Bantwal: ಅಪರೂಪದ ಉಡಾ ಬೇಟೆಯಾಡಿ ಫೋಟೋಗೆ ಪೋಸ್ ಕೊಟ್ಟ ವ್ಯಕ್ತಿ; ದೂರು ದಾಖಲು
Team Udayavani, Oct 15, 2023, 12:16 PM IST
ಬಂಟ್ವಾಳ: ಭಾರತದ ಅಪರೂಪದ ವನ್ಯ ಜೀವಿಗಳಲ್ಲಿ ಒಂದಾದ ಉಡಾ(indian monitor lizard) ವನ್ನು ವ್ಯಕ್ತಿಯೋರ್ವ ಬೇಟೆಯಾಡಿ ಬಳಿಕ ಅದನ್ನು ಫೋಟೊಗಳಿಗೆ ಪೋಸ್ ನೀಡಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆ ಬಂಟ್ವಾಳದ ವಗ್ಗದಲ್ಲಿ ಬೆಳಕಿಗೆ ಬಂದಿದೆ.
ಉಡಾವನ್ನು ಸಾಯಿಸಿದ ವ್ಯಕ್ತಿಯನ್ನು ವಗ್ಗದ ಸುಧಾಕರ ಎಂದು ಗುರುತ್ತಿಸಲಾಗಿದ್ದು ಆತನ ವಿರುದ್ದ ವನ್ಯ ಜೀವಿ ಸಂರಕ್ಷಣಾ ಕಾಯಿದೆ 1972 ಅನ್ವಯ ಕೇಸ್ ದಾಖಲು ಮಾಡಿದ್ದಾರೆ. ಅಕ್ಟೋಬರ್ 11 ರಂದು ಘಟನೆ ಬೆಳಕಿಗೆ ಬಂದಿದ್ದು ಬೃಹತ್ ಗಾತ್ರದ ಉಡವನ್ನು ಹಿಂಸಾತ್ಮಕ ರೀತಿಯನ್ನು ಸಾಯಿಸಿ ಬಳಿಕ ಅದನ್ನು ತೆಗೆದುಕೊಂಡು ವಿಜ್ರಂಭಿಸುತ್ತಿದ್ದ ಎಂದು ಸ್ಥಳಿಯರು ಮಾಹಿತಿ ನೀಡಿದ್ದು ಜೊತೆಗೆ ಸಾಮಾಜಿಕ ಜಾಲಾ ತಾಣಗಳಲ್ಲಿ ಅದನ್ನು ಹರಿಯ ಬಿಟ್ಟಿದ್ದ.
ದೂರು ದಾಖಲಾಗುತ್ತಿದ್ದಂತೆ ಆರೋಪಿ ತಲೆ ಮರೆಸಿಕೊಂಡಿದ್ದು, ಬಂಟ್ವಾಳ ವಲಯ ಅರಣ್ಯಾಧಿಕಾರಿಯವರು ಪ್ರಕರಣದ ತನಿಖೆ ನಡಸುತ್ತಿದ್ದಾರೆ. ಎಂದು ಉಪ ಅರಣ್ಯ ಸಂರಕ್ಷಣಾ ಅಧಿಕಾರಿ ಅಂಥೋಣಿ ಎಸ್. ಮರಿಯಪ್ಪ ಮಾಹಿತಿ ನೀಡಿದ್ದಾರೆ.
ಇದನ್ನೂ ಓದಿ: KSRTC ಬಸ್ಸಿನೊಳಗೆ ಕೋಳಿ ಮಾಂಸ ತಂದ ಪ್ರಯಾಣಿಕ, ಬಸ್ ಸಮೇತ ಠಾಣೆಗೊಯ್ದ ಚಾಲಕ
ಉಡಾ ಸಾಯಿಸಿದ ಬಗ್ಗೆ ಪ್ರಕರಣ ದಾಖಲು ಮಾಡಲಾಗಿದ್ದು, ಆರೋಪಿ ಸುಧಾಕರ್ ತಲೆ ಮರೆಸಿಕೊಂಡಿದ್ದಾನೆ. ಆತ ಉಡಾ ಸಾಯಿಸಿ ಶೇರ್ ಮಾಡಿದ ಸಾಮಾಜಿಕ ಜಾಲಾತಾಣ ವಾಟ್ಸ್‌ಅಪ್ ಎಡ್ಮಿನ್ ನನ್ನು ವಿಚಾರಣೆ ಕರೆಸಿ ತನಿಖೆ ನಡಸಿದ್ದು ಆತನ ಸಿಡಿಆರ್ ಪರಿಶೀಲನೆ ನಡೆಸುತ್ತಿದ್ದು ಶೀಘ್ರದಲ್ಲೇ ಆರೋಪಿಯನ್ನು ಬಂಧಿಸಲಾಗುವುದು ಎಂದಿದ್ದಾರೆ.
ಚರ್ಮಾ, ಮೂಳೆಗಳಿಗಾಗಿ ಬೇಟೆಗಾರರ ವಕ್ರ ದೃಷ್ಟಿಗೆ ಬಿದ್ದಿರುವ ಉಡಾ ಅವನತಿಯ ಹಾದಿಯಲ್ಲಿದ್ದು ಇದನ್ನು (ಪ್ರವರ್ಗ A)ಯನ್ನುಅಳಿವಿನ ಅಂಚಿನಲ್ಲಿರುವ ಅಪರೂಪದ ಸರೀಸೃಪ ಎಂದು ಘೋಷಣೆ ಮಾಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.