ಓಮ್ನಿ ವಾಹನದಲ್ಲಿ ಅಕ್ರಮ ಗೋಸಾಗಾಟ: ವಾಹನ ಮತ್ತು ದನವನ್ನು ವಶಕ್ಕೆ ಪಡೆದ ಬಂಟ್ವಾಳ ಪೊಲೀಸರು
Team Udayavani, Jul 28, 2020, 11:18 AM IST
ಬಂಟ್ವಾಳ: ಓಮ್ನಿ ವಾಹನದಲ್ಲಿ ಹಿಂಸಾತ್ಮಕವಾಗಿ ಗೋಸಾಗಟ ನಡೆಸುತ್ತಿದ್ದ ತಂಡವನ್ನು ಸೋಮವಾರ ರಾತ್ರಿ ಬಂಟ್ವಾಳ ನಗರ ಪೊಲೀಸರು ತಡೆದಿದ್ದು, ಓಮ್ನಿ ಮತ್ತು ಒಂದು ದನವನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ರಾತ್ರಿ ಗಸ್ತು ತಿರುಗುತ್ತಿದ್ದ ವೇಳೆ ಮಾರ್ನಬೈಲು ಎಂಬಲ್ಲಿ ಒಮ್ನಿ ಕಾರೊಂದು ವೇಗವಾಗಿ ಬರುತ್ತಿದ್ದು ಪೊಲೀಸರು ನಿಲ್ಲಿಸಲು ಸೂಚನೆ ನೀಡಿದಾಗ ನಿಲ್ಲಿಸಿದೆ ನಂದವಾರ ರಸ್ತೆಯ ಮೂಲಕ ವೇಗವಾಗಿ ಕಾರು ಮುಂದೆ ಹೋಗಿದೆ. ಪೊಲೀಸರು ವಾಹನವನ್ನು ಬೆನ್ನಟ್ಟಿ ಕೊಂಡು ಹೋದಾಗ ನಂದಾವರ ಎಂಬಲ್ಲಿ ಅಂಗಡಿಯೊಂದಕ್ಕೆ ಕಾರು ಡಿಕ್ಕಿ ಹೊಡೆದು ನಿಲ್ಲಿಸಿ ಆರೋಪಿಗಳು ಪರಾರಿಯಾಗಿದ್ದಾರೆ. ವಾಹನವನ್ನು ಪರಿಶೀಲಿಸಿದಾಗ ವಾಹನದೊಳಗೆ ಒಂದು ದನವನ್ನು ಹಿಂಸಾತ್ಮಕ ರೀತಿಯಲ್ಲಿ ಕಟ್ಟಿಹಾಕಲಾಗಿತ್ತು.
ವಾಹನ ಹಾಗೂ ದನವನ್ನು ಪೊಲೀಸರು ವಶಕ್ಕೆ ಪಡೆದುಕೊಂಡು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಬಂಟ್ವಾಳ ನಗರ ಠಾಣಾ ಎಸ್. ಐ.ಅವಿನಾಶ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಲಾಗಿದೆ.
ಎ.ಎಸ್.ಐ.ಕುಂಜ್ಞ, ಸಿಬ್ಬಂದಿ ಗಳಾದ ಸುಜು, ಕೃಷ್ಣ ಕುಲಾಲ್, ಹಾಲೇಶ್, ಚಾಲಕ ವಿಜಯ ಮತ್ತಿತರರು ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Himachal Pradesh; ಸಿಎಂಗೆ ತಂದಿದ್ದ ಸಮೋಸಾ ಮಾಯ: ಸಿಐಡಿ ತನಿಖೆ?
Minister Sudhakar: ಸೀಟ್ ಬ್ಲಾಕಿಂಗ್ ದಂಧೆ ವಿರುದ್ಧ ಕ್ರಿಮಿನಲ್ ಕೇಸ್ ಅಸ್ತ್ರ
Trump ಗೆಲ್ಲುತ್ತಿದ್ದಂತೆ ಅಮೆರಿಕ ತೊರೆಯಲು ಜನರಿಂದ ಭರದ ಸಿದ್ಧತೆ
Yogi ‘ಬಟೇಂಗೆ’ಹೇಳಿಕೆ ಒಪ್ಪಲ್ಲ ಎಂದ ಅಜಿತ್: ಮಹಾಯುತೀಲಿ ಬಿರುಕು?
Canada; ನಮ್ಮಲ್ಲಿರುವ ಎಲ್ಲ ಹಿಂದೂಗಳು ಮೋದಿ ಬೆಂಬಲಿಗರಲ್ಲ: ಟ್ರಾಡೋ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.