ಕೆ ಸರಕಾರಿ ಗೌರವ ಸಲ್ಲಿಸಲಾಯಿತು.
ಪಡಂಗಡಿ ಭೋಜರಾಜ ಹೆಗ್ಡೆ ಅವರ ಮನೆಯಲ್ಲಿ ಇಂದು ಬೆಳಗ್ಗೆ 9.30 ಕ್ಕೆ ಸರಿಯಾಗಿ ಶಾಸಕ ಹರೀಶ್ ಪೂಂಜ ಸಮ್ಮುಖದಲ್ಲಿ ಮೂರು ಸುತ್ತು ಕುಶಾಲತೋಪು ಸಿಡಿಸಿ ಸರಕಾರಿ ಗೌರವಗಳೊಂದಿಗೆ ಅಂತಿಮ ನಮನ ಸಲ್ಲಿಸಲಾಯಿತು.
ಈ ವೇಳೆ ಮಾಜಿ ಶಾಸಕ ಕೆ.ವಸಂತ ಬಂಗೇರ, ಜಿ.ಪಂ. ಮಾಜಿ ಸದಸ್ಯೆ ರಾಜಶ್ರೀ ಹೆಗ್ಡೆ, ಪಡಂಗಡಿ ಪಂಚಾಯತ್ ಅಧ್ಯಕ್ಷೆ ಮೀನಾಕ್ಷಿ, ಉಪಾಧ್ಯಕ್ಷ ಸಂತೋಷ್ ಕುಮಾರ್ ಜೈನ್, ಸಿ.ಎ.ಬ್ಯಾಂಕ್ ಅಧ್ಯಕ್ಷ ಯೋಗೀಶ್ ನಡಕರ, ಹಿರಿಯ ವಕೀಲ ನೇಮಿರಾಜ್ ಶೆಟ್ಟಿ ಉಪಸ್ಥಿತರಿದ್ದರು.
ಮಂಗಳವಾರ ರಾತ್ರಿ ಬೆಳ್ತಂಗಡಿ ತಹಶೀಲ್ದಾರ್ ಮಹೇಶ್ ಜೆ., ಮಾಜಿ ಸಚಿವ ಅಭಯಚಂದ್ರ ಜೈನ್, ಧರ್ಮಸ್ಥಳದ ಡಿ.ಹರ್ಷೇಂದ್ರ ಕುಮಾರ್, ವೇಣೂರು ಅಜಿಲ ಸೀಮಿಯ ತಿಮ್ಮಣ್ಣರಸರಾದ ಡಾ.ಪದ್ಮಪ್ರಸಾದ್ ಅಜಿಲ ಸಹಿತ ಗಣ್ಯಾತಿ ಗಣ್ಯರು, ಒಡನಾಡಿಗಳು, ಕುಟುಂಬಸ್ಥರು ಅಂತಿಮನಮನ ಸಲ್ಲಿಸಿದರು.
ಅವರು ಓರ್ವ ಪುತ್ರ ಓರ್ವ ಪುತ್ರಿಯನ್ನು ಅಗಲಿದ್ದಾರೆ.
You seem to have an Ad Blocker on.
To continue reading, please turn it off or whitelist Udayavani.