ಸಂಸ್ಕೃತ ಶಾಲೆಗೆ ಶತಮಾನೋತ್ಸವದ ಹಿರಿಮೆ


Team Udayavani, Feb 13, 2019, 6:27 AM IST

13-february-7.jpg

ಕಡಬ : ಪೌರಾಣಿಕ ಹಿನ್ನೆಲೆಯನ್ನು ಹೊಂದಿರುವ ರಾಮಕುಂಜ ಗ್ರಾಮವು ಯತಿವರೇಣ್ಯ ಉಡುಪಿ ಪೇಜಾವರ ಮಠಾಧೀಶ ವಿಶ್ವೇಶತೀರ್ಥ ಶ್ರೀಪಾದರ ಹುಟ್ಟೂರು ಎನ್ನುವ ಕಾರಣದಿಂದಾಗಿ ಇನ್ನಷ್ಟು ಮಹತ್ವ ಪಡೆದುಕೊಂಡಿದೆ. ಇಲ್ಲಿನ ಶ್ರೀ ರಾಮಕುಂಜೇಶ್ವರ ವಿದ್ಯಾಸಂಸ್ಥೆಗಳಲ್ಲಿ ಶ್ರೀ ರಾಮಕುಂಜೇಶ್ವರ ಸಂಸ್ಕೃತ ಹಿರಿಯ ಪ್ರಾಥಮಿಕ ಶಾಲೆ ಶತಮಾನದ ಸಂಭ್ರಮದಲ್ಲಿದೆ.

ಶ್ರೀ ಮಧ್ವಾಚಾರ್ಯರು ತಮ್ಮ ತಪಸ್ಸಿನ ಶಕ್ತಿಯಿಂದ ಮಳೆ ಸುರಿಸಿದ ಊರು ಎನ್ನುವ ನಂಬಿಕೆಯನ್ನು ಹೊಂದಿರುವ ರಾಮಕುಂಜ ಕುಮಾರಧಾರಾ ಮತ್ತು ನೇತ್ರಾವತಿ ನದಿಗಳ ನಡುವೆ ಪಶ್ಚಿಮ ಘಟ್ಟದ ತಪ್ಪಲಲ್ಲಿದೆ. ಸುಬ್ರಹ್ಮಣ್ಯ, ಧರ್ಮಸ್ಥಳ ಪುಣ್ಯ ಕ್ಷೇತ್ರಗಳ ನಡುವೆ ವಿದ್ಯಾಕುಂಜವೆಂದೇ ಹೆಸರು ಪಡೆದಿರುವ ಇಲ್ಲಿ ಪ್ರಾಥಮಿಕ ಶಿಕ್ಷಣದಿಂದ ಪದವಿ ವರೆಗೆ ಶಿಕ್ಷಣ ಪಡೆಯುವ ಅವಕಾಶವಿದೆ. ಶ್ರೀ ರಾಮಕುಂಜೇಶ್ವರ ಶಿಕ್ಷಣ ಸಂಸ್ಥೆಗಳಲ್ಲಿ 2,500ಕ್ಕೂ ಹೆಚ್ಚು ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ.

ಗೋಪುರವೇ ಕಟ್ಟಡವಾಗಿತ್ತು
ರಾಮಕುಂಜೇಶ್ವರ ವಿದ್ಯಾಸಂಸ್ಥೆಗಳ ಪೈಕಿ ಶ್ರೀ ರಾಮಕುಂಜೇಶ್ವರ ಸಂಸ್ಕೃತ ಹಿ.ಪ್ರಾ. ಶಾಲೆಗೆ ಈಗ ನೂರರ ಹರೆಯ. ಸಂಸ್ಕೃತ ಪಾಠ ಶಾಲೆಯಾಗಿ ಆರಂಭಗೊಂಡ ಇದು ಕಾಲಕ್ಕೆ ತಕ್ಕಂತೆ ಬದಲಾಗುತ್ತಾ ಬಂದ ಸಂಸ್ಥೆ. ಸುಮಾರು 60 ವರ್ಷಗಳ ಕಾಲ ಶ್ರೀ ರಾಮಕುಂಜೇಶ್ವರ ದೇವಾಲಯದ ಗೋಪುರವೇ ಶಾಲಾ ಕಟ್ಟಡ. ಕಾಲದ ಪ್ರಭಾವಕ್ಕೆ ಒಳಗಾದ ಈ ಶಾಲೆ ಬದಲಾದ ಪರಿಸ್ಥಿತಿಗೆ ಹೊಂದಿಕೊಳ್ಳದೆ 1975ರ ವೇಳೆಗೆ ಮಕ್ಕಳ ಸಂಖ್ಯೆಯ ಕೊರತೆಯಿಂದ ಮುಚ್ಚಗಡೆಯ ಭೀತಿಯನ್ನು ಎದುರಿಸಿದಾಗ ಶ್ರೀಗಳು, ಶಿಕ್ಷಣ ತಜ್ಞರು, ಶಿಕ್ಷಣ ಪ್ರೇಮಿಗಳ ಚಿಂತನೆಯಂತೆ ಹೊಸ ನಿವೇಶನಕ್ಕೆ ಸ್ಥಳಾಂತರಗೊಂಡಿತು.

ಶ್ರೀಗಳ ತಪಸ್ಸಿನ ಫಲವೋ ಎಂಬಂತೆ ಕೆಲವೇ ವರ್ಷಗಳಲ್ಲಿ ಈ ಶಾಲೆ ಜನಮಾನಸದಲ್ಲಿ ಅಪಾರ ಪ್ರಭಾವ ಬೀರಿ ಗ್ರಾಮ ಹಾಗೂ ನೆರೆಯ ಗ್ರಾಮಗಳ ಜನರು ಹಾಗೂ ಮಕ್ಕಳ ಆಶಾ ಕೇಂದ್ರವಾಗಿ ಮಾದರಿಯಾಗಿ ಬೆಳೆಯಿತು. ಶಾಲೆಗಳಿಗೇ ಆದರ್ಶ ಶಾಲೆಯಾಯಿತು. ಇಲ್ಲಿನ ಮುಖ್ಯ ಶಿಕ್ಷಕ ಟಿ. ನಾರಾಯಣ ಭಟ್ ಅವರು ಶಿಕ್ಷಣ ಇಲಾಖೆಯ ವಿವಿಧ ಪ್ರಶಸ್ತಿಗಳನ್ನು ಗಳಿಸಿದರು. ಹೆತ್ತವರೂ ಈ ಶಾಲೆಯನ್ನು ಕಂಡು ಹೆಮ್ಮೆ ಪಟ್ಟರು.

ಶ್ರೀಪಾದರು ಪಾಲ್ಗೊಳ್ಳುವರು
ಕನ್ನಡ ಮಾಧ್ಯಮವೆಂದರೆ ಅಷ್ಟಕ್ಕಷ್ಟೇ ಎಂದು ಭಾವಿಸುವ ಜನ ಇಲ್ಲಿನ ಶಿಸ್ತು, ಉತ್ತಮ ಶಿಕ್ಷಣ, ಶಿಕ್ಷಕರ ಬದ್ಧತೆ, ಶ್ರೀಗಳ ಮಾರ್ಗದರ್ಶನ, ಆಡಳಿತ ಮಂಡಳಿಯ ಬೆಂಬಲ ಕಂಡು ತಮ್ಮ ಮಕ್ಕಳನ್ನು ಇಲ್ಲಿಗೆ ಕಳುಹಿಸುತ್ತಿದ್ದಾರೆ. ಈಗಲೂ ಶಾಲೆಯಲ್ಲಿ ಮಕ್ಕಳ ಸಂಖ್ಯೆ 400ರ ಆಸುಪಾಸಿನಲ್ಲಿದೆ. ಫೆ. 16 ಮತ್ತು 17ರಂದು ಜರಗುವ ಶತ ಸಂಭ್ರಮದ ಸಮಾರಂಭದಲ್ಲಿ ಜಿಲ್ಲೆಯ ಗಣ್ಯರು, ಪೇಜಾವರ ಮಠದ ಉಭಯ ಶ್ರೀಗಳು, ಸುಬ್ರಹ್ಮಣ್ಯ ಮಠಾಧೀಶರು ಭಾಗವಹಿಸಲಿದ್ದಾರೆ.

ಜಿಲ್ಲೆಯ ಶತಮಾನ ಕಂಡ ಹೆಮ್ಮೆಯ ವಿದ್ಯಾಸಂಸ್ಥೆಗಳಲ್ಲಿ ಒಂದಾದ ಇಲ್ಲಿ ಕಲಿತ ಸಾವಿರಾರು ಹಿರಿಯ ವಿದ್ಯಾರ್ಥಿಗಳು ಈ ಶಾಲೆಯ ಅಗತ್ಯಗಳನ್ನು ಪೂರೈಸುವಲ್ಲಿ ಶ್ರಮಿಸುತ್ತಿದ್ದಾರೆ. ಮಾತೃ ಸಂಸ್ಥೆ ಶ್ರೀ ರಾಮಕುಂಜೇಶ್ವರ ವಿದ್ಯಾವರ್ಧಕ ಸಭಾ ಹಾಗೂ ಶತಮಾನೋತ್ಸವ ಸಮಿತಿ ಅಧ್ಯಕ್ಷ ಕೃಷ್ಣಮೂರ್ತಿ ಕಲ್ಲೇರಿ, ಸಂಸ್ಥೆಯ ಕಾರ್ಯದರ್ಶಿ ಹಾಗೂ ಸಮಿತಿ ಸಂಚಾಲಕರಾದ ಕೆ.ಎಸ್‌. ರಾಧಾಕೃಷ್ಣ ಕುವೆಚ್ಚಾರು, ಆಂಗ್ಲ ಮಾಧ್ಯಮ ಶಾಲೆಯ ಕಾರ್ಯದರ್ಶಿ ಹಾಗೂ ಸಮಿತಿಯ ಸಂಚಾಲಕ ಕೆ. ಸೇಸಪ್ಪ ರೈ, ಮುಖ್ಯ ಶಿಕ್ಷಕ ಹಾಗೂ ಶತಮಾನೋತ್ಸವ ಸಮಿತಿ ಕಾರ್ಯದರ್ಶಿ ನಾರಾಯಣ ಭಟ್ ಟಿ., ಆಡಳಿತ ಮಂಡಳಿ ಸದಸ್ಯ ಹಾಗೂ ಸಮಿತಿ ಸಂಚಾಲಕ ಎಸ್‌. ಪ್ರಕಾಶ ಆಚಾರ್ಯ ಮುಂಬಯಿ, ವಿವಿಧ ಸಮಿತಿಗಳ ಸಂಚಾಲಕರಾದ ಐ. ಶಿವಪ್ರಸಾದ ಇಜ್ಜಾವು, ಸುಬ್ರಹ್ಮಣ್ಯ ಆರ್‌.ಎಂ. ರಾಮಕುಂಜ, ಪ್ರಶಾಂತ ಆರ್‌.ಕೆ. ಕಾಜರುಕ್ಕು, ಯು. ಕರುಣಾಕರ ಉರ್ಕ ಅವರ ನೇತೃತ್ವದಲ್ಲಿ ಶತ ಸಂಭ್ರಮದ ಸಿದ್ಧತೆಗಳು ಭರದಿಂದ ಸಾಗುತ್ತಿವೆ.

ಟಾಪ್ ನ್ಯೂಸ್

vijayen

BJP ಸಂಘಟನೆ, ತಂತ್ರಗಾರಿಕೆಯಲ್ಲಿ ವಿಫ‌ಲ: ವಿಜಯೇಂದ್ರ ಮೇಲೂ ಪರಿಣಾಮ?

IPL Auction 2025: ಇಂದು, ನಾಳೆ ಐಪಿಎಲ್‌ ಬೃಹತ್‌ ಹರಾಜು

IPL Auction 2025: ಇಂದು, ನಾಳೆ ಐಪಿಎಲ್‌ ಬೃಹತ್‌ ಹರಾಜು

Dawwod-Arrest

Mangaluru: ಕುಖ್ಯಾತ ರೌಡಿಶೀಟರ್‌ ದಾವೂದ್‌ ಬಂಧಿಸಿದ ಸಿಸಿಬಿ ಪೊಲೀಸರು

1-nikil

Channapatna; ಜನಾದೇಶಕ್ಕೆ ತಲೆಬಾಗುತ್ತೇನೆ, ಪ‌ಲಾಯನ ಮಾಡಲ್ಲ: ನಿಖಿಲ್‌

1-bank

Karnataka; ಕೇಂದ್ರ ಸ್ವಾಮ್ಯದ ಸಂಸ್ಥೆಗಳಲ್ಲಿ ಕನ್ನಡಿಗರೇಕೆ ವಿರಳ? ಆಗಬೇಕಿರುವುದೇನು?

renukaacharya

BJP; ಹರಕುಬಾಯಿ ನಾಯಕರಿಂದಲೇ ಸೋಲು: ರೇಣುಕಾಚಾರ್ಯ ಆಕ್ರೋಶ

Arrest

Madikeri: ವೀರ ಸೇನಾನಿಗಳಿಗೆ ಅಗೌರವ: ಆರೋಪಿ ಸೆರೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

ಹೊಸ ಸೇರ್ಪಡೆ

vijayen

BJP ಸಂಘಟನೆ, ತಂತ್ರಗಾರಿಕೆಯಲ್ಲಿ ವಿಫ‌ಲ: ವಿಜಯೇಂದ್ರ ಮೇಲೂ ಪರಿಣಾಮ?

IPL Auction 2025: ಇಂದು, ನಾಳೆ ಐಪಿಎಲ್‌ ಬೃಹತ್‌ ಹರಾಜು

IPL Auction 2025: ಇಂದು, ನಾಳೆ ಐಪಿಎಲ್‌ ಬೃಹತ್‌ ಹರಾಜು

Dawwod-Arrest

Mangaluru: ಕುಖ್ಯಾತ ರೌಡಿಶೀಟರ್‌ ದಾವೂದ್‌ ಬಂಧಿಸಿದ ಸಿಸಿಬಿ ಪೊಲೀಸರು

1-nikil

Channapatna; ಜನಾದೇಶಕ್ಕೆ ತಲೆಬಾಗುತ್ತೇನೆ, ಪ‌ಲಾಯನ ಮಾಡಲ್ಲ: ನಿಖಿಲ್‌

1-bank

Karnataka; ಕೇಂದ್ರ ಸ್ವಾಮ್ಯದ ಸಂಸ್ಥೆಗಳಲ್ಲಿ ಕನ್ನಡಿಗರೇಕೆ ವಿರಳ? ಆಗಬೇಕಿರುವುದೇನು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.