ಪುತ್ತೂರಲ್ಲಿ ಗೃಹರಕ್ಷಕ ದಳ ಗ್ರಾಮಾಂತರ ಘಟಕ: ಚೂಂತಾರು
Team Udayavani, Jul 30, 2018, 1:12 PM IST
ಪುತ್ತೂರು : ಸಾರ್ವಜನಿಕ ವಲಯಕ್ಕೆ ಅನುಕೂಲವಾಗುವ ದೃಷ್ಟಿ ಯಿಂದ ಪುತ್ತೂರಿನಲ್ಲಿ ಗೃಹರಕ್ಷಕ ದಳ ಪುತ್ತೂರು ಗ್ರಾಮಾಂತರ ಘಟಕವನ್ನೂ ವರ್ಷಾಂತ್ಯದೊಳಗೆ ಆರಂಭಿಸುವ ಉದ್ದೇಶವನ್ನು ಹೊಂದಲಾಗಿದೆ ಎಂದು ಕರ್ನಾಟಕ ಗೃಹ ರಕ್ಷಕ ದಳದ ದ.ಕ. ಜಿಲ್ಲಾ ಕಮಾಂಡೆಂಟ್ ಡಾ| ಮುರಳೀ ಮೋಹನ್ ಚೂಂತಾರು ಅವರು ಹೇಳಿದ್ದಾರೆ.
ಗೃಹರಕ್ಷಕ ದಳ ಪುತ್ತೂರು ಘಟಕದ ನೂತನ ಕಚೇರಿಯನ್ನು ರವಿವಾರ ಹಳೆಯ ಪುರಸಭಾ ಕಟ್ಟಡದಲ್ಲಿ ಉದ್ಘಾಟಿಸಿ ಅವರು ಮಾತನಾಡಿದರು. ಪುತ್ತೂರು ಗೃಹರಕ್ಷಕ ದಳವು ಅತ್ಯಂತ ಉತ್ಸಾಹ ಹಾಗೂ ಪ್ರಾಮಾಣಿಕತೆಯಿಂದ ಕಾರ್ಯ ನಿರ್ವಹಿಸುತ್ತಿದೆ. ಹಾಲಿ ಈ ಘಟಕದಲ್ಲಿ 60 ಮಂದಿ ಇದ್ದು, ಇನ್ನು 20 ಸಿಬಂದಿಯನ್ನು ಸೇರಿಸಿಕೊಂಡು ಪುತ್ತೂರು ಗ್ರಾಮಾಂತರ ಘಟಕವನ್ನು ಸಾರ್ವಜನಿಕರಿಗೆ ಪ್ರಯೋಜನವಾಗುವ ದೃಷ್ಟಿಯಿಂದ ಆರಂಭಿಸುವ ಯೋಜನೆ ಹಾಕಿಕೊಳ್ಳಲಾಗಿದೆ. ದ.ಕ. ಜಿಲ್ಲಾ ಗೃಹರಕ್ಷಕ ದಳದಿಂದ ಮೂರನೇ ವರ್ಷ ವನಮಹೋತ್ಸವವನ್ನು ಆಚರಿಸಲಾಗುತ್ತಿದೆ. ಓರ್ವ ಗೃಹ ರಕ್ಷಕನಿಗೆ ಒಂದು ಗಿಡದಂತೆ ಜಿಲ್ಲೆಯಲ್ಲಿ ಒಟ್ಟು 1,000 ಗಿಡಗಳನ್ನು ನೆಟ್ಟು ಪರಿಸರ ಸಂರಕ್ಷಣೆಯ ಜಾಗೃತಿಯನ್ನು ಮೂಡಿಸಲಾಗುತ್ತಿದೆ ಎಂದು ಅವರು ಹೇಳಿದರು.
ವನಮಹೋತ್ಸವ
ವೈದ್ಯ ಡಾ| ಕೃಷ್ಣಪ್ರಸಾದ್ ಅವರು ಗಿಡ ನೆಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಗೃಹರಕ್ಷಕ ದಳ ಪುತ್ತೂರು ಘಟಕಾಧಿಕಾರಿ ಅಭಿಮನ್ಯು ರೈ, ಹಿರಿಯ ಗೃಹರಕ್ಷಕರಾದ ಸಂತೋಷ್ ಕೆ., ಸುದರ್ಶನ್, ಜಗನ್ನಾಥ ಪಿ. ವೇದಿಕೆಯಲ್ಲಿ ಉಪಸ್ಥಿತರಿದ್ದರು. ಗೃಹರಕ್ಷಕರಾದ ಕವಿತಾ ಎಂ.ಎಸ್. ಹಾಗೂ ಕವಿತಾ ಎನ್.ಕೆ. ಪ್ರಾರ್ಥಿಸಿದರು. ಬಾಲಕೃಷ್ಣ ಪೂಜಾರಿ ಸ್ವಾಗತಿಸಿದರು. ಸಂತೋಷ್ ಕೆ. ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Udupi: ಗೀತಾರ್ಥ ಚಿಂತನೆ 143: ದೇಹ-ಆತ್ಮ ಬೇರೆ: ಶ್ರುತಿ ಪ್ರಾಮಾಣ್ಯ
ಹೊಸ ವರ್ಷ: ಕರಾವಳಿಯ ದೇವಸ್ಥಾನಗಳಲ್ಲಿ ಭಕ್ತಸಂದಣಿ
Kasaragod: ವೈದ್ಯಕೀಯ ಕಾಲೇಜು ಆಗಿ ಭಡ್ತಿಗೊಳ್ಳಲಿರುವ ಕಾಸರಗೋಡು ಜಿಲ್ಲಾ ಜನರಲ್ ಆಸ್ಪತ್ರೆ
Ullala; ನರಿಂಗಾನ ದುರಂತ: ಗಾಯಾಳುಗಳಿಗೆ ನಿರಂತರ ಧೈರ್ಯ ತುಂಬುತ್ತಿದ್ದ ಶಿಕ್ಷಕ
ಅರಣ್ಯದಲ್ಲಿ ಹೊಸ ವರ್ಷ ಆಚರಣೆಗೆ ಸಿದ್ಧತೆ: 30 ಮಂದಿ ವಶ, ಮುಚ್ಚಳಿಕೆ ಪಡೆದು ಬಿಡುಗಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.