ಬೆಳ್ತಂಗಡಿ: ಬಂದಾರು ಗ್ರಾಮದ ಬಟ್ಲಡ್ಕ ಎಂಬಲ್ಲಿ ಅಕ್ರಮ ಮರಳು ಅಡ್ಡೆಗೆ ದಾಳಿ
Team Udayavani, Oct 12, 2021, 12:00 PM IST
ಬೆಳ್ತಂಗಡಿ: ತಾಲೂಕಿನ ಬಂದಾರು ಗ್ರಾಮದ ಬಟ್ಲಡ್ಕ ಎಂಬಲ್ಲಿ ನೇತ್ರಾವತಿ ನದಿಯಿಂದ ಅಕ್ರಮವಾಗಿ ಡ್ರೆಜ್ಜಿಂಗ್ ಮೂಲಕ ಮರಳು ತೆಗೆಯುತ್ತಿದ್ದ ಅಡ್ಡೆಗೆ ಧರ್ಮಸ್ಥಳ ಪೊಲೀಸ್ ಉಪನಿರೀಕ್ಷಕರ ಕೃಷ್ಣಕಾಂತ್ ಎ. ಅವರ ತಂಡ ದಾಳಿ ನಡೆಸಿ 39 ಲಕ್ಷ ರೂ. ಮೌಲ್ಯದ ಸೊತ್ತುಗಳ ವಶಪಡಿಸಿದ್ದಾರೆ.
ಸಂದೇಶ ಮತ್ತು ಜಗದೀಶ ಎಂಬುವರು ಅಕ್ರಮವಾಗಿ ಮರಳು ತೆಗೆದು ಸಾಗಾಟಮಾಡುತ್ತಿರುವುದರ ಖಚಿತ ಮಾಹಿತಿ ಮೇರೆಗೆ ಸ್ಥಳಕ್ಕೆ ಪೊಲೀಸರು ದಾಳಿ ನಡೆಸಿದ್ದಾರೆ.
ದಾಳಿ ವೇಳೆ ಮರಳು ತೆಗೆಯುತ್ತಿದ್ದವರು ಪರಾರಿಯಾಗಿದ್ದು, ಸ್ಥಳದಲ್ಲಿದ್ದ ಡ್ರೆಜ್ಜಿಂಗ್ ಮಿಷನ್ -1 ಮತ್ತು ನದಿ ತೀರದಲ್ಲಿ ಹಿಟಾಚಿ-1 ಹಾಗೂ ಮರಳು ತುಂಬಿದ 4 ಟಿಪ್ಪರ್ ಲಾರಿಗಳನ್ನು ವಶಕ್ಕೆ ಪಡೆಯಲಾಗಿದೆ.
ಆರೋಪಿಗಳು ಯಾವುದೇ ಪರವಾನಿಗೆ ಇಲ್ಲದೇ ಮರಳನ್ನು ನದಿಯಿಂದ ಕಳವು ಮಾಡಿ ಅಕ್ರಮವಾಗಿ ಸಾಗಾಟ ಮಾಡುತ್ತಿರುವುದು ಕಂಡು ಬಂದ ಮೇರೆಗೆ ಅಂದಾಜು 39,00,000 ಲಕ್ಷ ರೂ. ಮತ್ತು ಮರಳಿನ ಅಂದಾಜು ಮೌಲ್ಯ 16,000 ರೂ. ಸೊತ್ತುಗಳ ಸ್ವಾಧೀನ ಪಡಿಸಲಾಗಿದೆ.
ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಅಕ್ರ 60-2021 ಕಲಂ 379 ಜೊತೆಗೆ 34 ಐಪಿಸಿ ದೂರು ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.