ಅನುಷ್ಠಾನವಾಗಲಿ ಬಹುಗ್ರಾಮ ಕುಡಿಯುವ ನೀರು ಯೋಜನೆ: 8ಗ್ರಾಮಗಳಿಗೆಅನುಕೂಲ
Team Udayavani, Jul 6, 2018, 10:38 AM IST
ಸವಣೂರು: ಗ್ರಾಮೀಣ ಜನತೆಯ ಆವಶ್ಯಕತೆಗಳಲ್ಲಿ ಒಂದಾದ ಶುದ್ಧ ಕುಡಿಯುವ ನೀರು ಪೂರೈಸಲು ಬೆಳಂದೂರು ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಶೀಘ್ರ ಅನುಷ್ಠಾನಕ್ಕೆ ಜನಪ್ರತಿನಿಧಿಗಳು, ಅಧಿಕಾರಿಗಳು ಮುಂದಾ
ಗಬೇಕೆಂದು ಸಾರ್ವಜನಿಕ ವಲಯದಲ್ಲಿ ಕೂಗು ಕೇಳಿ ಬರುತ್ತಿದೆ.
ಬೆಳಂದೂರು, ಸವಣೂರು, ಕಾಣಿಯೂರು ಗ್ರಾ.ಪಂ. ವ್ಯಾಪ್ತಿಯ 8 ಗ್ರಾಮಗಳಿಗೆ ಶುದ್ಧ ಕುಡಿಯುವ ನೀರಿನ ಯೋಜನೆ ಶೀಘ್ರವಾಗಿ ಅನುಷ್ಠಾನವಾಗಬೇಕು. ಈ ಯೋಜನೆಯ ಅನುಷ್ಠಾನದ ಹಿನ್ನೆಲೆಯಲ್ಲಿ 2013 ಫೆಬ್ರವರಿ 26ರಂದು
ಯೋಜನೆಗೆ ಒಳಪಡುವ ಗ್ರಾಮಗಳಲ್ಲಿ ಮತ್ತು ಕುಮಾರದಾರಾ ನದಿತಟದಲ್ಲಿ ಸರ್ವೆ ಕಾರ್ಯ ನಡೆಸಲಾಗಿತ್ತು. ಈಗ ಈ ಯೋಜನೆಗಾಗಿ 16.5 ಕೋಟಿ ರೂ.ಗಳ ಅಂದಾಜು ಪಟ್ಟಿ ತಯಾರಿಸಲಾಗಿದೆ. ಶಾಸಕ ಎಸ್. ಅಂಗಾರ ಅವರು ಮಾರ್ಚ್ ತಿಂಗಳಲ್ಲಿ ಶಿಲಾನ್ಯಾಸ ಮಾಡುವ ಮೂಲಕ ಯೋಜನೆಗೆ ಅಧಿಕೃತವಾಗಿ ಚಾಲನೆ ನೀಡಿದ್ದರು.
ಯಾವ ಗ್ರಾಮಗಳಿಗೆ ಪ್ರಯೋಜನ?
ಬೆಳಂದೂರು ಗ್ರಾ.ಪಂ. ವ್ಯಾಪ್ತಿಯಲ್ಲಿ ಹರಿಯುತ್ತಿರುವ ಜೀವನದಿ ಕುಮಾರಧಾರಾದ ನೀರನ್ನು ಬಳಸಿಕೊಂಡು ಸವಣೂರು, ಪಾಲ್ತಾಡಿ, ಪುಣcಪ್ಪಾಡಿ, ಬೆಳಂದೂರು, ಕುದ್ಮಾರು, ಕಾಯಿಮಣ, ಚಾರ್ವಾಕ, ಕಾಣಿಯೂರು ಗ್ರಾಮಗಳಿಗೆ ಶುದ್ಧ ಕುಡಿಯುವ ನೀರನ್ನು ಪೂರೈಸುವ ನಿಟ್ಟಿನಲ್ಲಿ ಈ ಯೋಜನೆಯನ್ನು ರೂಪಿಸಲಾಗಿದೆ.
ಹೀಗಿದೆ ರೂಪು-ರೇಷೆ
ಸವಣೂರು-ಕುದ್ಮಾರು ಗ್ರಾಮಗಳಲ್ಲಿ ಹರಿಯುತ್ತಿರುವ ಕುಮಾರಧಾರಾ ನದಿಯಲ್ಲಿ ಕಿಂಡಿ ಅಣೆಕಟ್ಟು ಅಥವಾ ಜಾಕ್‌ವೆಲ್ ನಿರ್ಮಿಸಿ ಪಕ್ಕದಲ್ಲೇ ಪಂಪ್ ಹೌಸ್ ನಿರ್ಮಾಣ ಮಾಡಿ, ಕಬ್ಬಿಣದ ಕೊಳವೆಯ ಮೂಲಕ ಬೃಹತ್ ಟ್ಯಾಂಕ್‌ಗೆ ಹಾಯಿಸಿ ಅದನ್ನು ಈ ಗ್ರಾಮಗಳಿಗೆ ಪೂರೈಸುವ ಉದ್ದೇಶ ಈ ಯೋಜನೆಯಲ್ಲಿತ್ತು. ಅಲ್ಲದೆ ಈ ಯೋಜನೆಯ ಶೀಘ್ರ ಅನುಷ್ಠಾನ ಕುರಿತಂತೆ ಸವಣೂರು, ಬೆಳಂದೂರು, ಕಾಣಿಯೂರು ಗ್ರಾ.ಪಂ.ಗಳಲ್ಲಿ ನಿರ್ಣಯ ಕೈಗೊಂಡು ಜಿ.ಪಂ., ಸರಕಾರಕ್ಕೆ ಸಲ್ಲಿಸಲಾಗಿತ್ತು. ಈಗ ಅನುಷ್ಠಾನಕ್ಕೆ ಸಿದ್ಧವಾಗಿದೆ.
ತಾಂತ್ರಿಕ ಮಂಜೂರಾತಿ ಬಾಕಿ
ಯೋಜನೆಯ ಕಡತಗಳು ತಾಂತ್ರಿಕ ಮಂಜೂರಾತಿಗಾಗಿ ಮೈಸೂರಿನ ಅಧೀಕ್ಷಕ ಎಂಜಿನಿಯರ್ ಕಚೇರಿಯಿಂದ ಮಂಜೂರುಗೊಂಡು ಬೆಂಗಳೂರಿನ ಮುಖ್ಯ ಎಂಜಿನಿಯರ್ ಕಚೇರಿಗೆ ಕಡತ ವರ್ಗಾವಣೆಯಾಗಬೇಕಿದೆ. ಬಳಿಕ ಟೆಂಡರ್ ಪ್ರಕ್ರಿಯೆ ನಡೆಯಲಿದೆ.
– ರೋಹಿದಾಸ್,
ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್,
ಪುತ್ತೂರು ವಿಭಾಗ
ಶೀಘ್ರ ಆಗಲಿ
ಬೆಳಂದೂರು ಬಹು ಗ್ರಾಮ ಕುಡಿಯುವ ನೀರಿನ ಯೋಜನೆಯು ಶೀಘ್ರ ಅನುಷ್ಠಾನವಾಗಬೇಕೆಂಬ ಎಲ್ಲ ಪ್ರಯತ್ನಗಳನ್ನು ಮಾಡಲಾಗಿದೆ. ಕ್ಷೇತ್ರದ ಶಾಸಕ ಎಸ್. ಅಂಗಾರ ಅವರ ಪ್ರಯತ್ನದಿಂದ ಈ ಯೋಜನೆ ಮಂಜೂರಾಗಿದೆ. ತಾಂತ್ರಿಕ ಮಂಜೂರಾತಿಯ ಬಳಿಕ ಕಾಮಗಾರಿ ಆರಂಭವಾಗಲಿದೆ. ಈ ಯೋಜನೆಯು ಶೀಘ್ರ ಅನುಷ್ಠಾನವಾಗಲಿ ಎಂಬ ಆಶಯ ನಮ್ಮದು.
– ಪ್ರಮೀಳಾ ಜನಾರ್ದನ,
ಜಿ.ಪಂ. ಸದಸ್ಯರು.
ಪ್ರವೀಣ್ ಚೆನ್ನಾವರ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
ಕುದೂರು; ಸ್ವಂತ ಖರ್ಚಲ್ಲಿ ಶಿಕ್ಷಕನಿಂದ ವಿದ್ಯಾರ್ಥಿಗಳಿಗೆ ವಿಮಾನ ಪ್ರವಾಸ!
Jharkhand; ಸಿಎಂ ಆಗಿ ಹೇಮಂತ್ ಸೊರೇನ್ ಪ್ರಮಾಣ ವಚನ ಸ್ವೀಕಾರ
ಪ್ರಯಾಣಿಕರಿಗೆ ಟಿಕೆಟ್ ಅಗತ್ಯವಿಲ್ಲದ ಭಾರತದ ಏಕೈಕ ಉಚಿತ ರೈಲು ಪ್ರಯಾಣದ ಬಗ್ಗೆ ಗೊತ್ತಾ?
Renukaswamy Case:ಬೆನ್ನು ನೋವು ಬಳಿಕ ದರ್ಶನ್‌ಗೆ ಮತ್ತೊಂದು ಸಮಸ್ಯೆ; ವಕೀಲರು ಹೇಳಿದ್ದೇನು?
Karkala: ದುರ್ಗಾ ಫಾಲ್ಸ್ ಗೆ ಈಜಲು ಹೋಗಿದ್ದ ವಿದ್ಯಾರ್ಥಿ ನೀರು ಪಾಲು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.