ಸಾರ್ವಜನಿಕರು ಸ್ವಯಂಪ್ರೇರಿತ ಕರ್ಫ್ಯೂಗೆ ಒಳಪಡಬೇಕು, ಅಗತ್ಯವೆನಿಸಿದರೆ ಕಠಿಣ ಕ್ರಮ: ಕೋಟ


Team Udayavani, Apr 26, 2020, 5:11 PM IST

ಸಾರ್ವಜನಿಕರು ಸ್ವಯಂಪ್ರೇರಿತ ಕರ್ಫ್ಯೂಗೆ ಒಳಪಡಬೇಕು, ಅಗತ್ಯವೆನಿಸಿದರೆ ಕಠಿಣ ಕ್ರಮ: ಕೋಟ

ಬಂಟ್ವಾಳ:  ಕೋವಿಡ್-19 ಪ್ರಕರಣಗಳು  ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ದಿನೇ ದಿನೇ ಹೆಚ್ಚುತ್ತಿರುವ ಕಾರಣ ಅಗತ್ಯವಾದರೆ ಜಿಲ್ಲೆಯಲ್ಲಿ ಕಠಿಣ ಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ  ಸೂಚಿಸಿದ್ದಾರೆ

ಬಂಟ್ವಾಳ ತಾಲ್ಲೂಕಿನ ಕಸಬಾ  ಪ್ರದೇಶದಲ್ಲಿ ಹಾಗೂ ಗ್ರಾಮೀಣ ಪ್ರದೇಶದಲ್ಲಿ ಕೋವಿಡ್-19 ಸೋಂಕು ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಭಾನುವಾರ ಸಚಿವರು ಹಾಗೂ ಸಂಸದರ ನೇತೃತ್ವದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳ ಸಭೆ ತುರ್ತು ಸಭೆ ಬಂಟ್ವಾಳ ಪ್ರವಾಸಿ ಮಂದಿರದಲ್ಲಿ ನಡೆಯಿತು.

ಬಂಟ್ವಾಳದಲ್ಲಿ ಮೇ 3ರವರೆಗೆ ಲಾಕ್ ಡೌನ್‌ನಲ್ಲಿ ಯಾವುದೇ ವಿನಾಯಿತಿ ಇಲ್ಲ.  ಕಸಬಾ ಹೋಬಳಿಯ 92 ಮನೆಗಳು ಹಾಗೂ ನರಿಕೊಂಬು ಗ್ರಾಮಪಂಚಾಯತ್ ವ್ಯಾಪ್ತಿಯ 213 ಮನೆಗಳಲ್ಲಿ ಪ್ರತಿನಿತ್ಯ ಆಶಾ ಕಾರ್ಯಕರ್ತರು ಹಾಗೂ ಆರೋಗ್ಯ ಸಿಬ್ಬಂದಿಗಳು ಭೇಟಿಕೊಟ್ಟು ವರದಿ ನೀಡಬೇಕು. ಬಂಟ್ವಾಳ ಕಸಬಾ ಹಾಗೂ ನರಿಕೊಂಬು ಗ್ರಾಮಪಂಚಾಯತ್ ವ್ಯಾಪ್ತಿಯಲ್ಲಿ ಲಾಕ್ ಡೌನ್ ನಲ್ಲಿ ಯಾವುದೇ ವಿನಾಯಿತಿ ಇಲ್ಲ ಎಂದು ಸಚಿವರು ಸ್ಪಷ್ಟಪಡಿಸಿದರು.

ದ.ಕ.  ಜಿಲ್ಲೆಯಲ್ಲಿ ಒಟ್ಟು 19 ಕೋವಿಡ್ ಪ್ರಕರಣಗಳು ವರದಿಯಾಗಿದ್ದು ಇದರಲ್ಲಿ12 ಪ್ರಕರಣಗಳಲ್ಲಿ ಆಸ್ಪತ್ರೆಯಿಂದ ಬಿಡುಗಡೆಯಾಗಿರುತ್ತಾರೆ.  ಇಬ್ಬರು ಸಾವನ್ನಪ್ಪಿದ್ದು, ಉಳಿದ ಪ್ರಕರಣಗಳಲ್ಲಿ ನಿಗಾವಹಿಸಲಾಗಿದೆ ಎಂದು ಸಚಿವರು ತಿಳಿಸಿದರು.

ಇತ್ತೀಚೆಗೆ ಮೃತಪಟ್ಟ ಸೋಂಕಿತೆ ಮೊದಲು ಚಿಕಿತ್ಸೆ ಪಡೆದಿದ್ದ ಖಾಸಗಿ ಆಸ್ಪತ್ರೆಯ 198 ಸಿಬ್ಬಂದಿಗಳು ಹಾಗೂ ಇನ್ನಿತರರನ್ನು ವೈದ್ಯಕೀಯ ಪರೀಕ್ಷೆಗೊಳಪಡಿಸಲಾಗಿದೆ. ಈ ಪೈಕಿ 49 ಪ್ರಕರಣಗಳ ವರದಿ ಬಂದಿದ್ದು, 48 ನೆಗೆಟಿವ್ ಒಂದು ಪಾಸಿಟಿವ್ ಆಗಿರುತ್ತದೆ

ಜಿಲ್ಲಾಡಳಿತದ ಪೂರ್ಣ ಕಣ್ಗಾವಲಿನಲ್ಲಿ ಸೋಂಕು ನಿಯಂತ್ರಣ ಮಾಡಲಾಗುತ್ತಿದೆ.  ಸಾರ್ವಜನಿಕರು ಯಾವುದೇ ಕಾರಣಕ್ಕೆ ಘಟನೆಗಳನ್ನು ಲಘುವಾಗಿ ತೆಗೆದುಕೊಳ್ಳದೆ, ಸ್ವಯಂ ಪ್ರೇರಿತ ಕರ್ಫ್ಯೂಗೆ ಒಳಪಡಬೇಕು ಎಂದು ಮನವಿ ಮಾಡಿರುವ ಸಚಿವರು, ಅನಿವಾರ್ಯವಾದರೆ ಕಠಿಣ ಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲಾಧಿಕಾರಿಗಳಿಗೆ ಸೂಚಿಸಿದರು.

ಬಂಟ್ವಾಳ ಕಸಬಾ ಹಾಗೂ ನರಿಕೊಂಬು ಗ್ರಾಮ ಪಂಚಾಯತ್ ವ್ಯಾಪ್ತಿ ಸೀಲ್ಡ್ ಡೌನ್ ಮಾಡಲಾಗಿದ್ದು, ವಿಶೇಷ ಅಧಿಕಾರಿಗಳನ್ನು ನೇಮಕ ಮಾಡಿ ದಿನದ 24 ಗಂಟೆಯೂ ಕಾರ್ಯನಿರ್ವಹಿಸುವ ಕಂಟ್ರೋಲ್ ರೂಮ್ ತೆರೆದು  ಸಾರ್ವಜನಿಕರ ಅನುಕೂಲಕ್ಕೆ  ದೂರವಾಣಿ ಸಂಪರ್ಕ ನೀಡಲಾಗಿದೆ. 11 ಅಧಿಕಾರಿಗಳನ್ನು ಈ ಪ್ರದೇಶದಲ್ಲಿ ಹಗಲು-ರಾತ್ರಿ ಕರ್ತವ್ಯಕ್ಕೆ ನಿಯೋಜಿಸಲಾಗಿದೆ. ಸಾರ್ವಜನಿಕರು ಮನೆಯಲ್ಲಿದ್ದುಕೊಂಡು ಅಗತ್ಯ ಸಾಮಾಗ್ರಿಗಳನ್ನು ತೆಗೆದುಕೊಳ್ಳಬಹುದು. ದಿನಸಿ ಸಾಮಗ್ರಿ, ಹಾಲು ದಿನಪತ್ರಿಕೆ, ಔಷಧಿ,  ಊಟೋಪಚಾರ ತರಕಾರಿ ಹಣ್ಣು ಮಾಂಸಗಳನ್ನು ಸಾರ್ವಜನಿಕರ ಬೇಡಿಕೆಯಂತೆ ಒದಗಿಸಲು ಹಾಗೂ ಬ್ಯಾಂಕಿಂಗ್ ಸೇವೆ ಗ್ಯಾಸ್  ಇನ್ನಿತರ ಸೇವೆ ತುರ್ತು ಸೇವೆಗಳನ್ನು ಒದಗಿಸಲು ಅಧಿಕಾರಿಗಳ ತಂಡ ರಚನೆ ಮಾಡಲಾಗಿದೆ ಎಂದು ಕೋಟ‌ ಶ್ರೀನಿವಾಸ ಪೂಜಾರಿ ಹೇಳಿದರು.

ಸಂಸದ ನಳಿನ್ ಕುಮಾರ್ ಕಟೀಲ್ ಮಾತನಾಡಿ ಅಧಿಕಾರಿಗಳಿಗೆ ಮಾರ್ಗದರ್ಶನ ನೀಡಿದರು. ಅಧಿಕಾರಿಗಳು ಕಟ್ಟೆಚ್ಚರದಿಂದ ಕಾರ್ಯನಿರ್ವಹಿಸಬೇಕು, ವಲಸೆ ಕಾರ್ಮಿಕರು ಹಾಗೂ ಜಿಲ್ಲೆಯ ಸಮಸ್ಯೆಗಳಿಗೆ ತಕ್ಷಣ ಪರಿಹರಿಸಬೇಕು. ಆಹಾರಗಳ ಪೂರೈಕೆ ಸೇರಿದಂತೆ ಸ್ಥಳೀಯ ಶಾಸಕರಿಗೆ ಸಹಕಾರ ನೀಡಲಿದೆ ಎಂದು ಅವರು ಹೇಳಿದರು.

ಸಭೆಯಲ್ಲಿ ಜಿಲ್ಲಾಧಿಕಾರಿ ಸಿಂಧೂ ರೂಪೇಶ್, ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು, ತಹಶೀಲ್ದಾರ್ ರಶ್ಮಿ, ತಾಲೂಕು ಮಟ್ಟದ ಅಧಿಕಾರಿಗಳು  ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ-104: “ಅಂತಃಸ್ಫೂರ್ತಿ’ಯಿಂದ ತೊಂದರೆ ಇದಿರಿಸುವ ಶಕ್ತಿ

Udupi: ಗೀತಾರ್ಥ ಚಿಂತನೆ-104: “ಅಂತಃಸ್ಫೂರ್ತಿ’ಯಿಂದ ತೊಂದರೆ ಇದಿರಿಸುವ ಶಕ್ತಿ

aus-rohit

Australia: ಪರ್ತ್‌ಗೆ ಆಗಮಿಸಿದ ರೋಹಿತ್‌ ಶರ್ಮ

Pro Kabaddi League: ಬೆಂಗಾಲ್‌ ವಾರಿಯರ್ ಮೇಲೆ ಪುಣೇರಿ ಪಲ್ಟಾನ್‌ ಸವಾರಿ

Pro Kabaddi League: ಬೆಂಗಾಲ್‌ ವಾರಿಯರ್ ಮೇಲೆ ಪುಣೇರಿ ಪಲ್ಟಾನ್‌ ಸವಾರಿ

Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿ‌ಮ ಬಂಗಾಲ ಗವರ್ನರ್‌

Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿ‌ಮ ಬಂಗಾಲ ಗವರ್ನರ್‌

Uttar Pradesh: ತಪ್ಪು ದಾರಿ ತೋರಿದ ಜಿಪಿಎಸ್‌: ನದಿಗೆ ಬಿದ್ದು ಮೂವರ ಸಾವು

Uttar Pradesh: ತಪ್ಪು ದಾರಿ ತೋರಿದ ಜಿಪಿಎಸ್‌: ನದಿಗೆ ಬಿದ್ದು ಮೂವರ ಸಾವು

Jharkhand: ಬಿಜೆಪಿ ಗೆದ್ದೇ ಗೆಲ್ಲುತ್ತದೆ ಎಂದಿಲ್ಲ: ಅಸ್ಸಾಂ ಸಿಎಂ ಬಿಸ್ವಾ ವಾದ

Jharkhand: ಬಿಜೆಪಿ ಗೆದ್ದೇ ಗೆಲ್ಲುತ್ತದೆ ಎಂದಿಲ್ಲ: ಅಸ್ಸಾಂ ಸಿಎಂ ಬಿಸ್ವಾ ವಾದ

Darshan (3)

Renukaswamy ಹ*ತ್ಯೆ ಸ್ಥಳದಲ್ಲಿ ದರ್ಶನ್‌ ಇದ್ದ ಚಿತ್ರ ಲಭ್ಯ: ಪರಂ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Accident-logo

Sulya: ನಿಲ್ಲಿಸಿದ್ದ ಕಾರಿಗೆ ಬಸ್‌ ಢಿಕ್ಕಿ; ಜಖಂ

Power-Cable

Bantwala: ಬಿ.ಸಿ.ರೋಡಿನಲ್ಲಿ ರೈಲ್ವೇಯ ವಿದ್ಯುತ್‌ ಕೇಬಲ್‌ ಕಳವು

Stock-liqer

Sulya: ಆರಂತೋಡು: ಚಿಕನ್‌ ಸೆಂಟರ್‌ಗೆ ದಾಳಿ; ಮದ್ಯ ಅಕ್ರಮ ದಾಸ್ತಾನು ಪತ್ತೆ

Bantwala-Crime

Bantwala: ತುಂಬೆ ದೇವಸ್ಥಾನ ಕಳ್ಳತನ ಪ್ರಕರಣ: ಮೂವರು ಖದೀಮರ ಸೆರೆ

Kukke-Subhramanaya

Subhramanya: ಕುಕ್ಕೆ ಶ್ರೀಸುಬ್ರಹ್ಮಣ್ಯ ದೇವಸ್ಥಾನದ ಸೇವೆಗಳಲ್ಲಿ ವ್ಯತ್ಯಯ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

police

Gangolli: ಕ್ರಿಮಿನಲ್‌ ಹಿನ್ನೆಲೆ: ಮೂವರ ಮೇಲೆ ಪ್ರಕರಣ ದಾಖಲು

theft-temple

Koteshwara: ಶೋ ರೂಮ್‌ನಲ್ಲಿ ಕಳವಿಗೆ ಯತ್ನ

Accident-logo

Sulya: ನಿಲ್ಲಿಸಿದ್ದ ಕಾರಿಗೆ ಬಸ್‌ ಢಿಕ್ಕಿ; ಜಖಂ

Power-Cable

Bantwala: ಬಿ.ಸಿ.ರೋಡಿನಲ್ಲಿ ರೈಲ್ವೇಯ ವಿದ್ಯುತ್‌ ಕೇಬಲ್‌ ಕಳವು

police

Udupi: ಆದಿ ಉಡುಪಿ: ಜುಗಾರಿ ಅಡ್ಡೆಗೆ ಪೊಲೀಸ್‌ ದಾಳಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.