ಅಶ್ವತ್ಥ ಎಲೆಯಲ್ಲಿ ಮೋದಿ; ಸುಳ್ಯದ ಯುವಕನ ಕಲೆಗೆ ಪ್ರಧಾನಿ ಶ್ಲಾಘನೆ
Team Udayavani, Sep 18, 2020, 2:04 AM IST
ಮಂಗಳೂರು: ಕಲಾವಿದ ಶಶಿ ಅಡ್ಕಾರು ಅವರು ಅಶ್ವತ್ಥ ಎಲೆಯನ್ನು ಕಲಾತ್ಮಕವಾಗಿ ಕತ್ತರಿಸಿ ಮಾಡಿದ ಪ್ರಧಾನಿ ನರೇಂದ್ರ ಮೋದಿ ಅವರ ಚಿತ್ರವನ್ನು ಸ್ವತಃ ಮೋದಿಯವರೇ ತಮ್ಮ ಟ್ವಿಟರ್ ಖಾತೆಯಲ್ಲಿ ಹಂಚಿಕೊಂಡು ಶ್ಲಾಘನೆ ವ್ಯಕ್ತಪಡಿಸಿದ್ದಾರೆ.
ಮಂಗಳೂರಿನ ಸ್ವರೂಪ ಅಧ್ಯಯನ ಕೇಂದ್ರದಲ್ಲಿ ಕಲಾವಿದರಾಗಿದ್ದ ಶಶಿ ಅಡ್ಕಾರ್ ಅವರಿಗೆ ಕಲೆಯಲ್ಲಿ ಹೊಸತನ್ನು ಸೃಷ್ಟಿಸುವ ಹವ್ಯಾಸ. ಅದರಂತೆ ಪ್ರಧಾನಿ ನರೇಂದ್ರ ಮೋದಿಯವರ 70ನೇ ವರ್ಷದ ಜನ್ಮ ದಿನದ ಅಂಗವಾಗಿ ಮೋದಿ ಚಿತ್ರವನ್ನು ಅಶ್ವತ್ಥ ಎಲೆಯಲ್ಲೇ ರೂಪಿಸಿದ್ದರು. ಇದನ್ನು ಶಶಿ ಅವರ ಸಹೋದರ ಸಂದೇಶ್ ಅಡ್ಕಾರ್ ಅವರು ಪ್ರಧಾನಿಯವರಿಗೆ ಟ್ವೀಟ್ ಮಾಡಿದ್ದರು.
ಟ್ವೀಟ್ ನೋಡಿದ ಪ್ರಧಾನಿಯವರು ರೀಟ್ವೀಟ್ ಮೂಲಕ ತಮ್ಮ ಟ್ವೀಟರ್ ಖಾತೆಯಲ್ಲಿ ಚಿತ್ರವನ್ನು ಹಂಚಿಕೊಂಡಿದ್ದು, ಶಶಿ ಅವರ ಕ್ರಿಯಾಶೀಲತೆಯನ್ನು ಶ್ಲಾಘಿಸಿದ್ದಾರೆ. ಶಶಿ ಅವರು ಮಂಗಳೂರು ಸ್ವರೂಪ ಅಧ್ಯಯನ ಕೇಂದ್ರದ ನಿರ್ದೇಶಕ ಗೋಪಾಡ್ಕರ್ ಅವರ ಅಣ್ಣ ಶಿವರಾಮ ಅವರ ಪುತ್ರ.
@narendramodi @PMOIndia @narendramodi177
Happy Birthday Sir
Leaf Art pic.twitter.com/I3e0Ng5CW5— Sandesh (@sandeshadkar) September 17, 2020
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್
Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ
Madikeri ಅಪರಿಚಿತ ವಾಹನ ಡಿಕ್ಕಿ: ಚಿಕಿತ್ಸೆ ಫಲಿಸದೆ ವ್ಯಕ್ತಿ ಸಾವು
Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು
Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.