ಬಂಟ್ವಾಳ: ಕಂಟೈನರ್ ಲಾರಿಗೆ ಗ್ಯಾಸ್ ಟ್ಯಾಂಕರ್ ಡಿಕ್ಕಿ. ಸಂಚಾರ ಅಸ್ತವ್ಯಸ್ಥ
Team Udayavani, Feb 3, 2021, 10:12 PM IST
ಬಂಟ್ವಾಳ: ಗ್ಯಾಸ್ ಟ್ಯಾಂಕರ್ ವೊಂದು ಕಂಟೈನರ್ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಗ್ಯಾಸ್ ಟ್ಯಾಂಕರ್ ನ ವೀಲ್ ತುಂಡಾಗಿ ರಸ್ತೆ ಮಧ್ಯದಲ್ಲಿ ಬಿದ್ದಿದ್ದು, ಕೆಲಹೊತ್ತು ರಾಷ್ಟ್ರೀಯ ಹೆದ್ದಾರಿ ಸಂಚಾರ ಅಸ್ತವ್ಯಸ್ತಗೊಂಡ ಘಟನೆ ಕಲ್ಲಡ್ಕದಲ್ಲಿ ನಡೆದಿದೆ .
ಬೆಂಗಳೂರು ಕಡೆಯಿಂದ ಬರುತ್ತಿದ್ದ ಗ್ಯಾಸ್ ಟ್ಯಾಂಕರ್ ಮಂಗಳೂರು ಕಡೆಯಿಂದ ಬರುತ್ತಿದ್ದ ಕಂಟೈನರ್ ಲಾರಿಗೆ ಡಿಕ್ಕಿ ಹೊಡೆದಿದ್ದು, ಘಟನೆಯಲ್ಲಿ ಗ್ಯಾಸ್ ಟ್ಯಾಂಕರ್ ಚಾಲಕನಿಗೆ ಅಲ್ಪಸ್ವಲ್ಪ ಗಾಯಗಳಾಗಿವೆ.
ಅಪಘಾತದಲ್ಲಿ ಕಂಟೈನರ್ ಲಾರಿಯ ಡೀಸಲ್ ಟ್ಯಾಂಕ್ ಒಡೆದು ಸಾವಿರಾರು ರೂ ನಷ್ಟ ಸಂಭವಿಸಿದೆ. ಗ್ಯಾಸ್ ಟ್ಯಾಂಕರ್ ಚಾಲಕನ ಅತೀ ವೇಗ ಮತ್ತು ಅಜಾಗರೂಕತೆಯ ಚಾಲನೆಯೇ ಘಟನೆಗೆ ಕಾರಣ ಎನ್ನಲಾಗಿದೆ.
ಇದನ್ನೂ ಓದಿ:ಅಂಡಮಾನ್ ಕೋವಿಡ್ ಮುಕ್ತ ಪ್ರದೇಶ? ಹೊಸದಾಗಿ ದೃಢವಾಗದ ಸೋಂಕು ಪ್ರಕರಣ
ಅಪಘಾತ ನಡೆಯುವ ಸಂದರ್ಭದಲ್ಲಿ ಎರಡು ಬೈಕ್ ಮತ್ತು ಒಂದು ಕಾರು ಸ್ವಲ್ಪ ದೂರದಲ್ಲೇ ಇತ್ತು, ಅದೃಷ್ಟವಶಾತ್ ಬೈಕ್ ಮತ್ತು ಕಾರಿನಲ್ಲಿದ್ದವರು ಅಪಾಯದಿಂದ ಪಾರಾಗಿದ್ದಾರೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.
ವಿರುದ್ಧ ದಿಕ್ಕಿನಲ್ಲಿ ಅತೀ ವೇಗದಿಂದ ಬರುತ್ತಿದ್ದ ಗ್ಯಾಸ್ ಟ್ಯಾಂಕರ್ ಅನ್ನು ನೋಡಿದ ಬೈಕ್ ಸವಾರರು ಮತ್ತು ಕಾರು ಚಾಲಕ ರಸ್ತೆಯಿಂದ ಬದಿಗೆ ಸರಿದುಕೊಂಡಿದ್ದರಿಂದ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಆದರೆ ಆ ಬಳಿಕ ಎದುರಿನಿಂದ ಬರುತ್ತಿದ್ದ ಕಂಟೈನರ್ ಲಾರಿಗೆ ಡಿಕ್ಕಿಯಾಗಿ ಲಾರಿ ರಸ್ತೆ ಮಧ್ಯೆ ನಿಂತಿತ್ತು ಎನ್ನಲಾಗಿದೆ.
ಈ ಘಟನೆಯಿಂದ ಸಂಚಾರಕ್ಕೆ ಅಡಚಣೆ ಯಾಗಿದ್ದು. ಬಂಟ್ವಾಳ ಟ್ರಾಫಿಕ್ ಎಸ್.ಐ .ರಾಜೇಶ್ ಕೆವಿ. ಅವರು ಲಾರಿಯನ್ನು ಕ್ರೇನ್ ನ ಸಹಾಯದಿಂದ ರಸ್ತೆಯ ಮಧ್ಯ ದಿಂದ ಬದಿಗೆ ಸರಿಸುವ ಕಾರ್ಯಚರಣೆ ಮಾಡಿಸುವ ಮೂಲಕ ಸುಗಮ ಸಂಚಾರಕ್ಕೆ ಅವಕಾಶ ಕಲ್ಪಿಸಿಕೊಟ್ಟರು.
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.