ಜಲಸಂಗ್ರಹ: ಮರಳು ಕಟ್ಟ ನಿರ್ಮಾಣಕ್ಕೆ ಸಿದ್ಧತೆ

ಪಯಸ್ವಿನಿ ನದಿ ನೀರಿನ ಹರಿವು ಕ್ಷೀಣ: ಮಿತ ಬಳಕೆ ಅಗತ್ಯ

Team Udayavani, Feb 4, 2020, 4:59 AM IST

pro-27

ನಾಗಪಟ್ಟಣ ಸೇತುವೆ ಬಳಿ ತಾತ್ಕಾಲಿಕ ಮರಳು ಕಟ್ಟ ನಿರ್ಮಾಣ ಮಾಡುವ ಸ್ಥಳ.

ಸುಳ್ಯ: ನಗರಕ್ಕೆ ನೀರೊದಗಿಸುವ ಪಯಸ್ವಿನಿಯಲ್ಲಿ ನೀರಿನ ಹರಿವು ಇಳಿಮುಖಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ನಾಗಪಟ್ಟಣ ಸೇತುವೆ ಬಳಿ ತಾತ್ಕಾಲಿಕ ಮರಳು ಕಟ್ಟ ನಿರ್ಮಾಣಕ್ಕೆ ಸಿದ್ಧತೆಗಳು ಫೆ. 4ರಿಂದ ಆರಂಭಗೊಳ್ಳಲಿವೆ.

ಬಹು ನಿರೀಕ್ಷಿತ cc ನಿರ್ಮಾಣ ಪ್ರಸ್ತಾವನೆ ಅನುಷ್ಠಾನಗೊಳ್ಳದ ಕಾರಣ ನಗರದ ನೀರಿನ ಬವಣೆಗೆ ಪರಿಹಾರ ಕಂಡುಕೊಳ್ಳಲು ಮರಳಿನ ಕಟ್ಟ ಆಶ್ರಯಿಸಲಾಗುತ್ತಿದೆ. ಈ ಬಾರಿ ಡಿಸೆಂಬರ್‌ ತನಕ ಮಳೆ ಇದ್ದ ಕಾರಣ ಫೆಬ್ರವರಿ ಆರಂಭದ ತನಕವೂ ನೀರಿನ ಹರಿವು ಇತ್ತು. ಹಿಂದಿನ ಕೆಲವು ವರ್ಷಗಳಿಗೆ ಹೋಲಿಸಿದರೆ ನದಿ ನೀರಿನ ಮಟ್ಟ ಕೊಂಚ ಉತ್ತಮ ಮಟ್ಟದಲ್ಲೇ ಇದೆ. ಆದರೂ ಬಿಸಿಲಿನ ತೀವ್ರತೆ ಹಿನ್ನೆಲೆಯಲ್ಲಿ ಮರಳು ಕಟ್ಟದ ಮೂಲಕ ನೀರು ಸಂಗ್ರಹಿಸಲು ನ.ಪಂ. ಸಿದ್ಧಗೊಂಡಿದೆ.

4ರಿಂದ 5 ಲಕ್ಷ ರೂ. ವೆಚ್ಚ
ಸುಮಾರು 4ರಿಂದ 5 ಲಕ್ಷ ರೂ. ವೆಚ್ಚದ ಕಾಮಗಾರಿಗೆ ಟೆಂಡರ್‌ ಆಗಿದೆ. ಕಲ್ಲುಮುಟ್ಲು ಪಂಪ್‌ಹೌಸ್‌ ಬಾವಿ ಯಿಂದ ಹೂಳು ಎತ್ತಿ ಟ್ಯಾಂಕ್‌ ಶುದ್ಧೀಕರಣ ನಡೆಸಲಾಗುತ್ತದೆ. ಅನಂತರ 50 ಕೆ.ಜಿ.ಯ ಪ್ಲಾಸ್ಟಿಕ್‌ ಚೀಲಗಳಲ್ಲಿ ಮರಳು ತುಂಬಿಸಿ, ನದಿಯಲ್ಲಿ ಒಂದೂವರೆ ಅಡಿಯಷ್ಟು ಎತ್ತರದಲ್ಲಿ ಮರಳಿನ ಕಟ್ಟ ನಿರ್ಮಾಣಗೊಳ್ಳಲಿದೆ.

ನಗರಕ್ಕೆ ನೀರು
ವರ್ಷದ 365 ದಿನವೂ 24 ತಾಸು ಇಲ್ಲಿಂದ ನಗರಕ್ಕೆ ನೀರು ಪೂರೈಸಲಾಗುತ್ತದೆ. ಕಲ್ಲುಮಟ್ಲು ಪಂಪ್‌ಹೌಸ್‌ ಬಳಿಯಲ್ಲಿ 50 ಎಚ್‌ಪಿಯ 1 ಮತ್ತು 45 ಎಚ್‌ಪಿಯ 2 ಪಂಪ್‌ಗ್ಳಿದ್ದು, ಆ ಮೂಲಕ ನೀರನ್ನು ಸಂಗ್ರಹಿಸಿ ಪಂಪ್‌ಹೌಸ್‌ನಲ್ಲಿರುವ ಬಾವಿಗೆ, ಅಲ್ಲಿಂದ ಅನತಿ ದೂರದಲ್ಲಿರುವ ಶುದ್ಧೀಕರಣ ಘಟಕಕ್ಕೆ ಪೂರೈಕೆಯಾಗುತ್ತದೆ.

ಕಲ್ಲುಮಟ್ಲು ನೀರು ಶುದ್ಧೀಕರಣ ಘಟಕದ ಬಳಿ ಇರುವ 1 ಲಕ್ಷ ಗ್ಯಾಲನ್‌ ಮತ್ತು 50 ಸಾವಿರ ಗ್ಯಾಲನ್‌ ಟ್ಯಾಂಕಿ ಮೂಲಕ ನಗರಕ್ಕೆ ನೀರು ಹರಿದರೆ, ಇನ್ನೊಂದು ಪೈಪ್‌ ಮೂಲಕ ಕುರುಂಜಿಗುಡ್ಡೆ ಟ್ಯಾಂಕಿಗೆ ನೀರು ಹರಿಸಲಾಗುತ್ತದೆ. ಅಲ್ಲಿಂದ ನಗರದ ಮನೆ ಹಾಗೂ ಗೃಹೇತರ ಕಟ್ಟಡಕ್ಕೆ ನಳ್ಳಿ ಸಂಪರ್ಕದ ಮುಖಾಂತರ ನೀರು ಹರಿಸಲಾಗುತ್ತದೆ.

ಕಾಡುತ್ತಿದೆ ನೀರಿನ ಕೊರತೆ
2011ರ ಜನಗಣತಿ ಆಧಾರದಲ್ಲಿ ನಗರದ ಜನಸಂಖ್ಯೆ 19,958. ಅದೀಗ 25 ಸಾವಿರ ದಾಟಿರಬಹುದು. ದಿನಕ್ಕೆ ನಗರಕ್ಕೆ ಬೇಕಾದ ನೀರಿನ ಪ್ರಮಾಣ 1.69 ಎಂ.ಎಲ್‌.ಡಿ. ಓರ್ವ ವ್ಯಕ್ತಿಗೆ ದಿನಕ್ಕೆ 135 ಲೀ. ನೀರು ಬೇಕಿದ್ದು, ಸದ್ಯ 90 ಲೀಟರ್‌ ಪೂರೈಸಲಾಗುತ್ತಿದೆ. ದಿನಕ್ಕೆ ಒಬ್ಬರಿಗೆ 45 ಲೀ. ನೀರಿನ ಕೊರತೆ ಇದ್ದು, ಬೇಸಗೆಯಲ್ಲಿ ಇದರ ಪ್ರಮಾಣ ಇನ್ನಷ್ಟು ಹೆಚ್ಚಾಗುತ್ತದೆ.

ಇಂದಿನಿಂದ ಆರಂಭ
ಮರಳಿನ ಕಟ್ಟ ನಿರ್ಮಾಣಕ್ಕೆ ಪೂರ್ವ ಸಿದ್ಧತೆಗಳು ಫೆ. 4ರಿಂದ ಆರಂಭಗೊಳ್ಳಲಿವೆ. ಪಂಪ್‌ಹೌಸ್‌ ಬಾವಿಯಿಂದ ಹೂಳು ಎತ್ತಿ ಸ್ವತ್ಛಗೊಳಿಸಲಾಗುತ್ತದೆ. ಎರಡು ದಿನದೊಳಗೆ ಮರಳು ಚೀಲಕ್ಕೆ ಮರಳು ತುಂಬಿಸುವ ಕೆಲಸ ಆಗಲಿದೆ. ಅನಂತರ ಜೋಡಣೆ ಕಾಮಗಾರಿ ಕೈಗೆತ್ತಿಕೊಳ್ಳಲಾಗುತ್ತದೆ.
– ಶಿವಕುಮಾರ್‌ ಎಂಜಿನಿಯರ್‌, ನ.ಪಂ. ಸುಳ್ಯ

– ಕಿರಣ್‌ ಪ್ರಸಾದ್‌ ಕುಂಡಡ್ಕ

ಟಾಪ್ ನ್ಯೂಸ್

Naxal ಎನ್‌ಕೌಂಟರ್‌ ತನಿಖೆ ಆರಂಭ; ಉಳಿದವರು ಯಾವ ಕಡೆಗೆ ಪರಾರಿ?

Naxal ಎನ್‌ಕೌಂಟರ್‌ ತನಿಖೆ ಆರಂಭ; ಉಳಿದವರು ಯಾವ ಕಡೆಗೆ ಪರಾರಿ?

Hebri: ಎನ್‌ಕೌಂಟರ್‌ ತನಿಖೆ ನಡೆಸುವ ಹೆಬ್ರಿ ಪೊಲೀಸ್‌ ಠಾಣೆ ಇಲ್ಲಗಳ ಆಗರ!

Hebri: ಎನ್‌ಕೌಂಟರ್‌ ತನಿಖೆ ನಡೆಸುವ ಹೆಬ್ರಿ ಪೊಲೀಸ್‌ ಠಾಣೆ ಇಲ್ಲಗಳ ಆಗರ!

ashok

CM ಸಿದ್ದರಾಮಯ್ಯ ಭ್ರಷ್ಟ ಎಂದು ನಿರೂಪಿಸಲು ಯಶಸ್ವಿ: ಆರ್‌.ಅಶೋಕ್‌

BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?

BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?

1-siddu

Congress; ಅಧಿವೇಶನಕ್ಕೆ ಮುನ್ನ ಸಂಪುಟಕ್ಕೆ ಸರ್ಜರಿ? ಸಾಧ್ಯತೆಗಳೇನು?

1-mahayu

Mahayuti ಗೆಲುವು: ಆ್ಯಕ್ಸಿಸ್‌ ಮೈ ಇಂಡಿಯಾ, ಚಾಣಕ್ಯ ಸಮೀಕ್ಷೆ ಭವಿಷ್ಯ

High Court: ನಕ್ಸಲ್‌ ಚಟುವಟಿಕೆ: ಸಾವಿತ್ರಿ ಬಾಡಿ ವಾರಂಟ್‌ ಮನವಿ ಮರು ಪರಿಶೀಲನೆಗೆ ನಿರ್ದೇಶ

High Court: ನಕ್ಸಲ್‌ ಚಟುವಟಿಕೆ: ಸಾವಿತ್ರಿ ಬಾಡಿ ವಾರಂಟ್‌ ಮನವಿ ಮರು ಪರಿಶೀಲನೆಗೆ ನಿರ್ದೇಶ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Fraud Case: ಗೂಗಲ್‌ ಪೇ ಮಾಡಿದೆ ಎಂದು ಹೇಳಿ ಮೋಸ

Fraud Case: ಗೂಗಲ್‌ ಪೇ ಮಾಡಿದೆ ಎಂದು ಹೇಳಿ ಮೋಸ

ಯಾತ್ರಾರ್ಥಿಯಿಂದ ಸೌತಡ್ಕ ಕ್ಷೇತ್ರದ ಸಿಬಂದಿ ಮೇಲೆ ಹಲ್ಲೆ

Kokkada: ಯಾತ್ರಾರ್ಥಿಯಿಂದ ಸೌತಡ್ಕ ಕ್ಷೇತ್ರದ ಸಿಬಂದಿ ಮೇಲೆ ಹಲ್ಲೆ

Puttur: ಸ್ಕೂಲ್‌ ಬಸ್‌ಗೆ ಢಿಕ್ಕಿಯಾಗುವುದನ್ನು ತಪ್ಪಿಸಿ ಮನೆಗೆ ನುಗ್ಗಿದ ಖಾಸಗಿ ಬಸ್‌

Puttur: ಸ್ಕೂಲ್‌ ಬಸ್‌ಗೆ ಢಿಕ್ಕಿಯಾಗುವುದನ್ನು ತಪ್ಪಿಸಿ ಮನೆಗೆ ನುಗ್ಗಿದ ಖಾಸಗಿ ಬಸ್‌

Puttur: ಕಾರು ಚಾಲಕನಿಗೆ ಮೂರ್ಛೆ ರೋಗ: ಅಪಾಯದಿಂದ ಪಾರು

Puttur: ಕಾರು ಚಾಲಕನಿಗೆ ಮೂರ್ಛೆ ರೋಗ: ಅಪಾಯದಿಂದ ಪಾರು

Shishila:ಮಕ್ಕಳನ್ನು ಶಾಲೆಗೆ ಕಳುಹಿಸುವ ವೇಳೆ ಕಾಡಾನೆ ದಾಳಿ;ಸೊಂಡಿಲಿನಿಂದ ಬೈಕ್ ಕೆಡವಿದ ಆನೆ

Shishila:ಮಕ್ಕಳನ್ನು ಶಾಲೆಗೆ ಕಳುಹಿಸುವ ವೇಳೆ ಕಾಡಾನೆ ದಾಳಿ;ಸೊಂಡಿಲಿನಿಂದ ಬೈಕ್ ಕೆಡವಿದ ಆನೆ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Naxal ಎನ್‌ಕೌಂಟರ್‌ ತನಿಖೆ ಆರಂಭ; ಉಳಿದವರು ಯಾವ ಕಡೆಗೆ ಪರಾರಿ?

Naxal ಎನ್‌ಕೌಂಟರ್‌ ತನಿಖೆ ಆರಂಭ; ಉಳಿದವರು ಯಾವ ಕಡೆಗೆ ಪರಾರಿ?

Hebri: ಎನ್‌ಕೌಂಟರ್‌ ತನಿಖೆ ನಡೆಸುವ ಹೆಬ್ರಿ ಪೊಲೀಸ್‌ ಠಾಣೆ ಇಲ್ಲಗಳ ಆಗರ!

Hebri: ಎನ್‌ಕೌಂಟರ್‌ ತನಿಖೆ ನಡೆಸುವ ಹೆಬ್ರಿ ಪೊಲೀಸ್‌ ಠಾಣೆ ಇಲ್ಲಗಳ ಆಗರ!

ashok

CM ಸಿದ್ದರಾಮಯ್ಯ ಭ್ರಷ್ಟ ಎಂದು ನಿರೂಪಿಸಲು ಯಶಸ್ವಿ: ಆರ್‌.ಅಶೋಕ್‌

BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?

BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?

1-siddu

Congress; ಅಧಿವೇಶನಕ್ಕೆ ಮುನ್ನ ಸಂಪುಟಕ್ಕೆ ಸರ್ಜರಿ? ಸಾಧ್ಯತೆಗಳೇನು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.