ಮಹಾತ್ಮನ ನೆನಪಿನಲ್ಲಿ ಮಿಡಿಯಲಿ ಪುತ್ತೂರಿಗರ ಮನ
ಗಾಂಧೀಜಿ ಭಾಷಣ ಮಾಡಿದ್ದ ಸ್ಥಳದಲ್ಲೀಗ ಗಾಂಧಿ ಪ್ರತಿಮೆಯೂ ಇಲ್ಲ ಕಟ್ಟೆಯೂ ಇಲ್ಲ
Team Udayavani, Oct 2, 2019, 5:32 AM IST
ನಗರ: ರಾಷ್ಟ್ರಪಿತ ಮಹಾತ್ಮಾ ಗಾಂಧೀಜಿ ಸ್ವಾತಂತ್ರ್ಯ ಹೋರಾಟದ ಸಂದರ್ಭದಲ್ಲಿ 85 ವರ್ಷಗಳ ಹಿಂದೆ ಪುತ್ತೂರಿಗೆ ಭೇಟಿ ನೀಡಿದ ಅವಿಸ್ಮರಣೀಯ ಕುರುಹುಗಳು ನಿಧಾನವಾಗಿ ಮರೆಯಾಗುತ್ತಿರುವ ಆತಂಕ ಎದುರಾಗಿದೆ.
ಮಹಾತ್ಮಾ ಗಾಂಧೀಜಿ ಬಂದು ಭಾಷಣ ಮಾಡಿದ್ದ ಸ್ಥಳದಲ್ಲಿ ಈಗ ಗಾಂಧಿ ಪ್ರತಿಮೆ, ಗಾಂಧಿ ಕಟ್ಟೆಯೂ ಇಲ್ಲ. ಖಾಲಿಯಾಗಿರುವ ಸ್ಮಾರಕ ಸ್ಥಳದಲ್ಲಿ ಬುಧವಾರ ಗಾಂಧೀಜಿ ಅವರ 150ನೇ ಜನ್ಮದಿನದಂದು ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಆಚರಣೆ ನಡೆಯಲಿದೆ.
ಪುತ್ತೂರಿನ ಐತಿಹಾಸಿಕ ಗಾಂಧಿ ಕಟ್ಟೆಯನ್ನು ಅಭಿವೃದ್ಧಿ ಮಾಡುವ ಕಾಮಗಾರಿ ಸ್ಥಗಿತಗೊಂಡಿದೆ. ರಸ್ತೆ ಪಕ್ಕದಲ್ಲಿ ಕೆಲಸ ಮಾಡಲಾಗುತ್ತಿದೆ ಎಂದು ಆಪಾದಿಸಿ ಖಾಸಗಿ ವ್ಯಕ್ತಿಯೊಬ್ಬರು ಹೈಕೋರ್ಟಲ್ಲಿ ದಾವೆ ಹೂಡಿದ್ದು, ನಾಲ್ಕು ತಿಂಗಳ ಹಿಂದೆ ಕಾಮಗಾರಿಗೆ ತಡೆಯಾಜ್ಞೆ ಸಿಕ್ಕಿದೆ. ಕಾಮಗಾರಿ ಕಾರಣದಿಂದ ಗಾಂಧಿ ಪ್ರತಿಮೆಯನ್ನು ನಗರಸಭೆ ಆಡಳಿತವು ಸ್ಥಳಾಂತರಿಸಿದೆ.
ಆ. 15 ರಂದು ಸ್ವಾತಂತ್ರ್ಯ ದಿನಾಚಣೆ ಸಂದರ್ಭ ಗಾಂಧಿ ಕಟ್ಟೆ ಇಲ್ಲದ ಕಾರಣ ಅದೇ ಸ್ಥಳದಲ್ಲಿ ತಾತ್ಕಾಲಿಕ ಧ್ವಜಸ್ತಂಭ ನೆಟ್ಟು ತ್ರಿವರ್ಣ ಧ್ವಜ ಹಾರಿಸಲಾಗಿತ್ತು. ಗಾಂಧಿ ಜಯಂತಿಗೆ ಮೊದಲಾದರೂ ತಡೆಯಾಜ್ಞೆ ತೆರವುಗೊಂಡು ಗಾಂಧಿ ಕಟ್ಟೆಯ ಕೆಲಸ ಪೂರ್ತಿಯಾಗಬಹುದು ಎಂಬ ನಿರೀಕ್ಷೆಯೂ ಹುಸಿಯಾಗಿದೆ.
ಸಾಂಕೇತಿಕ ಆಚರಣೆ
ಗಾಂಧಿಕಟ್ಟೆ ಅಭಿವೃದ್ಧಿ ಸಮಿತಿ ಅ. 2ರಂದು ಗಾಂಧಿ ಕಟ್ಟೆ ಸ್ಥಳದಲ್ಲಿ ಸಾಂಕೇತಿಕವಾಗಿ ಗಾಂಧಿ ಜಯಂತಿ ಆಚರಿಸಲು ನಿರ್ಧರಿಸಿದೆ. ರಾಷ್ಟ್ರಪಿತನ ಭಾವಚಿತ್ರ ಇಟ್ಟು ಪುಷ್ಪಾರ್ಚನೆ ಮಾಡಲಿದ್ದೇವೆ. ಪ್ರತೀ ವರ್ಷ ಗಾಂಧಿ ಪ್ರತಿಮೆಗೆ ಹಾರಾರ್ಪಣೆ ಮಾಡುತ್ತಿದ್ದೆವು. ಈ ಬಾರಿ ಅದಾಗುತ್ತಿಲ್ಲ ಎಂಬುದು ಬೇಸರದ ಸಂಗತಿ ಎಂದು ಸಮಿತಿಯ ಮುಖಂಡ ಕೃಷ್ಣ ಪ್ರಸಾದ್ ಆಳ್ವ ಪ್ರತಿಕ್ರಿಯಿಸಿದ್ದಾರೆ.
ಗಾಂಧಿ ಭೇಟಿ ನೆನಪು
ಮಹಾತ್ಮಾ ಗಾಂಧೀಜಿ ಅವರು ಸ್ವಾತಂತ್ರ್ಯ ಚಳವಳಿಯ ಹಿನ್ನೆಲೆಯಲ್ಲಿ 1934ರಲ್ಲಿ ಪುತ್ತೂರಿಗೆ ಆಗಮಿಸಿದ್ದರು. ಇಲ್ಲಿನ ಕೇಂದ್ರ ಸ್ಥಾನದ ಬಸ್ಸು ನಿಲ್ದಾಣದ ಬಳಿಯಲ್ಲಿದ್ದ ಅಶ್ವತ್ಥ ಮರದ ಅಡಿಯಲ್ಲಿ ಜನರನ್ನು ಉದ್ದೇಶಿಸಿ ಮಾತನಾಡಿದ್ದರು. ಆ ಸಂದರ್ಭದಲ್ಲಿ ಅವರನ್ನು ಹಿರಿಯರಾಗಿದ್ದ ಕಾರ್ನಾಡ್ ಸದಾಶಿವ ರಾಯ, ಡಾ| ಶಿವರಾಮ ಕಾರಂತ, ಸುಂದರ್ ರಾವ್ ಸ್ವಾಗತಿಸಿ, ಗೌರವಿಸಿದ್ದರು.
ಪುತ್ತೂರಿಗೆ ಆಗಮಿಸಿದ್ದಾಗ ಮೊದಲಿಗೆ ರಾಗಿದಕುಮೇರು ಕಾಲನಿಗೆ ತೆರಳಿದ್ದ ಗಾಂಧೀಜಿ, ಕೋರ್ಟ್ ರಸ್ತೆಯಲ್ಲಿರುವ ಸುಂದರ್ ರಾವ್ ಅವರ ಮನೆಯಲ್ಲಿ ಸ್ಪಲ್ಪ ಹೊತ್ತು ವಿಶ್ರಾಂತಿ ಪಡೆದಿದ್ದರು. ಆ ಬಳಿಕ ಬಸ್ಸು ನಿಲ್ದಾಣದ ಬಳಿಯಲ್ಲಿರುವ ಅಶ್ವತ್ಥ ಮರದ ಅಡಿಯಲ್ಲಿ ಸಾರ್ವಜನಿಕರನ್ನು ಉದ್ದೇಶಿಸಿ ಮಾತನಾಡಿದ್ದರು. ಮಡಿಕೇರಿಯಿಂದ ಸುಳ್ಯ ರಸ್ತೆಯ ಮೂಲಕ ಕಾಲ್ನಡಿಗೆಯಲ್ಲಿ ಪುತ್ತೂರಿಗೆ ಆಗಮಿಸಿದ ಮಹಾತ್ಮಾ ಗಾಂಧೀಜಿ ಅವರು ಇಲ್ಲಿಂದ ಮಂಗಳೂರು ಮೂಲಕ ತೆರಳಿದ್ದರು ಎಂದು ಹಿರಿಯರು ನೆನಪಿಸಿಕೊಳ್ಳುತ್ತಾರೆ.
ಬಾವಿ ನಿರ್ಲಕ್ಷ್ಯ
ಗಾಂಧೀಜಿ ನಗರದ ಹೊರವಲಯದಲ್ಲಿರುವ ರಾಗಿದಕುಮೇರು ದಲಿತ ಕಾಲನಿ ಹಾಗೂ ಬೊಟ್ಟತ್ತಾರು (ಬ್ರಹ್ಮನಗರ) ಕಾಲನಿಗೆ ಭೇಟಿ ನೀಡಿ ಅಲ್ಲಿನ ದಲಿತರ ಪರಿಸ್ಥಿತಿಯನ್ನು ಅವಲೋಕನ ಮಾಡಿದ್ದರು. ಈ ಸಂದರ್ಭ ರಾಗಿದಕುಮೇರಿ ಕಾಲನಿಯ ಜನರು ಕುಡಿಯಲು ತೋಡಿನ ನೀರನ್ನು ಬಳಸುತ್ತಿರುವುದನ್ನು ಗಮನಿಸಿದ ಗಾಂಧೀಜಿ ಅಲ್ಲೊಂದು ತೆರೆದ ಬಾವಿ ತೋಡಿಸುವಂತೆ ಸೂಚನೆ ನೀಡಿದ್ದರು. ಕಾಲನಿಯ ಜನರಿಗೆ ಕುಡಿಯುವ ನೀರಿಗಾಗಿ ತೆರೆದ ಬಾವಿ ನಿರ್ಮಿಸಲಾಗಿತ್ತು. ಆ ಬಾವಿ ಈಗಲೂ ಇದ್ದರೂ ಬಳಕೆಯಾಗುತ್ತಿಲ್ಲ. ಗಾಂಧೀಜಿ ನೆನಪಿನ ಬಾವಿಯನ್ನು ಅಭಿವೃದ್ಧಿಪಡಿಸಿ ಮತ್ತೆ ಬಳಕೆ ಮಾಡಬೇಕೆನ್ನುವ ಆಗ್ರಹ ವ್ಯಕ್ತವಾದರೂ ಇದುವರೆಗೆ ಸಾಧ್ಯವಾಗಿಲ್ಲ. ಪುತ್ತೂರು ಸಹಾಯಕ ಆಯುಕ್ತರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದರೂ ಕ್ರಮ ಕೈಗೊಂಡಿಲ್ಲ.
ನಿರೀಕ್ಷೆ ಈಡೇರಲಿಲ್ಲ
ಗಾಂಧಿ ಕಟ್ಟೆಯ ತಡೆಯಾಜ್ಞೆ ತೆರವಿಗೆ ನಗರಸಭೆ ಹೈಕೋರ್ಟ್‌ನಲ್ಲಿ ಪ್ರಯತ್ನ ನಡೆಸುತ್ತಿದೆ. ಸಮಯ ಇನ್ನೂ ಒಂದು ತಿಂಗಳು ಮುಂದಕ್ಕೆ ಹೋಗಿದೆ. ಗಾಂಧಿ ಜಯಂತಿಗೆ ಮುನ್ನ ತೊಡಕು ನಿವಾರಣೆಯಾದೀತು ಎಂಬ ನಿರೀಕ್ಷೆ ಇತ್ತು. ಅದು ಈಡೇರಿಲ್ಲ.
– ರೂಪಾ ಟಿ. ಶೆಟ್ಟಿ, ಪೌರಾಯುಕ್ತೆ, ನಗರಸಭೆ
ಶೀಘ್ರ ಕಟ್ಟೆ ನಿರ್ಮಾಣವಾಗಲಿ
ಮಹಾತ್ಮಾ ಗಾಂಧೀಜಿಯವರ ಕುರಿತು ಆಡಳಿತ ವ್ಯವಸ್ಥೆ ನಿರ್ಲಕ್ಷ್ಯದ ಧೋರಣೆ ತೋರದು ಎನ್ನುವ ನಂಬಿಕೆ, ಭರವಸೆ ಇದೆ. ಗಾಂಧಿ ಕಟ್ಟೆ ಶೀಘ್ರದಲ್ಲಿ ಆಗಬೇಕು ಎಂದು ಆಗ್ರಹಿಸುತ್ತಿದ್ದೇವೆ. ಈ ನಿಟ್ಟಿನಲ್ಲಿ ನಮ್ಮ ಹೋರಾಟಗಳೂ ಮುಂದುವರಿಯಲಿವೆ. ಈ ಬಾರಿ ಅದೇ ಸ್ಥಳದಲ್ಲಿ ಸಾಂಕೇತಿಕವಾಗಿ ಗಾಂಧಿ ಜಯಂತಿ ಆಚರಿಸುತ್ತೇವೆ. ಗಾಂಧೀಜಿಯವರ 150ನೇ ಜನ್ಮದಿನಾಚರಣೆಯ ಹಿನ್ನೆಲೆಯಲ್ಲಿ ಸಮಿತಿಯಿಂದ ಈ ವರ್ಷವಿಡೀ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದೇವೆ.
– ಕೃಷ್ಣಪ್ರಸಾದ್ ಆಳ್ವ, ಸಂಚಾಲಕ, ಗಾಂಧಿ ಕಟ್ಟೆ ಅಭಿವೃದ್ಧಿ ಸಮಿತಿ
ರಾಜೇಶ್ ಪಟ್ಟೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vitla-ಉಕ್ಕುಡ -ಪಡಿಬಾಗಿಲು ಅಂತರ್ ರಾಜ್ಯ ಹೆದ್ದಾರಿಯ ಅವ್ಯವಸ್ಥೆ: ರಸ್ತೆ ತಡೆದು ಪ್ರತಿಭಟನೆ
Belthangady: ಈ ಪುಟ್ಟ ಪೋರನಿಗಿದೆ 300 ವಿದೇಶಿ ಹಣ್ಣಿನ ಗಿಡ ಪರಿಚಯ!
Dharmasthala: ಲಕ್ಷದೀಪಗಳ ಜಗಮಗ; ವಿದ್ಯುತ್ ದೀಪಗಳಿಂದ ಶೃಂಗಾರ
Dharmasthala: ಇಂದಿನಿಂದ ಲಕ್ಷದೀಪೋತ್ಸವ… ರಾಜ್ಯಮಟ್ಟದ ವಸ್ತು ಪ್ರದರ್ಶನಕ್ಕೆ ಚಾಲನೆ
ಬೆಳ್ತಂಗಡಿ: ಗ್ರಾಪಂ 3ಸದಸ್ಯ ಸ್ಥಾನಕ್ಕೆ ಉಪ ಚುನಾವಣೆ, ಕಾಂಗ್ರೆಸ್ ಬೆಂಬಲಿತ 3ಅಭ್ಯರ್ಥಿಗಳ ಜಯ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Udupi: ಬಿಎಸ್ಸೆನ್ನೆಲ್ ಟವರ್ ನಿರ್ವಹಣೆ ಹೊಣೆ ಪಂಚಾಯತ್ ಹೆಗಲಿಗೆ
Rapper Badshah: ಗಾಯಕ ಬಾದ್‌ಶಾ ಒಡೆತನದ ಬಾರ್ & ಕ್ಲಬ್ ಹೊರಗೆ ಬಾಂ*ಬ್ ಸ್ಪೋ*ಟ
Hampankatte: ಸಿಟಿ ಮಾರ್ಕೆಟ್ ರಸ್ತೆಗೆ ಬೇಕಿದೆ ಕಾಯಕಲ್ಪ
Mangaluru: ಪಿ.ಎಂ. ರಾವ್ ರಸ್ತೆಯಲ್ಲಿ ಮತ್ತೆ ಎಲ್ಲೆಂದರಲ್ಲಿ ವಾಹನ ನಿಲುಗಡೆ
Thirthahalli: ತುಂಗಾ ಕಮಾನು ಸೇತುವೆ ಬಳಿ ಪತ್ತೆಯಾಗಿದ್ದ ಅಸ್ತಿ ಪಂಜರ ತಂದು ಹಾಕಿದ್ಯಾರು!!?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.