Bantwal ಬೀಡಿ ಉದ್ಯಮಿಯ ಮನೆಗೆ ಐಟಿ ದಾಳಿ ?
Team Udayavani, Oct 10, 2023, 11:35 PM IST
ಬಂಟ್ವಾಳ: ಬಂಟ್ವಾಳ ತಾಲೂಕಿನ ಪೆರ್ನೆಯ ಬೀಡಿ ಉದ್ಯಮಿಯೊಬ್ಬರ ಮನೆಯಲ್ಲಿ ಮಂಗಳವಾರ ಹತ್ತಾರು ಸರಕಾರಿ ವಾಹನಗಳು ಕಂಡುಬಂದಿದ್ದು, ಉದ್ಯಮಿಯ ಮನೆಗೆ ಐಟಿ ದಾಳಿಯಾಗಿದೆ ಎನ್ನಲಾಗಿದ್ದರೂ ಈ ಕುರಿತು ಯಾವುದೇ ಖಚಿತ ಮಾಹಿತಿ ಲಭ್ಯವಾಗಿಲ್ಲ.
ರಾ.ಹೆ.75ರ ಪೆರ್ನೆಯ ಕಡಂಬು ಬಳಿ ಹೆದ್ದಾರಿ ಅಂಚಿನಲ್ಲೇ ಉದ್ಯಮಿಯ ಮನೆ ಇದ್ದು, ಅನಿತಾ ಬೀಡಿ ಮಾಲಕ ಮಹಮ್ಮದ್ ಆಲಿಯವರ ಮನೆಗೆ ಅಧಿಕಾರಿಗಳು ತೆರಳಿ ದಾಖಲೆ ಪತ್ರಗಳನ್ನು ಪರಿಶೀಲನೆ ನಡೆಸಿದ್ದಾರೆ. ಆದರೆ ಯಾವ ಕಾರಣಕ್ಕಾಗಿ ಅಧಿಕಾರಿಗಳು ಅವರ ಮನೆಗೆ ಭೇಟಿ ನೀಡಿದ್ದಾರೆ, ಆದಾಯಕ್ಕಿಂತ ಹೆಚ್ಚಿನ ಆಸ್ತಿ ಪತ್ತೆಯಾಗಿದೆಯೇ, ತೆರಿಗೆ ವಂಚನೆಯ ಆರೋಪಗಳಿವೆಯೇ ಎಂಬುದು ತಿಳಿದುಬಂದಿಲ್ಲ.
ಅಧಿಕಾರಿಗಳ ಅಧಿಕೃತ ಹೇಳಿಕೆಯ ಬಳಿಕವೇ ಸತ್ಯಾಂಶ ಹೊರ ಬರಬೇಕಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.