ಸುಳ್ಯ: ವಿದ್ಯಾರ್ಥಿನಿಗೆ ಹಲ್ಲೆ ಆರೋಪ; ದೂರು, ಪ್ರತಿದೂರು ದಾಖಲು


Team Udayavani, Dec 29, 2022, 11:47 PM IST

tdy-42

ಸುಳ್ಯ:  ಸುಳ್ಯದ ಖಾಸಗಿ ದಂತ ವೈದ್ಯಕೀಯ ಕಾಲೇಜಿನ  ಹಿರಿಯ ವಿದ್ಯಾರ್ಥಿಗಳು ಜಾತಿ ನಿಂದನೆ ಮಾಡಿ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿ ವಿದ್ಯಾರ್ಥಿನಿ ಪೊಲೀಸ್‌ ಠಾಣೆಗೆ ದೂರು ನೀಡಿದ್ದಾರೆ. ಆರೋಪ ಎದುರಿಸುತ್ತಿರುವ ವಿದ್ಯಾರ್ಥಿಗಳು ಕೂಡ ತಮ್ಮ ಮೇಲೆ ಹಲ್ಲೆ ನಡೆಸಲಾಗಿದೆ ಎಂದು ಠಾಣೆಗೆ ಪ್ರತಿದೂರು ನೀಡಿದ್ದಾರೆ.

ಬೆಂಗಳೂರು ಮೂಲದ   ಡಾ| ಪಲ್ಲವಿ ದೂರು ನೀಡಿದ ವಿದ್ಯಾರ್ಥಿನಿ.  ಕಳೆದ 6 ತಿಂಗಳಿನಿಂದ ತಾನು ಕಲಿಯುತ್ತಿರುವ ಕಾಲೇಜಿನ ಸಹಪಾಠಿ ವೈದ್ಯರಾದ ಡಾ| ವಿಶಾಕ್‌, ಡಾ| ಐಶ್ವರ್ಯಾ ಆರ್‌., ಡಾ| ಅಲ#ಮೇರಿ ಮ್ಯಾಥ್ಯೂ, ಡಾ| ಡೆನಲ್‌ ಸಭಾ ಸ್ಟೀಲ್‌, ಡಾ| ರಿಷಿಕೇಶ್‌, ದಯಾ ಆನ್‌ ವರ್ಗೀಸ್‌ ಮತ್ತು ಇತರರು ನನಗೆ ಮಾನಸಿಕವಾಗಿ ಕಿರುಕುಳ ನೀಡುತ್ತಿದ್ದು, ಅವಾಚ್ಯ ಶಬ್ದಗಳಿಂದ ನಿಂದಿಸುತ್ತಿದ್ದರು. ಡಿ. 21ರಂದು ರಾತ್ರಿ ಅಣ್ಣ ವಿಜಯ್‌ ಮತ್ತು ಸಹಪಾಠಿಯೋರ್ವರೊಂದಿಗಿದ್ದ ಸಂದರ್ಭ ನಮ್ಮನ್ನು ರಸ್ತೆಯಲ್ಲಿ ಅಡ್ಡಗಟ್ಟಿ ಜಾತಿ ನಿಂದನೆ ಮಾಡಿ ಅವಾಚ್ಯ ಶಬ್ದಗಳಿಂದ ನಿಂದಿಸಿ, ಹಲ್ಲೆ ನಡೆಸಿ ಪರಾರಿಯಾಗಿದ್ದಾರೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.

ಇದೇ ಘಟನೆಗೆ ಸಂಬಂಧಿಸಿದಂತೆ ಡಾ| ವಿಶಾಕ್‌ ಪಣಿಕ್ಕರ್‌ ಕೂಡ ಪೊಲೀಸ್‌ ಠಾಣೆಗೆ ದೂರು ನೀಡಿದ್ದು, ಡಾ| ಪಲ್ಲವಿ, ಡಾ| ಹನೀಶ್‌, ಪಲ್ಲವಿ ಅಣ್ಣ ಮತ್ತು ಇನ್ನೋರ್ವ ಅಪರಿಚಿತ ವ್ಯಕ್ತಿಯ ಮೇಲೆ ದೂರು ನೀಡಿದ್ದಾರೆ. ಡಿ. 21ರಂದು ರಾತ್ರಿ 10.30ಕ್ಕೆ  ಸ್ನೇಹಿತನನ್ನು ಪಿಜಿಗೆ ಡ್ರಾಪ್‌ ಮಾಡಲು ಹೋಗುತ್ತಿದ್ದಾಗ ಕಾರೊಂದು ಬೆನ್ನಟ್ಟಿ ಬಂದು ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆ ಮಾಡಿದ್ದಾರೆ.  ಕಾರಿನಲ್ಲಿ ವೈದ್ಯರಾದ ಪಲ್ಲವಿ, ಅನೀಶ್‌, ಪಲ್ಲವಿಯ ಅಣ್ಣ ಹಾಗೂ ಅಪರಿಚಿತ ವ್ಯಕ್ತಿ ಓರ್ವರು ಇದ್ದರು ಎಂದು ದೂರಿನಲ್ಲಿ ತಿಳಿಸಲಾಗಿದೆ. ಸುಳ್ಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸಂಸ್ಥೆಯ ಸ್ಪಷ್ಟನೆ: ಡಾ| ಪಲ್ಲವಿ  ದೂರಿರುವಂತೆ ಘಟನೆ ಸಾರ್ವಜನಿಕ ಸ್ಥಳದಲ್ಲಿ ನಡೆದಿದೆ. ಆರು ತಿಂಗಳಿನಿಂದ ರ್ಯಾಗಿಂಗ್‌ ನಡೆದಿರುತ್ತದೆ ಎಂಬ ದೂರಿಗೆ ಸಂಬಂಧಿಸಿದಂತೆ ಸಂಸ್ಥೆಗೆ ಯಾವುದೇ ರೀತಿಯ ದೂರು ಬಂದಿಲ್ಲ. ಡಿ. 21ರಂದು ರಾತ್ರಿ ಹಲ್ಲೆ ನಡೆಸಿ ರುವುದನ್ನು ಪ್ರಾಂಶುಪಾಲರಿಗೆ ತಿಳಿಸಿರುತ್ತಾರೆ. ಡಾ| ಪಲ್ಲವಿ ಹೇಳಿಕೊಂಡಂತೆ ನಮ್ಮ ಸಂಸ್ಥೆಯಲ್ಲಿ ಯಾವುದೇ ಪ್ರಾಧ್ಯಾಪಕರಾಗಲಿ, ವಿದ್ಯಾರ್ಥಿಗಳಾಗಲಿ ಜಾತಿ ನಿಂದನೆ ಮಾಡಿ ಹಿಂಸೆ ಕೊಟ್ಟಿರುವುದಿಲ್ಲ. ಇದೊಂದು ಸ್ವಯಂ ಹೇಳಿಕೆಯಾಗಿದ್ದು ಸತ್ಯಕ್ಕೆ ದೂರವಾಗಿದೆ ಎಂದು ಸಂಸ್ಥೆಯು ಸ್ಪಷ್ಟೀಕರಣ ನೀಡಿದೆ.

ಟಾಪ್ ನ್ಯೂಸ್

court

Himachal Pradesh;ನಷ್ಟದಲ್ಲಿರುವ ಹೊಟೇಲ್‌ ಮುಚ್ಚಲು ಹೈಕೋರ್ಟ್‌ ಆದೇಶ

1-moi

Prime Minister Modi; ಗಯಾನಾ, ಡೊಮಿನಿಕಾ ಗೌರವ ಪ್ರದಾನ

Dinesh Gundu Rao: ಅನರ್ಹರ ಕಾರ್ಡ್‌ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ

Dinesh Gundu Rao: ಅನರ್ಹರ ಕಾರ್ಡ್‌ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ

1-jaga

Waqf ಮಸೂದೆ ಕರಡು ವರದಿ ಸಿದ್ಧ: ಜೆಪಿಸಿ ಅಧ್ಯಕ್ಷ ಪಾಲ್‌ ಘೋಷಣೆ

Court: ಮಾವೋವಾದಿ ಸೋಮನ್‌ ಕಾಸರಗೋಡು ಕೋರ್ಟಿಗೆ ಹಾಜರು

Court: ಮಾವೋವಾದಿ ಸೋಮನ್‌ ಕಾಸರಗೋಡು ಕೋರ್ಟಿಗೆ ಹಾಜರು

Kasaragod: ಪತಿಯಿಂದ ಮಹಿಳಾ ಎಸ್‌ಐ ಹತ್ಯೆ

Kasaragod: ಪತಿಯಿಂದ ಮಹಿಳಾ ಎಸ್‌ಐ ಹತ್ಯೆ

Udupi: ಜಿಲ್ಲಾಧಿಕಾರಿ ಫೋಟೋ ದುರ್ಬಳಕೆ ಪೇಸ್‌ಬುಕ್‌ನಲ್ಲಿ ಹಣಕ್ಕೆ ಬೇಡಿಕೆ: ದೂರು

Udupi: ಜಿಲ್ಲಾಧಿಕಾರಿ ಫೋಟೋ ದುರ್ಬಳಕೆ ಪೇಸ್‌ಬುಕ್‌ನಲ್ಲಿ ಹಣಕ್ಕೆ ಬೇಡಿಕೆ: ದೂರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಯಾತ್ರಾರ್ಥಿಯಿಂದ ಸೌತಡ್ಕ ಕ್ಷೇತ್ರದ ಸಿಬಂದಿ ಮೇಲೆ ಹಲ್ಲೆ

Kokkada: ಯಾತ್ರಾರ್ಥಿಯಿಂದ ಸೌತಡ್ಕ ಕ್ಷೇತ್ರದ ಸಿಬಂದಿ ಮೇಲೆ ಹಲ್ಲೆ

Puttur: ಸ್ಕೂಲ್‌ ಬಸ್‌ಗೆ ಢಿಕ್ಕಿಯಾಗುವುದನ್ನು ತಪ್ಪಿಸಿ ಮನೆಗೆ ನುಗ್ಗಿದ ಖಾಸಗಿ ಬಸ್‌

Puttur: ಸ್ಕೂಲ್‌ ಬಸ್‌ಗೆ ಢಿಕ್ಕಿಯಾಗುವುದನ್ನು ತಪ್ಪಿಸಿ ಮನೆಗೆ ನುಗ್ಗಿದ ಖಾಸಗಿ ಬಸ್‌

Puttur: ಕಾರು ಚಾಲಕನಿಗೆ ಮೂರ್ಛೆ ರೋಗ: ಅಪಾಯದಿಂದ ಪಾರು

Puttur: ಕಾರು ಚಾಲಕನಿಗೆ ಮೂರ್ಛೆ ರೋಗ: ಅಪಾಯದಿಂದ ಪಾರು

Shishila:ಮಕ್ಕಳನ್ನು ಶಾಲೆಗೆ ಕಳುಹಿಸುವ ವೇಳೆ ಕಾಡಾನೆ ದಾಳಿ;ಸೊಂಡಿಲಿನಿಂದ ಬೈಕ್ ಕೆಡವಿದ ಆನೆ

Shishila:ಮಕ್ಕಳನ್ನು ಶಾಲೆಗೆ ಕಳುಹಿಸುವ ವೇಳೆ ಕಾಡಾನೆ ದಾಳಿ;ಸೊಂಡಿಲಿನಿಂದ ಬೈಕ್ ಕೆಡವಿದ ಆನೆ

5-vitla

Vitla: ಕೊಳೆತ ಸ್ಥಿತಿಯಲ್ಲಿ ಮೃತದೇಹ ಪತ್ತೆ; 2 ದಿನಗಳ ಹಿಂದೆ ಮೃತಪಟ್ಟಿರುವುದಾಗಿ ಶಂಕೆ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

1-GM

General Motors;1,000 ಉದ್ಯೋಗಿಗಳು ಕೆಲಸದಿಂದ ವಜಾ

1-wqewe

Tallest and shortest; ವಿಶ್ವದ ಅತೀ ಕುಬ್ಜ, ಅತೀ ಎತ್ತರದ ಮಹಿಳೆಯರ ಸಮಾಗಮ

sensex

Sensex ಪತನ, ರೂಪಾಯಿ ಮೌಲ್ಯ ಸಾರ್ವಕಾಲಿಕ ಕುಸಿತ

train-track

Train ಜನಶತಾಬ್ದಿ ಎಕ್ಸ್‌ಪ್ರೆಸ್‌ನಲ್ಲಿ ಹಾವು ಪ್ರತ್ಯಕ್ಷ: ತನಿಖೆಗೆ ಆದೇಶ

court

Himachal Pradesh;ನಷ್ಟದಲ್ಲಿರುವ ಹೊಟೇಲ್‌ ಮುಚ್ಚಲು ಹೈಕೋರ್ಟ್‌ ಆದೇಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.