ಕ್ವಾರಂಟೈನ್ ವ್ಯವಸ್ಥೆಗೆ ಅಡ್ಡಿಪಡಿಸಿದರೆ ಜೈಲು ಖಚಿತ
ಪುತ್ತೂರು ತಹಶೀಲ್ದಾರ್ ಎಚ್ಚರಿಕೆ
Team Udayavani, May 22, 2020, 4:40 AM IST
ಪುತ್ತೂರು: ಹೊರ ರಾಜ್ಯಗಳಿಂದ ಬಂದು ಇಲ್ಲಿ ಕ್ವಾರಂಟೈನ್ ವ್ಯವಸ್ಥೆಗೆ ಒಳಗಾದವರಿಗೆ ಆಹಾರ ನೀಡುವವರಿಗೆ ಸ್ಥಳೀಯರು ಬೆದರಿಕೆ ಹಾಕುತ್ತಿರುವುದು ತಾಲೂಕು ಆಡಳಿತದ ಗಮನಕ್ಕೆ ಬಂದಿದ್ದು, ವ್ಯವಸ್ಥೆಗೆ ಅಡ್ಡಿ ಪಡಿಸುವವರ ವಿರುದ್ಧ ವಿಪತ್ತು ನಿರ್ವಹಣೆ ಕಾಯಿದೆಯಡಿಯಲ್ಲಿ ಕ್ರಿಮಿನಲ್ ಪ್ರಕರಣ ದಾಖಲಿಸಿ ಜೈಲು ಶಿಕ್ಷೆ ನೀಡಲಾಗುವುದು ಎಂದು ಪುತ್ತೂರು ತಹಶೀಲ್ದಾರ್ ರಮೇಶ್ ಬಾಬು ಎಚ್ಚರಿಕೆ ನೀಡಿದ್ದಾರೆ.
ಹೊರ ರಾಜ್ಯಗಳಲ್ಲಿದ್ದು, ಕೋವಿಡ್ 19 ಲಾಕ್‌ಡೌನ್ ಹಿನ್ನೆಲೆಯಲ್ಲಿ ಊರಿಗೆ ಬರಲಾರದೆ ಸಂಕಷ್ಟಪಡುತ್ತಿದ್ದವರಿಗೆ ಸರಕಾರ ಊರಿಗೆ ಬರಲು ಅವಕಾಶ ಕಲ್ಪಿಸಿದೆ. ಹೀಗೆ ಬಂದವರನ್ನು 14 ದಿನಗಳ ಕಾಲ ಕ್ವಾರಂಟೈನ್ ವ್ಯವಸ್ಥೆಗೆ ಒಳಪಡಿಸಲಾಗುತ್ತಿದೆ. ಇದಕ್ಕಾಗಿ ಪುತ್ತೂರು ತಾಲೂಕಿನಲ್ಲಿ 121 ಸರಕಾರಿ ಹಾಗೂ 13 ಖಾಸಗಿ ಕ್ವಾರಂಟೈನ್ ವ್ಯವಸ್ಥೆ ಮಾಡಲಾಗಿದೆ ಎಂದರು.
ಈ ಕ್ವಾರಂಟೈನ್ ವ್ಯವಸ್ಥೆಯೊಳಗಿರುವ ಜನತೆಗೆ ಸ್ಥಳೀಯರು ಹಾಗೂ ಈ ಕುಟುಂಬದ ಸಂಬಂಧಿಗಳು ಊಟ ನೀಡುವ ಅವಕಾಶವನ್ನೂ ನೀಡಲಾಗಿದೆ. ಆದರೆ ಈ ರೀತಿ ಊಟ ತಂದು ಕೊಡುವ ವ್ಯಕ್ತಿಗಳಿಗೆ ಅಡ್ಡಿಪಡಿಸುವ ಘಟನೆಗಳು ನಡೆಯುತ್ತಿವೆ. ಇಂತಹ ಅಡ್ಡಿಪಡಿಸುವಿಕೆ ಕಾನೂನು ಬಾಹಿರವಾಗಿದ್ದು, ಅಂಥವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳ ಲಾಗುವುದು ಎಂದು ಅವರು ತಿಳಿಸಿದರು.
ಕ್ವಾರಂಟೈನ್ ವ್ಯವಸ್ಥೆಯಲ್ಲಿರುವವರು ಕೋವಿಡ್ 19 ಪೀಡಿತರಲ್ಲ. ಅವರು ನಮ್ಮವರೇ ಆಗಿದ್ದಾರೆ. ಅಂಥವರಿಗೆ ಊಟದ ವ್ಯವಸ್ಥೆ ಮಾಡುವುದಕ್ಕೆ ಅಡ್ಡಿಪಡಿಸುವುದು ಸರಿಯಲ್ಲ ಎಂದರು.
ನಗರದ ವಸತಿ ಶಾಲೆಯಲ್ಲಿ ಹೊರರಾಜ್ಯದಿಂದ ಬಂದ 15 ಮಂದಿಗೆ ಕ್ವಾರಂಟೈನ್ ವ್ಯವಸ್ಥೆ ಮಾಡಲಾಗಿದ್ದು, ಇಲ್ಲಿಗೆ ಊಟ ತಂದು ಕೊಡುವ ವ್ಯಕ್ತಿಗೆ ಸ್ಥಳೀಯ ಕೆಲವರಿಂದ ಬೆದರಿಕೆ ಬಂದಿತ್ತು. ಈ ಕುರಿತು ಪೊಲೀಸ್ ಇಲಾಖೆ ವತಿಯಿಂದ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ತಿಳಿಸಿದರು.
ತಾ.ಪಂ.ನಿಂದ ಊಟದ ವ್ಯವಸ್ಥೆ
ಗ್ರಾ.ಪಂ. ಮಟ್ಟದಲ್ಲಿ ಸರಕಾರಿ ಕ್ವಾರಂಟೈನ್‌ನಲ್ಲಿರುವವರಿಗೆ ಗ್ರಾ.ಪಂ. ವತಿಯಿಂದ ಊಟದ ವ್ಯವಸ್ಥೆ ಮಾಡ ಲಾಗಿದೆ. ತಾಲೂಕು ಕೇಂದ್ರಗಳಲ್ಲಿ ತಾ.ಪಂ. ವತಿಯಿಂದ ಈ ವ್ಯವಸ್ಥೆ ಕೈಗೊಳ್ಳ ಲಾಗಿದೆ. ಇದಕ್ಕಾಗಿ ತಾ.ಪಂ.ಗೆ 20 ಸಾವಿರ ರೂ. ಅನುದಾನವನ್ನು ಸರಕಾರ ನೀಡಿದೆ ಎಂದವರು ತಿಳಿಸಿದರು.
ಬಲ್ನಾಡು ಮೊರಾರ್ಜಿ ದೇಸಾಯಿ ವಸತಿ ಶಾಲೆ ಮತ್ತು ಹಾರಾಡಿಯ ಕೊಂಬೆಟ್ಟು ಬಾಲಕರ ವಸತಿ ನಿಲಯಕ್ಕೆ ಭೇಟಿ ನೀಡಿದ ತಹಶೀಲ್ದಾರ್ ರಮೇಶ್ ಬಾಬು ಕ್ವಾರಂಟೈನ್ ವ್ಯವಸ್ಥೆಯನ್ನು ಪರಿಶೀಲಿಸಿದರು. ಈ ಸಂದರ್ಭದಲ್ಲಿ ಕಂದಾಯ ನಿರೀಕ್ಷಕ ರವಿಕುಮಾರ್, ತಾ.ಪಂ. ವ್ಯವಸ್ಥಾಪಕ ಶಿವಪ್ರಕಾಶ್ , ಮೊರಾರ್ಜಿ ವಸತಿ ಶಾಲೆಯ ಪ್ರಾಂಶುಪಾಲ ಶ್ರೀನಿವಾಸ್ ನಾಯ್ಕ ಉಪಸ್ಥಿತರಿದ್ದರು.
ಸಾವಿರ ಮಂದಿ ನಿರೀಕ್ಷೆ
ಈಗಾಗಲೇ ಪುತ್ತೂರು ತಾಲೂಕಿಗೆ ಹೊರರಾಜ್ಯಗಳಿಂದ 79 ಮಂದಿ ಬಂದಿದ್ದಾರೆ. ಇವರಿಗೆ ಕ್ವಾರಂಟೈನ್ ಸರಕಾರಿ, ಖಾಸಗಿ ವ್ಯವಸ್ಥೆ ಮಾಡಲಾಗಿದೆ. 10 ಮಂದಿ ಮಹಿಳೆಯರಿಗೆ ಹೋಂ ಕ್ವಾರಂಟೈನ್ ವ್ಯವಸ್ಥೆ ಮಾಡಲಾಗಿದೆ. ಗ್ರಾಮಮಟ್ಟದಲ್ಲಿ ಸರಕಾರಿ ಶಾಲೆಗಳು, ನಗರದಲ್ಲಿ ವಿದ್ಯಾರ್ಥಿ ನಿಲಯಗಳು ಹಾಗೂ ಲಾಡ್ಜ್ ಗಳನ್ನು ಈ ವ್ಯವಸ್ಥೆಗಳನ್ನು ಮಾಡಲಾಗಿದೆ. ತಾಲೂಕಿಗೆ ಸುಮಾರು 1000 ಮಂದಿ ಬರುವ ನಿರೀಕ್ಷೆ ಇದೆ, ಆದರೂ 3,094 ಮಂದಿಗೆ ಬೇಕಾದಷ್ಟು ಕ್ವಾರಂಟೈನ್ ವ್ಯವಸ್ಥೆ ಸಿದ್ಧಗೊಳಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Intervention: ಗೃಹ ಇಲಾಖೆಯಲ್ಲಿ ಯಾರ ಹಸ್ತಕ್ಷೇಪವೂ ಇಲ್ಲ: ಸಚಿವ ಪರಮೇಶ್ವರ್
Encounter: ಉತ್ತರಪ್ರದೇಶದಲ್ಲಿ ಎನ್‌ಕೌಂಟರ್: 3 ಶಂಕಿತ ಖಲಿಸ್ಥಾನಿ ಉಗ್ರರ ಹತ್ಯೆ
Investment: 9.8 ಸಾವಿರ ಕೋಟಿ ರೂ. 9 ಯೋಜನೆಗೆ ಒಪ್ಪಿಗೆ: ಸಿಎಂ ಸಿದ್ದರಾಮಯ್ಯ
Growers Meet: ಕಾಫಿಗೆ ಜಗತ್ತಿನೆಲ್ಲೆಡೆ ಮಾರುಕಟ್ಟೆ ಸೃಷ್ಟಿ ಅಗತ್ಯ: ಪಿಯೂಷ್ ಗೋಯಲ್
Congress Government: ಸಿದ್ದರಾಮಯ್ಯ ಅವಧಿಯಲ್ಲೇ ದ್ವೇಷದ ರಾಜಕಾರಣ ಬೇಸರ ತಂದಿದೆ: ಸೋಮಣ್ಣ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.