ಆರೋಗ್ಯ ರಕ್ಷಣೆಗೆ ಸರಕಾರದ ವಿಶೇಷ ಒತ್ತು: ಮಠಂದೂರು
ಪುತ್ತೂರು: ತಾ| ಮಟ್ಟದ ಆರೋಗ್ಯ ಮೇಳ
Team Udayavani, Apr 19, 2022, 9:58 AM IST
ಪುತ್ತೂರು: ಆಯುಷ್ಮಾನ್ ಭಾರತ, ಆರೋಗ್ಯ ಕರ್ನಾಟಕ, ಸುರಕ್ಷಾ ಯೋಜನೆಗಳಂತಹ ಹಲವಾರು ಯೋಜನೆಗಳ ಮೂಲಕ ಜನರ ಆರೋಗ್ಯದ ರಕ್ಷಣೆಗೆ ಸರಕಾರ ವಿಶೇಷ ಒತ್ತು ನೀಡುತ್ತಿದೆ ಎಂದು ಶಾಸಕ ಸಂಜೀವ ಮಠಂದೂರು ಹೇಳಿದರು.
ಅವರು ಸೋಮವಾರ ದ.ಕ.ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ವತಿಯಿಂದ ತಾಲೂಕು ಆರೋಗ್ಯಾಧಿಕಾರಿಗಳ ಕಚೇರಿ, ತಾಲೂಕು ಆಡಳಿತ, ಸಾರ್ವಜನಿಕ ಆಸ್ಪತ್ರೆ, ಯೇನಪೊಯ ವೈದ್ಯಕೀಯ ಕಾಲೇಜು ಮಂಗಳೂರು ಹಾಗೂ ಸುದಾನ ವಿದ್ಯಾಸಂಸ್ಥೆ ಪುತ್ತೂರು ಇವುಗಳ ಸಹಯೋಗದಲ್ಲಿ ನೆಹರೂನಗರ ಸುದಾನ ವಸತಿ ಶಾಲೆಯ ವಠಾರದಲ್ಲಿ ನಡೆದ ತಾಲೂಕು ಮಟ್ಟದ ಆರೋಗ್ಯ ಮೇಳ ಉದ್ಘಾಟಿಸಿ ಮಾತನಾಡಿದರು.
ಉಪವಿಭಾಗದ ಸಹಾಯಕ ಕಮಿಷನರ್ ಗಿರೀಶ್ ನಂದನ್, ನಗರಸಭಾ ಉಪಾಧ್ಯಕ್ಷೆ ವಿದ್ಯಾ ಆರ್. ಗೌರಿ, ತಹಶೀಲ್ದಾರ್ ಟಿ. ರಮೇಶ್ ಬಾಬು, ತಾ.ಪಂ. ಕಾರ್ಯನಿರ್ವಹಣಾಧಿಕಾರಿ ನವೀನ್ ಕುಮಾರ್ ಭಂಡಾರಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ|ಕಿಶೋರ್ ಕುಮಾರ್ ಎಂ., ಸುದಾನ ವಸತಿಯುತ ಶಾಲೆಯ ಸಂಚಾಲಕ ವಿಜಯ ಹಾರ್ವಿನ್ ಮಾತನಾಡಿದರು.
ನಗರಸಭಾ ಪೌರಾಯುಕ್ತ ಮಧು ಎಸ್. ಮನೋಹರ್, ಆರೋಗ್ಯ ಇಲಾಖೆಯ ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ|ಜಗದೀಶ್, ಜಿಲ್ಲಾ ಆರ್ ಸಿಎಚ್ ಅಧಿಕಾರಿ ಡಾ| ರಾಜೇಶ್, ಜಿಲ್ಲಾ ಕ್ಷಯ ರೋಗ ನಿಯಂತ್ರಣಾಧಿಕಾರಿ ಹಾಗೂ ಪುತ್ತೂರು ನೋಡಲ್ ಅಧಿಕಾರಿ ಡಾ| ಬದ್ರುದ್ದೀನ್ ಉಪಸ್ಥಿತರಿದ್ದರು.
ಕಾರ್ಯಕ್ರಮ ಉದ್ಘಾಟನೆಗೆ ಮೊದಲು ಮಂಜಲ್ಪಡ್ಡು ವೃತ್ತದಿಂದ ಸುದಾನ ಶಾಲೆಯ ತನಕ ಆರೋಗ್ಯ ಜಾಗೃತಿ ಜಾಥಾ ನಡೆಯಿತು. ತಾಲೂಕು ಆರೋಗ್ಯಾಧಿಕಾರಿ ಡಾ| ದೀಪಕ್ ರೈ ಸ್ವಾಗತಿಸಿದರು. ಸರ್ವೆ ಪ್ರಾಥಮಿಕ ಕೇಂದ್ರದ ವೈದ್ಯಾಧಿಕಾರಿ ಡಾ| ನಮಿತಾ ನಾಯಕ್ ವಂದಿಸಿದರು.
ಆರೋಗ್ಯ ಮೇಳದಲ್ಲಿ ಕಾಯಿಲೆಗಳ ಉಚಿತ ವೈದ್ಯಕೀಯ ತಪಾಸಣೆ ಮತ್ತು ಔಷಧ ವಿತರಣೆ, ರಾಷ್ಟ್ರೀಯ ಆರೋಗ್ಯ ಕಾರ್ಯಕ್ರಮಗಳ ಬಗ್ಗೆ ಅರಿವು, ಪ್ರಚಾರ ಹಾಗೂ ಆರೋಗ್ಯ ಮಾಹಿತಿ ಮತ್ತು ಶಿಕ್ಷಣ, ಅಗತ್ಯವಿರುವ ರೋಗಿಗಳಿಗೆ ಪ್ರಯೋಗಾಲಯ ತಪಾಸಣೆ ವ್ಯವಸ್ಥೆ ಮಾಡಲಾಗಿತ್ತು. ಸ್ಥಳದಲ್ಲಿಯೇ ಆಯುಷ್ಮಾನ್ ಭಾರತ್ ಆರೋಗ್ಯ ಕಾರ್ಡ್ ಮಾಡಿ ಕೊಡಲಾಯಿತು.
ನಗರಸಭೆಯಿಂದ ಸಹಕಾರ
ಅಧ್ಯಕ್ಷತೆ ವಹಿಸಿದ್ದ ಪುತ್ತೂರು ನಗರಸಭಾ ಅಧ್ಯಕ್ಷ ಕೆ. ಜೀವಂಧರ್ ಜೈನ್ ಅವರು ಮಾತನಾಡಿ, ಜನರ ಆರೋಗ್ಯವನ್ನು ಕಾಪಾಡುವ ನಿಟ್ಟಿನಲ್ಲಿ ಉಚಿತ ಆರೋಗ್ಯ ಮೇಳಗಳು ತುಂಬಾ ಪ್ರಯೋಜನಕಾರಿಯಾಗಿದೆ. ಇಂತಹ ಕಾರ್ಯಕ್ರಮಗಳನ್ನು ನಗರಸಭಾ ವ್ಯಾಪ್ತಿಯಲ್ಲಿ ಆಯೋಜನೆ ಮಾಡಿದಲ್ಲಿ ನಗರಸಭೆಯ ವತಿಯಿಂದ ಎಲ್ಲ ರೀತಿಯ ಸಹಕಾರ ನೀಡಲಾಗುವುದು ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.