Uppinangady ಹೆಲ್ಮೆಟ್ ಕಳವು: ಕಳ್ಳನ ಬಂಧನ
Team Udayavani, Jan 31, 2024, 12:41 AM IST
ಉಪ್ಪಿನಂಗಡಿ: ಬ್ಯಾಂಕ್ ಶೆಡ್ನಲ್ಲಿ ನಿಲ್ಲಿಸಿದ್ದ ಬೈಕ್ನಲ್ಲಿ ತೂಗು ಹಾಕಿದ್ದ ಹೆಲ್ಮೆಟ್ ಅನ್ನು ಕಳವು ಮಾಡಿರುವ ಬಗ್ಗೆ ಇಲ್ಲಿನ ಸಹಕಾರಿ ವ್ಯವಸಾಯಿಕ ಸಂಘದ ಸಿಬಂದಿ ದೇವರಾಜ್ ಎಚ್. ಯು. ಅವರು ಉಪ್ಪಿನಂಗಡಿ ಪೊಲೀಸರಿಗೆ ದೂರು ನೀಡಿದ್ದಾರೆ.
ಜ.26ರಂದು ಬೆಳಗ್ಗೆ 9.30ಕ್ಕೆ ಸಂಘದ ಶೆಡ್ನಲ್ಲಿ ತನ್ನ ಬೈಕ್ ನಿಲ್ಲಿಸಿ ಕೆಲಸಕ್ಕೆ ಹೋಗಿದ್ದು, ಸಂಜೆ ಬಂದಾಗ ಹೆಲ್ಮೆಟ್ ಕಳವಾಗಿರುವುದು ಕಂಡುಬಂದಿದೆ. ಆ ಬಳಿಕ ಸಂಸ್ಥೆಯ ಸಿಸಿಕೆಮರಾ ಪರಿಶೀಲಿಸಿದಾಗ ವ್ಯಕ್ತಿಯೊಬ್ಬರು ಹೆಲ್ಮೆಟ್ ಕಳವುಗೈದಿರುವುದು ತಿಳಿದು ದೂರು ನೀಡಿದ್ದಾರೆ.
ಜ. 29ರಂದು ಅದೇ ವ್ಯಕ್ತಿ ಮತ್ತೆ ಬ್ಯಾಂಕ್ ವಠಾರಕ್ಕೆ ಬಂದ ವೇಳೆ ಆತನನ್ನು ಬ್ಯಾಂಕ್ ಸಿಬಂದಿ ಹಿಡಿದು ಪೊಲೀಸರಿಗೊಪ್ಪಿಸಿದ್ದಾರೆ. ಮೊದಲು ಕಳ್ಳತನ ಮಾಡಿಲ್ಲ ಎಂದು ವಾದಿಸಿದ್ದರೂ ಆಬಳಿಕ ಒಪ್ಪಿ 9 ಹೆಲ್ಮೆಟ್ಗಳನ್ನು ಪೊಲೀಸರಿಗೆ ಒಪ್ಪಿಸಿರುವುದು ತಿಳಿದುಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Fraud Case: ಗೂಗಲ್ ಪೇ ಮಾಡಿದೆ ಎಂದು ಹೇಳಿ ಮೋಸ
Kokkada: ಯಾತ್ರಾರ್ಥಿಯಿಂದ ಸೌತಡ್ಕ ಕ್ಷೇತ್ರದ ಸಿಬಂದಿ ಮೇಲೆ ಹಲ್ಲೆ
Puttur: ಸ್ಕೂಲ್ ಬಸ್ಗೆ ಢಿಕ್ಕಿಯಾಗುವುದನ್ನು ತಪ್ಪಿಸಿ ಮನೆಗೆ ನುಗ್ಗಿದ ಖಾಸಗಿ ಬಸ್
Puttur: ಕಾರು ಚಾಲಕನಿಗೆ ಮೂರ್ಛೆ ರೋಗ: ಅಪಾಯದಿಂದ ಪಾರು
Shishila:ಮಕ್ಕಳನ್ನು ಶಾಲೆಗೆ ಕಳುಹಿಸುವ ವೇಳೆ ಕಾಡಾನೆ ದಾಳಿ;ಸೊಂಡಿಲಿನಿಂದ ಬೈಕ್ ಕೆಡವಿದ ಆನೆ
MUST WATCH
ಹೊಸ ಸೇರ್ಪಡೆ
BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?
Congress; ಅಧಿವೇಶನಕ್ಕೆ ಮುನ್ನ ಸಂಪುಟಕ್ಕೆ ಸರ್ಜರಿ? ಸಾಧ್ಯತೆಗಳೇನು?
Mahayuti ಗೆಲುವು: ಆ್ಯಕ್ಸಿಸ್ ಮೈ ಇಂಡಿಯಾ, ಚಾಣಕ್ಯ ಸಮೀಕ್ಷೆ ಭವಿಷ್ಯ
High Court: ನಕ್ಸಲ್ ಚಟುವಟಿಕೆ: ಸಾವಿತ್ರಿ ಬಾಡಿ ವಾರಂಟ್ ಮನವಿ ಮರು ಪರಿಶೀಲನೆಗೆ ನಿರ್ದೇಶ
Khalistan; ಕೆನಡಾ ಹಿಂದೂಗಳ ಮೇಲೆ ದಾಳಿ: ಉಗ್ರರ ಹೊಸ ಬೆದರಿಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.