Subramanya ಮನೆಗೆ ನುಗ್ಗಿ ಮಹಿಳೆಯ ಸರ ಸೆಳೆದು ಪರಾರಿ
Team Udayavani, Mar 5, 2024, 12:38 AM IST
ಸುಬ್ರಹ್ಮಣ್ಯ: ಹಾಡಹಗಲೇ ಮನೆಗೆ ನುಗ್ಗಿ ಮಹಿಳೆಯ ಕುತ್ತಿಗೆಯಿಂದ ಚಿನ್ನದ ಚೈನ್ ಕಸಿದು ಪರಾರಿಯಾಗಿರುವ ಘಟನೆ ಸುಬ್ರಹ್ಮಣ್ಯ ಠಾಣಾ ವ್ಯಾಪ್ತಿಯ ಪಂಜ ಸಮೀಪದ ಡಬಲ್ ಕಟ್ಟೆ ಎಂಬಲ್ಲಿ ಮಾ. 4ರಂದು ನಡೆದಿದೆ.
ಪಂಜ ಸಮೀಪದ ಪಂಬೆತ್ತಾಡಿ ಗ್ರಾಮದ ಡಬಲ್ ಕಟ್ಟೆ ಸೀತಮ್ಮ ಅವರು ಮನೆಗೆ ಬಾಗಿಲು ಹಾಕಿ ಪಕ್ಕದ ಮನೆಗೆ ಹೋಗಿದ್ದರು. ಇದೇ ವೇಳೆ ಮನೆಯೊಳಗೆ ಸದ್ದು ಕೇಳಿತ್ತೆಂದು ಮನೆಗೆ ಬಂದಾಗ ಇಬ್ಬರು ಕಳ್ಳರು ಮನೆಯೊಳಗೆ ಹಿಂದಿನ ಬಾಗಿಲಿನಿಂದ ನುಗ್ಗಿದ್ದು ಕಂಡು ಬಂತು. ಸೀತಮ್ಮ ಅವರಿಗೆ ಜೀವ ಬೆದರಿಕೆ ಒಡ್ಡಿ ದೂಡಿ ಹಾಕಿ ಅವರ ಕುತ್ತಿಗೆಯಲ್ಲಿದ್ದ ಚಿನ್ನದ ಚೈನ್ ಕಸಿದು ಪರಾರಿಯಾಗಿದ್ದಾರೆ. ಅವರು ಬೈಕ್ನಲ್ಲಿ ಬಂದಿದ್ದರು ಎಂದು ಅಂದಾಜಿಸಲಾಗಿದೆ.
ಸ್ಥಳಕ್ಕೆ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ, ಪುತ್ತೂರು ಡಿವೈಎಸ್ಪಿ, ಸುಳ್ಯ ವೃತ್ತ ನಿರೀಕ್ಷಕರು, ಸುಬ್ರಹ್ಮಣ್ಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಸುಬ್ರಹ್ಮಣ್ಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬ್ಯಾಟರಿಗಳ ಕಳವು
ಸುಬ್ರಹ್ಮಣ್ಯ: ಇಲ್ಲಿನ ವಿದ್ಯುತ್ ವಿತರಣ ಕೇಂದ್ರದ ಕಚೇರಿಯಲ್ಲಿ ಇರಿಸಲಾಗಿದ್ದ ನಿಷ್ಕ್ರಿಯ ಬ್ಯಾಟರಿಗಳು ಕಳವಾಗಿರುವುದು ಮಾ. 1ರಂದು ಬೆಳಕಿಗೆ ಬಂದಿದೆ. ಅವುಗಳ ಮೌಲ್ಯ 24 ಸಾವಿರ ರೂ. ಎಂದು ಅಂದಾಜಿಸಲಾಗಿದೆ. ಸುಬ್ರಹ್ಮಣ್ಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು
Allu Arjun: ನಟ ಅಲ್ಲು ಅರ್ಜುನ್ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ
Malpe: ಮನೆ ಮನೆಗಳಲ್ಲಿ ಕ್ಯಾರೋಲ್ ಗಾಯನ
Turkey: ಟೇಕ್ ಆಫ್ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು
87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.