Belthangady ಮಚ್ಚಿನದಲ್ಲಿ ಹೆಜ್ಜೇನು ದಾಳಿ: 6 ಮಂದಿಗೆ ಗಾಯ
Team Udayavani, Feb 25, 2024, 1:05 AM IST
ಬೆಳ್ತಂಗಡಿ: ಇಲ್ಲಿನ ಮಚ್ಚಿನ ಕೊಡಿಯೇಲು ಎಂಬಲ್ಲಿ ಹೆಜ್ಜೇನು ದಾಳಿಯಿಂದ ಆರು ಮಂದಿ ಗಾಯಗೊಂಡಿದ್ದು, ಈ ಪೈಕಿ ಓರ್ವನನ್ನು ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಶುಕ್ರವಾರ ಬೆಳಗ್ಗೆ ಕೊಡಿಯೇಲು ಕೋರೆಗೆ ತಿರುಗುವ ರಸ್ತೆ ಬಳಿಯಲ್ಲಿ ಮರದಲ್ಲಿದ್ದ ಹೆಜ್ಜೇನು ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದವರ ಮೇಲೆ ದಾಳಿ ನಡೆಸಿದೆ.
ಕೋರೆಗೆ ಕೆಲಸಕ್ಕೆ ಹೋಗುತ್ತಿದ್ದ ನಾಲ್ವರು ಕಾರ್ಮಿಕರು, ಬಳ್ಳಮಂಜ ಮೀನು ಮಾರುಕಟ್ಟೆಗೆ ಕೆಲಸಕ್ಕೆ ಬರುತ್ತಿದ್ದ ಯುವಕ ಸಹಿತ ಆರು ಮಂದಿಗೆ ಹೆಜ್ಜೇನು ಕಚ್ಚಿದೆ.
ಈ ಪೈಕಿ ಮೀನು ಮಾರುಕಟ್ಟೆಗೆ ಕೆಲಸಕ್ಕೆ ಬರುತ್ತಿದ್ದವನಿಗೆ ಹೆಚ್ಚು ಗಾಯವಾಗಿದ್ದು, ಆತನನ್ನು ಹೆಚ್ಚಿನ ಚಿಕಿತ್ಸೆಗಾಗಿ ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.