ಸಾಹಿತಿ, ಜಾನಪದ ವಿದ್ವಾಂಸ ಏರ್ಯ ಆಳ್ವ ಪ್ರಕೃತಿ ಲೀನ
Team Udayavani, Jul 29, 2019, 12:07 PM IST
ಬಂಟ್ವಾಳ: ಶನಿವಾರ ನಿಧನರಾದ ಹಿರಿಯ ಸಾಹಿತಿ ಡಾ| ಏರ್ಯ ಲಕ್ಷ್ಮೀನಾರಾಯಣ ಆಳ್ವ ಅವರ ಅಂತ್ಯಕ್ರಿಯೆ ರವಿವಾರ ಸಂಜೆ 4 ಗಂಟೆಗೆ ಅವರ ಅಪೇಕ್ಷೆ ಯಂತೆ ಏರ್ಯಬೀಡು ಮನೆ ವಠಾರದ ಮಜಲು ಗದ್ದೆಯಲ್ಲಿ ನಡೆಯಿತು. ವಿವಿಧ ಕ್ಷೇತ್ರಗಳ ಗಣ್ಯರು, ಸಾಹಿತಿಗಳು, ಅವರ ಅಭಿಮಾನಿಗಳು, ಬಂಧು ಮಿತ್ರರು ಸಹಸ್ರಾರು ಸಂಖ್ಯೆಯಲ್ಲಿ ಆಗಮಿಸಿ ಅಂತಿಮ ನಮನ ಸಲ್ಲಿಸಿದರು.
ಬೆಳಗ್ಗೆ 9 ಗಂಟೆಗೆ ಆಸ್ಪತ್ರೆಯಿಂದ ಪಾರ್ಥಿವ ಶರೀರವನ್ನು ಏರ್ಯರು ವಾಸ್ತವ್ಯವಿದ್ದ ಮನೆ “ಸಾಕೇತ’ಕ್ಕೆ ತಂದು ಅಲ್ಲಿ ಸುಮಾರು ಅರ್ಧಗಂಟೆ ಇರಿಸಿ ಅನಂತರ ಏರ್ಯ ಬೀಡು ಮೂಲ ಮನೆಗೆ ತರಲಾಯಿತು. ದೇಹಶುದ್ಧಿ ಸ್ನಾನಾದಿ ಕ್ರಿಯೆಗಳ ಬಳಿಕ ಬೀಡಿನ ಚಾವಡಿಯಲ್ಲಿ ಸಾರ್ವಜನಿಕ ವೀಕ್ಷಣೆಗೆ ಅವಕಾಶ ಮಾಡಿಕೊಡಲಾಯಿತು.
ಸಂಸದ ನಳಿನ್ ಕುಮಾರ್ ಕಟೀಲು, ಮಾಜಿ ಸಚಿವ ರಾದ ಯು.ಟಿ. ಖಾದರ್, ಬಿ. ರಮಾನಾಥ ರೈ, ಮಾಜಿ ಶಾಸಕರಾದ ಕೆ. ಪದ್ಮನಾಭ ಕೊಟ್ಟಾರಿ, ಎ. ರುಕ್ಮಯ ಪೂಜಾರಿ, ಜೆ.ಆರ್. ಲೋಬೊ, ಕ್ಯಾ| ಗಣೇಶ್ ಕಾರ್ಣಿಕ್, ಅಮರನಾಥ ಶೆಟ್ಟಿ ಸಹಿತ ಜನಪ್ರತಿನಿಧಿಗಳು, ಬಿಜೆಪಿ ಜಿಲ್ಲಾ ವಕ್ತಾರ ಕೆ. ಹರಿಕೃಷ್ಣ ಬಂಟ್ವಾಳ, ಧಾರ್ಮಿಕ ಮತ್ತು ಸಾಂಸ್ಕೃತಿಕ ಪ್ರಮುಖರಾದ ಶ್ರೀಕ್ಷೇತ್ರ ಧರ್ಮಸ್ಥಳದ ಡಿ. ಹಷೇìಂದ್ರ ಕುಮಾರ್, ಮೂಡುಬಿದಿರೆ ಆಳ್ವಾಸ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಡಾ| ಮೋಹನ ಆಳ್ವ, ಡಾ| ವಿವೇಕ ರೈ, ಹರಿಕೃಷ್ಣ ಪುನರೂರು, ಡಾ| ಪ್ರಭಾಕರ ಜೋಶಿ, ಡಾ| ಕೆ. ಚಿನ್ನಪ್ಪ ಗೌಡ, ಪ್ರದೀಪ ಕುಮಾರ್ ಕಲ್ಕೂರ, ಎ.ಸಿ. ಭಂಡಾರಿ, ರಾ.ಸ್ವ. ಸಂಘದ ಮಂಗಳೂರು ವಿಭಾಗ ಸಂಘ ಚಾಲಕ ಗೋಪಾಲ ಚೆಟ್ಟಿಯಾರ್, ಸ್ವಾತಂತ್ರ ಹೋರಾಟಗಾರ ಶ್ಯಾಮರಾಯ ಆಚಾರ್ಯ ಸಹಿತ ಇತರರು ಅಂತಿಮ ನಮನ ಮಾಡಿದರು.
ಸಂತಾಪ
ಆಳ್ವರ ನಿಧನಕ್ಕೆ ಉಡುಪಿ ಪೇಜಾವರ ಮಠಾಧೀಶ ಶ್ರೀ ವಿಶ್ವೇಶತೀರ್ಥ ಸ್ವಾಮೀಜಿ, ಬಂಟ್ವಾಳ ಶಾಸಕ ರಾಜೇಶ್ ನಾೖಕ್ ಉಳಿಪ್ಪಾಡಿಗುತ್ತು, ರಾಜ್ಯ ಬಿಜೆಪಿ ಕಾರ್ಯದರ್ಶಿ ತಿಂಗಳೆ ವಿಕ್ರಮಾರ್ಜುನ ಹೆಗ್ಡೆ ಸಂತಾಪ ಸೂಚಿಸಿದ್ದಾರೆ.
ಅಂತ್ಯಕ್ರಿಯೆ ಸಂದರ್ಭ ಕದಿನ ಒಡೆಯದಂತೆ, ಬಂಟ್ವಾಳ ಬಂಟರ ಭವನದಲ್ಲಿ ತನ್ನ ಉತ್ತರಕ್ರಿಯೆಗಳನ್ನು ನಡೆಸುವಂತೆ ಆಳ್ವ ಅವರು ಸಾವಿನ ಪೂರ್ವದಲ್ಲಿ ಸೂಚನೆ ನೀಡಿದ್ದಾಗಿ ಕುಟುಂಬ ಮೂಲಗಳು ತಿಳಿಸಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Relationships: ಸಂಬಂಧಗಳಲ್ಲಿ ಮಾಯವಾದ ಸಹಿಷ್ಣುತೆ : ಸಹಿಷ್ಣು ಗುಣದಿಂದಲೇ ಬಾಂಧವ್ಯದ ಪ್ರಗತಿ
Sirsi: ಹೃದಯಾಘಾತದಿಂದ ಮಾರಿಕಾಂಬಾ ಸರಕಾರಿ ಪ್ರೌಢ ಶಾಲೆಯ ಉಪ ಪ್ರಾಂಶುಪಾಲ ನಿಧನ
Fire Temple: ಅಜರ್ಬೈಜಾನ್‌ನಲ್ಲಿದೆ ಪುರಾತನ ಹಿಂದೂ ದೇವಾಲಯ-ಬೆಂಕಿಯುಗುಳುವ ಸಪ್ತರಂಧ್ರಗಳು
Udupi: ಬಳ್ಳಾರಿ ಬಾಣಂತಿಯರ ಸಾವು ಪ್ರಕರಣ ಹಗುರವಾಗಿ ಪರಿಗಣಿಸಿಲ್ಲ: ಲಕ್ಷ್ಮೀ ಹೆಬ್ಬಾಳ್ಕರ್
Bengaluru: ಪತ್ನಿಗೆ ಬೆಂಕಿ ಹಚ್ಚಿ ತಾನೂ ಆತ್ಮಹತ್ಯೆಗೆ ಯತ್ನಿಸಿದ ಪತಿ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.