ಗುಡ್ಡ ಕುಸಿದು ಮನೆ ಸಂಪೂರ್ಣ ನೆಲಸಮ: 6 ಮಂದಿಗೆ ಗಾಯ, ಸಮಯಪ್ರಜ್ಞೆಯಿಂದ ತಪ್ಪಿದ ಭಾರಿ ದುರಂತ
Team Udayavani, Sep 20, 2020, 9:19 AM IST
ವಿಟ್ಲ: ಗುಡ್ಡ ಕುಸಿದು ಮನೆ ಸಂಪೂರ್ಣವಾಗಿ ನೆಲಸಮಗೊಂಡ ಪರಿಣಾಮ ಒಟ್ಟು ಆರು ಮಂದಿ ಗಾಯಗೊಂಡ ಘಟನೆ ಮಂಗಳಪದವು ಸಮೀಪದ ಬನಾರಿ ಬಾಬುಕಟ್ಟೆಯಲ್ಲಿ ಸಂಭವಿಸಿದೆ.
ತರಕಾರಿ ವ್ಯಾಪಾರಿ ಅಬ್ದುಲ್ಲ ಅವರ ಮನೆಯ ಪಕ್ಕದ ಧರೆಯು ಜೋರಾದ ಮಳೆಗೆ ಕುಸಿದು ಮನೆ ಮೇಲೆ ಬಿದ್ದಿದೆ. ಕುಟುಂಬದ ಆರು ಮಂದಿ ಕುಸಿದು ಬಿದ್ದ ಮನೆಯೊಳಗೆ ಸಿಕ್ಕಿಹಾಕಿಕೊಂಡಿದ್ದರು. ತಕ್ಷಣ ಸ್ಥಳೀಯರು ಅವರನ್ನು ರಕ್ಷಿಸಿ, ಆಸ್ಪತ್ರೆಗೆ ದಾಖಲಿಸಿದ್ದಾರೆ.
ಮನೆ ಯಜಮಾನ ಅಬ್ದುಲ್ಲ, ಪತ್ನಿ ಜೋಹಾರ, ಮಕ್ಕಳಾದ ಅರಫಾಝ್, ಇರ್ಪಾನ್, ತಸ್ಲೀಮಾ, ಮಿಶ್ರಿಯಾ ಗಾಯಗೊಂಡಿದ್ದು, ವಿಟ್ಲ ಹಾಗೂ ತುಂಬೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಅಪಾಯದಿಂದ ಪಾರಾಗಿದ್ದಾರೆ.
ಇದನ್ನೂ ಓದಿ: ಉತ್ತರೆಯ ಆರ್ಭಟಕ್ಕೆ ಕರಾವಳಿ ತತ್ತರ: ಭಾರಿ ಮಳೆಗೆ ಹಲವು ಪ್ರದೇಶಗಳು ಜಲಾವೃತ
ಸ್ಥಳೀಯರ ಸಮಯ ಪ್ರಜ್ಞೆಯಿಂದ ಭಾರಿ ದುರಂತ ತಪ್ಪಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Supreme Court; CJI ಡಿ.ವೈ.ಚಂದ್ರಚೂಡ್ ಅವರಿಗೆ ಭಾವನಾತ್ಮಕ ವಿದಾಯ
By Election: ಸಿದ್ದರಾಮಯ್ಯ ಜೈಲಿಗೆ ಹೋಗುವುದು ನಿಶ್ಚಿತ: ಬಿ.ಎಸ್.ಯಡಿಯೂರಪ್ಪ ಭವಿಷ್ಯ
Udupi: ಇಂದ್ರಾಳಿ ರೈಲ್ವೇ ಮೇಲ್ಸೇತುವೆ ಕಾಮಗಾರಿ ಮಗುಚಿ ಬಿದ್ದ ಕ್ರೇನ್; ತಪ್ಪಿದ ಅನಾಹುತ
Udupi: ಬೆಂಬಲ ಬೆಲೆ ಯೋಜನೆಯಡಿ ಭತ್ತ ಖರೀದಿ
Moodbidri: ಆಳ್ವಾಸ್‌ನಲ್ಲಿ ದೀಪಾವಳಿ ಸಂಭ್ರಮ; ಸಂಪ್ರದಾಯ , ಸಂಸ್ಕೃತಿಯ ಅನಾವರಣ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.