ಸುರೇಂದ್ರ ಬಂಟ್ವಾಳ್ ಹತ್ಯೆ ಮಾಡಿದ್ದು ನಾನೇ; ಗೊಂದಲ ಸೃಷ್ಟಿಸಿದ ಆಪ್ತನ ವಾಯ್ಸ ರೆಕಾರ್ಡ್
ಸುರೇಂದ್ರನ ಹತ್ಯೆಗೆ "ಭೂಗತ' ನಂಟು!
Team Udayavani, Oct 23, 2020, 12:52 AM IST
ಬಂಟ್ವಾಳ: ಬಂಟ್ವಾಳದ ಭಂಡಾರಿಬೆಟ್ಟು ವಸತಿ ಸಂಕೀರ್ಣದಲ್ಲಿ ದುಷ್ಕರ್ಮಿಗಳಿಂದ ಹತ್ಯೆಗೀಡಾಗಿರುವ ಸುರೇಂದ್ರ ಬಂಟ್ವಾಳ್ ಪ್ರಕರಣದ ಕುರಿತು ಪೊಲೀಸ್ ತನಿಖೆ ಪ್ರಗತಿಯಲ್ಲಿರುವ ವೇಳೆಯಲ್ಲೇ ಹಲವು ಊಹಾಪೋಹಗಳು ಕೇಳಿಬರುತ್ತಿವೆ. ಗುರುವಾರ ಆಡಿಯೋವೊಂದು ವೈರಲ್ ಆಗಿ ಹಲವು ಗೊಂದಲಗಳನ್ನು ಹುಟ್ಟು ಹಾಕಿದೆ.
ಸುರೇಂದ್ರ ಬಂಟ್ವಾಳ್‌ನ ಆಪ್ತ ಸತೀಶ್ ಎನ್ನುವಾತ ಮಾತನಾಡುತ್ತಿರುವ ರೀತಿಯಲ್ಲಿ ರೆಕಾರ್ಡ್ ಮಾಡಿರುವ ಆಡಿಯೋ ಹೊರಬಂದಿದ್ದು, ಅದರಲ್ಲಿ ಆತ ಕೊಲೆ ಮಾಡಿರುವುದು ಒಪ್ಪಿಕೊಂಡಿರುವ ಜತೆಗೆ ಇತ್ತೀಚೆಗಷ್ಟೇ ಹಿರಿಯಡಕದಲ್ಲಿ ಕೊಲೆಯಾದ ರೌಡಿಶೀಟರ್ ಇನ್ನ ಕಿಶನ್ ಹೆಗ್ಡೆ ಕೊಲೆಗೆ ಪ್ರತೀಕಾರವಾಗಿ ಈ ಕೊಲೆ ನಡೆದಿದೆ ಎಂದು ಹೇಳಿದ್ದಾನೆ. ಆದರೆ ಈ ಆಡಿಯೋವನ್ನು ಯಾರು ಮಾಡಿದ್ದಾರೆ ಎನ್ನುವುದು ಸ್ಪಷ್ಟವಾಗಿಲ್ಲ. ತನಿಖೆಯ ಬಳಿಕ ತಿಳಿಯಬೇಕಿದೆ.
ಮತ್ತೂಂದೆಡೆ ಈ ಕೊಲೆಯ ಹಿಂದೆ ಭೂಗತ ಲೋಕದ ನಂಟಿರುವ ಮಾತುಗಳು ಕೂಡ ಕೇಳಿ ಬರುತ್ತಿದ್ದು, ಹಲವರ ಹೆಸರುಗಳು ಕೇಳಿಬರುತ್ತಿವೆ. ಪೊಲೀಸರು ಹಲವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದು, ಸುರೇಂದ್ರ ಬಂಟ್ವಾಳ ಅವರ ವ್ಯವಹಾರಗಳ ಕುರಿತು ಮಾಹಿತಿ ಕಲೆ ಹಾಕುತ್ತಿದ್ದಾರೆ. ಈಗಾಗಲೇ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯವರು ತಿಳಿಸಿರುವಂತೆ ಮೂರು ತಂಡಗಳ ಮೂಲಕ ತನಿಖಾ ಕಾರ್ಯ ನಡೆಯುತ್ತಿದೆ.
ಕಿಶನ್ ಹೆಗ್ಡೆ ಕೊಲೆಗೆ ಹಣ ಸಂದಾಯ ಮಾಡಿದ್ದ!
ಮುಂದುವರಿದ ಆಡಿಯೋದಲ್ಲಿ ಮೊನ್ನೆ ನಡೆದ ಕಿಶನ್ ಹೆಗ್ಡೆ ಕೊಲೆಯಲ್ಲಿ ಇವನು ಹಣದ ಸಹಾಯ ಮಾಡಿರುವ ವಿಷಯ ನನಗೆ ತಿಳಿದಿತ್ತು. ನಾನು ಅವನ ಹತ್ತಿರ ಹೇಳಿದ್ದೆ, ನೀನು ತಪ್ಪು ಮಾಡುತ್ತಿದ್ದೀಯ ಸುರೇಂದ್ರ, ನಿನಗೆ ಬೇಡದ ವಿಷಯ. ಆಗ ಈ ವಿಷಯ ಹೊರಗಡೆ ಹೇಳಿದ್ರೆ ನಿನ್ನನ್ನು ಸಾಯಿಸುತ್ತೇನೆ ಅಂತ ನನಗೇ ಬೆದರಿಕೆ ಹಾಕಿದ್ದ. ಮೊನ್ನೆ ಅನಾಮಿಕ ಯುವಕನಿಗೆ ಕರೆ ಮಾಡಿ ಜೈಲಿನಲ್ಲಿರೋ ಮನೋಜನಿಗೆ ಹಣ, ಬಟ್ಟೆ ಕೊಡಲಿಕ್ಕಿದೆ. ಇದಕ್ಕೆ ನಿಮ್ಮ ಸಹಾಯ ಬೇಕು ಅಂತಾ ಹೇಳುತ್ತಿದ್ದ. ಮತ್ತೂಂದು ದಿನ ರಾತ್ರಿ ಕರೆ ಮಾಡಿ ಬಟ್ಟೆ, ಹಣ ತಲುಪಿಸಿದ್ದೇನೆ. ಸಹಾಯ ಮಾಡಿದ್ದಕ್ಕಾಗಿ ಥ್ಯಾಂಕ್ಸ್ ಅಂತಾ ಹೇಳಿದ್ದನ್ನು ನಾನು ಕೇಳಿದ್ದೇನೆ. ಮತ್ತೆ ಈ ವಿಚಾರದಲ್ಲಿ ನಾನು ಕಿಶನ್ ಜತೆ ಇದ್ದ ನನ್ನ ಗೆಳೆಯನಿಗೆ ಕರೆ ಮಾಡಿ ತಿಳಿಸಿದೆ. ಅವನಿಗೆ ಈ ವಿಚಾರದಲ್ಲಿ ಕೋಪ ಮತ್ತು ಬೇಸರ ಕೂಡ ಇತ್ತು. ಇವನು ಇದೇ ರೀತಿ ಇದ್ದರೆ ಸುರೇಂದ್ರ ಮತ್ತು ಕೋಡಿಕೆರೆ ಮನೋಜನಿಂದ ಹಲವು ಯುವಕರ ಕೊಲೆಯಾಗುವುದರಲ್ಲಿ ಸಂಶಯವಿಲ್ಲ. ಅದಕ್ಕಾಗಿ ನಾವು ಈ ಕೊಲೆ ಮಾಡಿದ್ದೇವೆ. ನಾವೀಗ ಕಾರವಾರದಲ್ಲಿದ್ದು, ಏನು ಮಾಡಬೇಕೆಂದು ತೋಚದೆ ಇಲ್ಲಿಗೆ ಬಂದಿದ್ದೇವೆ. 2-3 ದಿನದಲ್ಲಿ ಪೊಲೀಸರಿಗೆ ಶರಣಾಗುತ್ತೇವೆ ಎಂದು ಆಡಿಯೋದಲ್ಲಿ ಮಾತನಾಡಿರುವ ವ್ಯಕ್ತಿ ಹೇಳಿದ್ದು, ಆದರೆ ಇದರ ಸತ್ಯಾಸತ್ಯತೆ ಏನು ಎನ್ನುವುದು ತನಿಖೆಯಿಂದ ತಿಳಿಯಬೇಕಿದೆ.
ಬಡ್ಡಕಟ್ಟೆ ಶ್ಮಶಾನದಲ್ಲಿ ಅಂತ್ಯಕ್ರಿಯೆ
ಸುರೇಂದ್ರ ಅವರ ಮೃತದೇಹದ ಅಂತ್ಯಕ್ರಿಯೆ ಗುರುವಾರ ಬಂಟ್ವಾಳದ ಬಡ್ಡಕಟ್ಟೆಯ ಶ್ಮಶಾನದಲ್ಲಿ ನಡೆಯಿತು. ಮೃತದೇಹವನ್ನು ಬಂಟ್ವಾಳ ಕಲಾಯಿಯ ಮನೆಗೆ ತಂದು ಅಲ್ಲಿ ಅಂತಿಮ ವಿಧಿವಿಧಾನಗಳನ್ನು ಪೂರೈ ಸಿದ ಬಳಿಕ ಬಡ್ಡಕಟ್ಟೆಯ ಶ್ಮಶಾನಕ್ಕೆ ಸಾಗಿಸಲಾಗಿದ್ದು, ಈ ವೇಳೆ ನೂರಾರು ಮಂದಿ ಭಾಗಿಯಾಗಿದ್ದರು.
ವೈರಲ್ ಆದ ಆಡಿಯೋದಲ್ಲಿ ಏನಿದೆ?
ನಮಸ್ತೆ ನಾನು ಸತೀಶ್ ಮಾತನಾಡೋದು. ನಿನ್ನೆ ರಾತ್ರಿ ವಸ್ತಿ ಅಪಾರ್ಟ್‌ಮೆಂಟ್‌ನಲ್ಲಿ ಸುರೇಂದ್ರನ ಹತ್ಯೆಯಾಗಿದ್ದು, ಅದನ್ನು ನಾನೇ ಮಾಡಿದ್ದೇನೆ. ಇದು ಕಿಶನ್ ಹೆಗ್ಡೆ ಸಾವಿಗೆ ಪ್ರತೀಕಾರ. ಸುರೇಂದ್ರ ಬಡ್ಡಿ ವ್ಯವಹಾರ ಮಾಡಿ ಗಳಿಸುತ್ತಿದ್ದ ಹಣವನ್ನು ಅಂತಹ ಒಳ್ಳೆಯ ಜನರ ಸಾವಿಗೆ ಉಪಯೋಗಿಸುತ್ತಿದ್ದ. ನಾನು 22 ವರ್ಷದಿಂದ ಸುರೇಂದ್ರನ ಒಟ್ಟಿಗೆ ಇದ್ದು, ಅವನ ಎಲ್ಲ ಅವ್ಯವಹಾರಗಳು ಗೊತ್ತಿತ್ತು ಎಂದಿದ್ದಾನೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Punjalkatte: ಘನತ್ಯಾಜ್ಯ ಘಟಕ ಆರಂಭಕ್ಕೆ ಇನ್ನೂ ಮೀನ ಮೇಷ ಎಣಿಕೆ
Aranthodu: ಉಡುಪಿಗೆ ಭತ್ತದ ಲೋಡ್ ಸಾಗಿಸುತ್ತಿದ್ದ ವೇಳೆ ಲಾರಿಗೆ ಆಕಸ್ಮಿಕ ಬೆಂಕಿ
Belthangady: ಶಾಲೆಯ ಮಕ್ಕಳು ನೆಟ್ಟಿದ್ದ ಹೂ ಗಿಡಗಳ ಕುಂಡಗಳನ್ನು ಪುಡಿಗೈದ ಕಿಡಿಗೇಡಿಗಳು
Bantwal: ಸಾಹಿತ್ಯವನ್ನು ಮಕ್ಕಳ ಮನ ಮುಟ್ಟುವಂತೆ ಬೋಧಿಸುವ ಶಿಕ್ಷಕರು ಬೇಕು
Bantwal ತಾಲೂಕು ಕಚೇರಿ: ಪಾಳು ಬಿದ್ದಿದೆ ಜನರೇಟರ್!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mandya: ಅಪ್ರಾಪ್ತರ ಪ್ರೇಮ ಪ್ರಕರಣ; ಜಿಲೆಟಿನ್ ಸ್ಪೋಟಿಸಿ ಯುವಕ ಆತ್ಮಹತ್ಯೆ
Punjalkatte: ಘನತ್ಯಾಜ್ಯ ಘಟಕ ಆರಂಭಕ್ಕೆ ಇನ್ನೂ ಮೀನ ಮೇಷ ಎಣಿಕೆ
Hubli; ಹಂದಿ ಸಾಕಾಣಿಕೆದಾರ ಕೊಲೆ ಪ್ರಕರಣ; ಮೃತನ ಅಕ್ಕನ ಗಂಡ ಸೇರಿ ನಾಲ್ವರ ಬಂಧನ
Hubli; ಅಯ್ಯಪ್ಪ ಶಿಬಿರ ಅಗ್ನಿ ಆಕಸ್ಮಿಕ ಪ್ರಕರಣ; ಆರಕ್ಕೇರಿದ ಸಾವಿನ ಸಂಖ್ಯೆ
ಗಂಭೀರಕಾಯಿಲೆಗಳಿಂದ ಮಕ್ಕಳಿಗೆ ರಕ್ಷಣೆ-ಬಾಲ್ಯಕಾಲದಲ್ಲಿ ಲಸಿಕೆಹಾಕಿಸಿಕೊಳ್ಳುವುದು ಯಾಕೆಮುಖ್ಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.