ಕಡಬದ ವಿದ್ಯಾರ್ಥಿಗಳಲ್ಲಿ ಸಾಂಕ್ರಾಮಿಕ ಜ್ವರ: ಶಾಲೆಗೆ 1 ವಾರ ಕಾಲ ರಜೆ
Team Udayavani, Jun 23, 2022, 6:35 AM IST
ಕಡಬ: ಇಲ್ಲಿನ ಖಾಸಗಿ ಆಂಗ್ಲ ಮಾಧ್ಯಮ ಶಾಲೆಯ ಹಲವು ವಿದ್ಯಾರ್ಥಿಗಳಿಗೆ ಸಾಂಕ್ರಾಮಿಕ ಜ್ವರ ಹಾಗೂ ಚಿಕನ್‌ಪಾಕ್ಸ್ (ನೀರುಕೋಟ್ಲೆ) ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆಯ ಸೂಚನೆಯಂತೆ ಜೂ. 27ರ ತನಕ ರಜೆ ಘೋಷಿಸಲಾಗಿದೆ.
32 ವಿದ್ಯಾರ್ಥಿಗಳು ಮತ್ತು ಓರ್ವ ಶಿಕ್ಷಕಿಗೆ ಜ್ವರ ಹಾಗೂ ಚಿಕನ್‌ಪಾಕ್ಸ್ ಕಾಣಿಸಿಕೊಂಡಿದ್ದು, ಆರೋಗ್ಯ ಇಲಾಖೆಯ ಜಿಲ್ಲಾ ಮಟ್ಟದ ಅಧಿಕಾರಿಗಳು ಶಾಲೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿ ಅಗತ್ಯ ಸೂಚನೆಗಳನ್ನು ನೀಡಿದ್ದಾರೆ.
ಈ ಕಾಯಿಲೆ ಒಬ್ಬರಿಂದ ಒಬ್ಬರಿಗೆ ಹರಡುವ ಭೀತಿಯ ಹಿನ್ನೆಲೆಯಲ್ಲಿ ಮುಂಜಾಗ್ರತೆ ಕ್ರಮವಾಗಿ ಆರೋಗ್ಯ ಇಲಾಖೆಯ ಸಲಹೆಯಂತೆ ಶಾಲೆಗೆ 1 ವಾರ ರಜೆ ಘೋಷಿಸಲಾಗಿದೆ ಎಂದು ಪುತ್ತೂರು ಕ್ಷೇತ್ರ ಶಿಕ್ಷಣಾಧಿಕಾರಿ ಲೋಕೇಶ್ ಸಿ. ತಿಳಿಸಿದ್ದಾರೆ.
ಸ್ಥಳೀಯ ವೈದ್ಯಾಧಿಕಾರಿಗಳ ಜತೆಗೆ ಶಾಲೆಗೆ ಭೇಟಿ ನೀಡಿ ಮಾಹಿತಿ ಸಂಗ್ರಹಿಸಿ ರೋಗ ನಿಯಂತ್ರಣಕ್ಕೆ ಅಗತ್ಯ ಕ್ರಮಗಳನ್ನು ಕೈಗೊಂಡಿದ್ದೇವೆ. ವಿದ್ಯಾರ್ಥಿಯೊಬ್ಬ ಕುಂದಾಪುರದಲ್ಲಿರುವ ಸಂಬಂಧಿಕರ ಮನೆಗೆ ಹೋಗಿದ್ದ ವೇಳೆ ಅಲ್ಲಿನ ಮಕ್ಕಳನ್ನು ಬಾಧಿಸಿದ್ದ ಚಿಕನ್‌ಪಾಕ್ಸ್ ಆತನಿಗೂ ತಗಲಿತ್ತು. ಆತನಿಂದಾಗಿ ಶಾಲೆಯ ಇತರ ಮಕ್ಕಳಿಗೆ ಹರಡಿರುವುದು ನಮ್ಮ ಗಮನಕ್ಕೆ ಬಂದಿದೆ.
ನಮ್ಮ ಸಿಬಂದಿ ರೋಗಪೀಡಿತ ಮಕ್ಕಳ ಆರೋಗ್ಯ ಸ್ಥಿತಿಗತಿಯ ಬಗ್ಗೆ ಪ್ರತಿದಿನ ಆವಲೋಕನ ಮಾಡುತ್ತಿದ್ದಾರೆ. ಎಲ್ಲರೂ ಗುಣಮುಖರಾಗುತ್ತಿದ್ದಾರೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಆರೋಗ್ಯ ಇಲಾಖೆಯ ಸರ್ವೇಕ್ಷಣಾಧಿಕಾರಿ ಡಾ| ಜಗದೀಶ್ ಕೆ. ಅವರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
IFFI 2024: ಇದು ಕನ್ನಡದಲ್ಲೇ ಸಿನಿಮಾಗಳನ್ನು ಮಾಡುವ ಕಾಲ: ಚಿದಾನಂದ ಎಸ್. ನಾಯಕ್
School; ಮೊಟ್ಟೆ-ಬಾಳೆಹಣ್ಣು ವಿತರಣಾ ಜವಾಬ್ದಾರಿಯಿಂದ ಶಿಕ್ಷಕರ ಬಿಡುಗಡೆಗೊಳಿಸಿ
Shimoga: ಅರಣ್ಯ ಇಲಾಖೆ ಜತೆ ಸೇರಿ ಕಾಡಾನೆಗಳನ್ನು ಓಡಿಸಿದ ಜನ
ಬೆಳಗಾವಿ-ಐಫೋನ್‌ಗಾಗಿ ನಡೆಯಿತಾ ಯುವಕನ ಹತ್ಯೆ? ಪೊಲೀಸರಿಂದ ತೀವ್ರ ತನಿಖೆ
IPL: ಇನ್ನು ಮೂರು ಸೀಸನ್ ಐಪಿಎಲ್ ಗೆ ಈ ದೇಶಗಳ ಆಟಗಾರರು ಸಂಪೂರ್ಣ ಲಭ್ಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.