ಬಡವರಿಗೆ ಅನ್ಯಾಯವಾದಲ್ಲಿ ನಗರಸಭೆಗೆ ಬಂದು ಕುಳಿತುಕೊಳ್ಳುವೆ

ಅಧಿಕಾರಿಗಳ ಸಭೆಯಲ್ಲಿ ಶಾಸಕ ಅಶೋಕ್‌ ಕುಮಾರ್‌ ರೈ ಎಚ್ಚರಿಕೆ

Team Udayavani, May 27, 2023, 3:48 PM IST

ಬಡವರಿಗೆ ಅನ್ಯಾಯವಾದಲ್ಲಿ ನಗರಸಭೆಗೆ ಬಂದು ಕುಳಿತುಕೊಳ್ಳುವೆ

ಪುತ್ತೂರು: ನಗರಸಭೆ ವ್ಯಾಪ್ತಿಯ ಬಡವರಿಗೆ ಅನ್ಯಾಯವಾದಲ್ಲಿ ನಗರಸಭೆ ಕಚೇರಿಗೆ ಬಂದು ಕುಳಿತು ಕೊಳ್ಳುವುದಕ್ಕೂ ಹಿಂಜರಿಯುವುದಿಲ್ಲ. ನಾನು ಅಧಿಕಾರದ ಆಸೆಗೋಸ್ಕರ ಜನಪ್ರತಿ ನಿಧಿಯಾದವನಲ್ಲ ಎಂದು ಶಾಸಕ ಅಶೋಕ್‌ ಕುಮಾರ್‌ ರೈ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದ ಘಟನೆ ಪುತ್ತೂರು ನಗರ ಸಭೆಯಲ್ಲಿ ನಡೆದಿದೆ.

ಶುಕ್ರವಾರ ನಗರಸಭೆಯಲ್ಲಿ ಅಭಿವೃದ್ಧಿ ಕೆಲಸಗಳ ಕುರಿತು ಅವರು ಅಧಿಕಾರಿಗಳ ಜತೆಗೆ ಸಭೆ ನಡೆಸಿದರು. ಜನರಿಗೆ ಸರ ಕಾರದ ಸವಲತ್ತುಗಳು ನೇರವಾಗಿ ದೊರಕಿಸಿ ಕೊಡಬೇಕು ಅನ್ನುವುದೇ ನನ್ನ ಮೂಲ ಉದ್ದೇಶವಾಗಿದ್ದು, ಅಧಿಕಾರಿಗಳು ಜನರಿಗೆ ಪ್ರಾಮಾಣಿಕ ಸೇವೆ ನೀಡಬೇಕು ಎಂದರು.

ಅಧಿಕಾರಿಗಳ ಸಹಕಾರವಿಲ್ಲದೆ ಯಾವುದೇ ಕೆಲಸ ಸಾಧ್ಯವಿಲ್ಲ. ಎಲ್ಲವನ್ನೂ ಕಾನೂನಿನಿಂದಲೇ ನೋಡಿದರೆ ಜನ ಸ್ಪಂದನೆಯ ಸೇವೆ ನೀಡಲು ಸಾಧ್ಯವಿಲ್ಲ. ಮನುಷ್ಯತ್ವದ ಸ್ಪಂದನೆಯೂ ಇರಲಿ ಎಂದು ಸಲಹೆ ನೀಡಿದರು. ಪೌರಾಯುಕ್ತ ಮಧು ಎಸ್‌. ಮನೋ ಹರ್‌ ಅವರಿಂದ ಶಾಸಕರು ಸಮಗ್ರ ಮಾಹಿತಿ ಪಡೆದು ಅಭಿವೃದ್ಧಿ ಸಾಧ್ಯತೆ ಗಳ ಕುರಿತು ಅವಲೋಕನ ನಡೆಸಿದರು.

ಚರಂಡಿಗಳ ದುರಸ್ತಿ: ಸೂಚನೆ
ನಗರದ ಚರಂಡಿಗಳ ಅಭಿವೃದ್ಧಿ ಕುರಿತು ಮಾಹಿತಿ ಪಡೆದುಕೊಂಡ ಶಾಸಕರು, ಈ ಕುರಿತು ಯೋಜನೆಗಳನ್ನು ರೂಪಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು. 2018-19 ರಲ್ಲಿ ಯುಜಿಡಿ ಯೋಜನೆಯಲ್ಲಿ ರೂ. 154 ಕೋಟಿಯ ಡಿಪಿಆರ್‌ ರೂಪಿಸಲಾಗಿತ್ತು. ಯೋಜನಾ ವೆಚ್ಚ ಅಧಿಕವಾದ್ದರಿಂದ ಮತ್ತು 40 ಕಿ.ಮೀ. ಜಾಗ ಒತ್ತುವರಿ ಮಾಡಬೇಕಾದ ಅಗತ್ಯ ಬಿದ್ದ ಕಾರಣ ಯೋಜನೆ ಮುಂದುವರೆಯಲಿಲ್ಲ ಎಂದು ಅಧಿಕಾರಿಗಳು ಮಾಹಿತಿ ನೀಡಿದರು. ನಗರೋತ್ಥನಾದಲ್ಲಿ 25 ಕೋಟಿಯ ಯೋಜ ನೆಗಳಿಗೆ ಟೆಂಡರ್‌ ಆಗಿದ್ದು, ಕಾಮಗಾರಿಗಳು ಪ್ರಗತಿಯಲ್ಲಿವೆ ಎಂದು ಶಾಸಕರ ಗಮನಕ್ಕೆ ತಂದರು. ನಗರಸಭೆಗೆ ಸಂಬಂಧಿಸಿದ ವಿವಿಧ ಅಧಿಕಾರಿಗಳು, ಸಿಬಂದಿ ವರ್ಗದವರು ಸಭೆಯಲ್ಲಿ ಪಾಲ್ಗೊಂಡರು.

ಸೂರು ಸಮಸ್ಯೆ
ನಿವೇಶನಕ್ಕಾಗಿ ಸಾವಿರಾರು ಅರ್ಜಿಗಳು ಬಾಕಿ ಇರುವ ಬಗ್ಗೆ ಶಾಸಕರಿಗೆ ಉತ್ತರಿ ಸಿದ ಪೌರಾಯುಕ್ತರು, ಸುಮಾರು 1978 ಅರ್ಜಿಗಳು ನಿವೇಶನ ಕೋರಿ ಸಲ್ಲಿಕೆಯಾಗಿವೆ. 1.8 ಎಕ್ರೆ ಜಾಗದಲ್ಲಿ 68 ನಿವೇಶನ ಗುರುತಿಸಲಾಗಿದೆ. ಸಿಂಗಾಣಿಯಲ್ಲಿ ಪೌರಕಾರ್ಮಿಕರಿಗೆ ವಸತಿ ನಿರ್ಮಾಣಕ್ಕೆ ಜಾಗ ಗುರುತಿಸ ಲಾಗಿದೆ. ಉಳಿದಂತೆ ಹಲವು ಜಾಗಗ ಳನ್ನು ಗುರುತಿಸಿದರೂ ವಿವಿಧ ಕಾರಣ ಗಳಿಗೆ ನೀಡಲು ಸಾಧ್ಯವಾಗಿಲ್ಲ ಎಂದು ಮಾಹಿತಿ ನೀಡಿದರು.

ಸಿಬಂದಿ ಕೊರತೆ
ನಗರಸಭೆಗೆ 236 ಮಂದಿ ಅಧಿಕಾರಿ, ಸಿಬಂದಿಯ ಆವಶ್ಯಕತೆ ಇದೆ. ಆದರೆ ಪ್ರಸ್ತುತ 38 ಹುದ್ದೆಗಳು ಮಾತ್ರ ಭರ್ತಿಯಾಗಿದ್ದು, 199 ಸಿಬಂದಿ ಕೊರತೆ ಇದೆ. 11 ಮಂದಿ ಖಾಯಂ ಪೌರ ಕಾರ್ಮಿಕರಿದ್ದು, 45 ಮಂದಿಯ ಖಾಯಂ ಮಾಡಲು ಡಿಸಿಗೆ ಪ್ರಸ್ತಾವನೆ ಕಳುಹಿಸಲಾಗಿದ್ದು, ಅದರಲ್ಲಿ 34 ಮಂದಿಯನ್ನು ಆಯ್ಕೆ ಮಾಡಲಾಗಿದೆ. 5 ಮಂದಿ ಎಂಜಿನಿ ಯರ್‌ ಹುದ್ದೆಗಳಲ್ಲಿ 3 ಹುದ್ದೆ ಮಾತ್ರ ಭರ್ತಿಯಾಗಿದ್ದು, ಅದರಲ್ಲೂ ಇಬ್ಬರಿಗೆ ಬೇರೆ ತಾ| ನ ಜವಾಬ್ದಾರಿ ಇದೆ ಎಂದು ಪೌರಾಯುಕ್ತರು ಶಾಸಕರ ಗಮನಕ್ಕೆ ತಂದರು.

ಟಾಪ್ ನ್ಯೂಸ್

Andhra Pradesh: ಲಡ್ಡು ಪ್ರಸಾದ ವಿವಾದ: ತಿರುಪತಿಗೆ ಎಸ್‌ಐಟಿ ಭೇಟಿ

Andhra Pradesh: ಲಡ್ಡು ಪ್ರಸಾದ ವಿವಾದ: ತಿರುಪತಿಗೆ ಎಸ್‌ಐಟಿ ಭೇಟಿ

Belgavi-Roberry

Belagavi: ದೂರು ಕೊಟ್ಟವರ ಮೊದಲು ಬಂಧಿಸಿ ಬಳಿಕ ನೈಜ ದರೋಡೆಕೋರರ ಸೆರೆ ಹಿಡಿದ ಪೊಲೀಸರು!

k

Udupi: ಆರೆಸ್ಸೆಸ್‌ ಹಿರಿಯ ಪ್ರಚಾರಕ್‌ ಭಯ್ಯಾಜಿ ಜೋಷಿ ಶ್ರೀಕೃಷ್ಣಮಠಕ್ಕೆ ಭೇಟಿ

Bagalakote-Dryer

Bagalakote: ಪ್ರೇಯಸಿ ಗೆಳತಿ ಹ*ತ್ಯೆಗೆ ಸಂಚು; ಕೊನೆಗೆ ಕೈ ಕಳೆದುಕೊಂಡಿದ್ದು ಪ್ರೇಮಿಯೇ!  

Sagara: ಟ್ರಾಫಿಕ್‌ ಜಾಮ್‌ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು

Sagara: ಟ್ರಾಫಿಕ್‌ ಜಾಮ್‌ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು

Road Mishap: ಶಬರಿಮಲೆ ಯಾತ್ರಿಕರಿದ್ದ ಬಸ್‌ ಡಿಕ್ಕಿ: ಮೊಪೆಡ್‌ ಚಾಲಕ ಸಾವು

Road Mishap: ಶಬರಿಮಲೆ ಯಾತ್ರಿಕರಿದ್ದ ಬಸ್‌ ಡಿಕ್ಕಿ: ಮೊಪೆಡ್‌ ಸವಾರ ಸಾವು

vijayapura-Police

Vijayapura: 22 ಲಕ್ಷ ರೂ.ಮೌಲ್ಯದ ಗಾಂಜಾ ಜಪ್ತಿ, 2 ಕಾರು ವಶಕ್ಕೆ ಪಡೆದ ಪೊಲೀಸರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನವೆಂಬರ್‌ 26-30: ಧರ್ಮಸ್ಥಳ ಲಕ್ಷದೀಪೋತ್ಸವ ಸಂಭ್ರಮ

ನವೆಂಬರ್‌ 26-30: ಧರ್ಮಸ್ಥಳ ಲಕ್ಷದೀಪೋತ್ಸವ ಸಂಭ್ರಮ

12-

Belthangady: ನ. 21- ಮೇ 23: ಧರ್ಮಸ್ಥಳ ಮೇಳದಿಂದ ಯಕ್ಷ ಗಾನ ಸೇವೆ

7-dharmasthala

Dharmasthala: ನ.26-30: ಶ್ರೀ ಕ್ಷೇತ್ರ ಧರ್ಮಸ್ಥಳದ ಲಕ್ಷದೀಪೋತ್ಸವ

5-video

ಹೊಸ ಟ್ರೆಂಡ್ ನ ಪ್ಯಾಂಟ್ ಧರಿಸಿದ ಯುವಕ;ಸ್ನೇಹಿತರಿಂದ ಅವಮಾನ, ನೊಂದ ಯುವಕ ಆತ್ಮಹತ್ಯೆಗೆ ಯತ್ನ

Fraud Case: ಗೂಗಲ್‌ ಪೇ ಮಾಡಿದೆ ಎಂದು ಹೇಳಿ ಮೋಸ

Fraud Case: ಗೂಗಲ್‌ ಪೇ ಮಾಡಿದೆ ಎಂದು ಹೇಳಿ ಮೋಸ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Andhra Pradesh: ಲಡ್ಡು ಪ್ರಸಾದ ವಿವಾದ: ತಿರುಪತಿಗೆ ಎಸ್‌ಐಟಿ ಭೇಟಿ

Andhra Pradesh: ಲಡ್ಡು ಪ್ರಸಾದ ವಿವಾದ: ತಿರುಪತಿಗೆ ಎಸ್‌ಐಟಿ ಭೇಟಿ

Belgavi-Roberry

Belagavi: ದೂರು ಕೊಟ್ಟವರ ಮೊದಲು ಬಂಧಿಸಿ ಬಳಿಕ ನೈಜ ದರೋಡೆಕೋರರ ಸೆರೆ ಹಿಡಿದ ಪೊಲೀಸರು!

k

Udupi: ಆರೆಸ್ಸೆಸ್‌ ಹಿರಿಯ ಪ್ರಚಾರಕ್‌ ಭಯ್ಯಾಜಿ ಜೋಷಿ ಶ್ರೀಕೃಷ್ಣಮಠಕ್ಕೆ ಭೇಟಿ

Bagalakote-Dryer

Bagalakote: ಪ್ರೇಯಸಿ ಗೆಳತಿ ಹ*ತ್ಯೆಗೆ ಸಂಚು; ಕೊನೆಗೆ ಕೈ ಕಳೆದುಕೊಂಡಿದ್ದು ಪ್ರೇಮಿಯೇ!  

Udupi: ಕೋಟಿ ಗೀತಾ ಲೇಖನ ಯಜ್ಞ: 500ಕ್ಕೂ ಹೆಚ್ಚು ವಿದ್ಯಾರ್ಥಿಗಳು, ಸಿಬ್ಬಂದಿಯಿಂದ ದೀಕ್ಷೆ

Udupi: ಕೋಟಿ ಗೀತಾ ಲೇಖನ ಯಜ್ಞ: 500ಕ್ಕೂ ಹೆಚ್ಚು ವಿದ್ಯಾರ್ಥಿಗಳು, ಸಿಬ್ಬಂದಿಯಿಂದ ದೀಕ್ಷೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.