ಭಾರತದಲ್ಲಿದೆ ಅಧ್ಯಾತ್ಮದ ತಿರುಳು: ಒಡಿಯೂರು ಶ್ರೀ

Team Udayavani, Feb 9, 2019, 9:57 AM IST

9-february-14.jpg

ಕಡಬ: ಆಧ್ಯಾತ್ಮದ ತಿರುಳು ಭಾರತ ದೇಶದ ಸಂಸ್ಕೃತಿಯಲ್ಲಿದೆ. ಆದಕ್ಕಾಗಿಯೇ ಇಡೀ ಜಗತ್ತಿನ ಜನರು ಶಾಂತಿಯನ್ನು ಅರಸಿಕೊಂಡು ಭಾರತದತ್ತ ಬರುತ್ತಿದ್ದಾರೆೆ ಎಂದು ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದ ಶ್ರೀ ಗುರುದೇವಾನಂದ ಸ್ವಾಮೀಜಿ ಹೇಳಿದರು.

ಅವರು ಬಿಳಿನೆಲೆ ಶ್ರೀ ಗೋಪಾಲಕೃಷ್ಣ ದೇವಾಲಯದಲ್ಲಿ ಧಾರ್ಮಿಕ ದತ್ತಿ ಮತ್ತು ಉಂಬಳಿ ಇಲಾಖೆಯ ಸಾಮಾನ್ಯ ಸಂಗ್ರಹಣ ನಿಧಿಯ 2 ಲಕ್ಷ ರೂ. ಅನುದಾನದೊಂದಿಗೆ ನಿರ್ಮಿಸಲಾದ ನೂತನ ಆಡಳಿತ ಕಚೇರಿಯ ಕಟ್ಟಡ ಹಾಗೂ ವಾರ್ಷಿಕ ಜಾತ್ರೆಯ ಪ್ರಯುಕ್ತ ಹಮ್ಮಿಕೊಳ್ಳಲಾದ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಉದ್ಘಾಟಿಸಿದ ಬಳಿಕ ಜರಗಿದ ಧಾರ್ಮಿಕ ಸಭೆಯಲ್ಲಿ ಆಶೀರ್ವಚನ ನೀಡಿದರು.

ಪಾಶ್ಚಾತ್ಯದ ದಾಸರಾಗಬೇಡಿ
ನಮ್ಮ ಸಂಸ್ಕೃತಿ ಮತ್ತು ಸಂಪ್ರದಾಯಗಳನ್ನು ಉಳಿಸಿಕೊಂಡು ಬೆಳೆಸುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ. ಆದರೆ ನಾವಿಂದು ನಮ್ಮ ಉದಾತ್ತ ಸಂಸ್ಕೃತಿಯ ಮೌಲ್ಯಗಳನ್ನು ಅರಿಯದೆ ಪಾಶ್ಚಾತ್ಯ ಸಂಸ್ಕೃತಿಯತ್ತ ವಾಲುತ್ತಿರುವುದು ಖೇದಕರ ಎಂದ‌ರು.

ಮುಖ್ಯ ಅತಿಥಿಯಾಗಿದ್ದ ನ್ಯಾಯವಾದಿ, ರಾಜ್ಯ ಧಾರ್ಮಿಕ ಪರಿಷತ್‌ ಸದಸ್ಯ ಜಗನ್ನಿವಾಸ ರಾವ್‌ ಎನ್‌.ಕೆ., ಜಿಲ್ಲಾ ಧಾರ್ಮಿಕ ಪರಿಷತ್‌ ಸದಸ್ಯೆ ವಿಮಲಾ ರಂಗಯ್ಯ, ವಾಸ್ತುಶಿಲ್ಪಿ ಕೃಷ್ಣ ಪ್ರಸಾದ ಮುನಿಯಂಗಳ, ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಸಮಗ್ರ ಅಭಿವೃದ್ಧಿ ಪ್ರಾಧಿಕಾರದ ಸದಸ್ಯ ಬಿಳಿನೆಲೆ ಗ್ರಾ.ಪಂ. ಮಾಜಿ ಅಧ್ಯಕ್ಷ ಸುಧೀರ್‌ ಕುಮಾರ್‌ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ದೇವಸ್ಥಾನದ ಆಡಳಿತ ಮೊಕ್ತೇಸರ ಚಕ್ರೇಶ್ವರ ಆರಿಗ, ಪ್ರಧಾನ ಅರ್ಚಕ ವೆಂಕಟೇಶ ಭಟ್, ಶ್ರೀ ಗೋಪಾಲಕೃಷ್ಣ ಭಜನ ಮಂಡಳಿ ಅಧ್ಯಕ್ಷ ಜನಾರ್ದನ ಗೌಡ, ಶ್ರೀಕೃಷ್ಣ ಮಹಿಳಾ ಭಜನ ಮಂಡಳಿ ಅಧ್ಯಕ್ಷೆ ಗಿರಿಜಾ ಗುಂಡಿಮಜಲು, ವ್ಯವಸ್ಥಾಪನ ಸಮಿತಿಯ ಸದಸ್ಯರಾದ ಕುಶಾಲಪ್ಪ ಗೌಡ, ಹಿರಿಯಣ್ಣ ಗೌಡ ಸೂಡ್ಲು, ಶೈಲಜಾ ಉದಯ ಕುಮಾರ್‌, ಯಶೋದಾ, ಪಾರ್ವತಿ ಉಪಸ್ಥಿತರಿದ್ದರು.

ಫ್ಯಾನ್‌ ಕೊಡುಗೆ
ಶ್ರೀ ವಿದ್ಯಾಭೂಷಣ ಅಭಿಮಾನಿ ಸಂಘ ಬಿಳಿನೆಲೆ-ಸುಬ್ರಹ್ಮಣ್ಯ ಇದರ ವತಿಯಿಂದ ಸಂಘದ ಅಧ್ಯಕ್ಷ ಸುರೇಶ್‌ ಮದೆಪರ್ಲ ಹಾಗೂ ಕೋಶಾಧಿಕಾರಿ ಸುಂದರ ಗೌಡ ಒಗ್ಗು ಅವರು ದೇವಸ್ಥಾನದಕ್ಕೆ ಫ್ಯಾನ್‌ ಅನ್ನು ಕೊಡುಗೆಯಾಗಿ ನೀಡಿದರು.

ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷ ಗೋಪಾಲಕೃಷ್ಣ ಬಿ. ಅವರು ಸ್ವಾಗತಿಸಿದರು. ನೀಲಪ್ಪ ಗೌಡ ಕಳಿಗೆ ವಂದಿಸಿದರು. ಮನೋಜ್‌ ನಿರೂಪಿಸಿದರು. ಅನಂತರ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.

ಅಹಂ ತೊರೆದಾಗ ಶಾಂತಿ, ನೆಮ್ಮದಿ
ನಾನು ಎನ್ನುವ ಅಹಂ ಮತ್ತು ಎಲ್ಲವೂ ನನಗೇ ಬೇಕು ಎನ್ನುವ ಸ್ವಾರ್ಥವನ್ನು ಮನುಷ್ಯ ಯಾವಾಗ ತೊರೆಯುತ್ತಾನೋ ಆವಾಗ ಮಾತ್ರ ಶಾಂತಿ ಮತ್ತು ನೆಮ್ಮದಿಯನ್ನು ಹೊಂದಲು ಸಾಧ್ಯ. ಮನುಷ್ಯ ತನ್ನ ಚಂಚಲ ಮನಸ್ಸಿನ ಮೇಲೆ ನಿಯಂತ್ರಣ ಸಾಧಿಸದೇ ಹೋದರೆ ಸುಖವಾಗಿರಲು ಸಾಧ್ಯವೇ ಇಲ್ಲ ಎಂದು ಶ್ರೀಗಳು ತಿಳಿಸಿದರು.

ಟಾಪ್ ನ್ಯೂಸ್

Visa Extended: ಬಾಂಗ್ಲಾ ಮಾಜಿ ಪ್ರಧಾನಿ ಶೇಖ್ ಹಸೀನಾ ಅವರ ವೀಸಾ ಅವಧಿ ವಿಸ್ತರಿಸಿದ ಭಾರತ

Visa Extended: ಬಾಂಗ್ಲಾ ಮಾಜಿ ಪ್ರಧಾನಿ ಶೇಖ್ ಹಸೀನಾ ಅವರ ವೀಸಾ ಅವಧಿ ವಿಸ್ತರಿಸಿದ ಭಾರತ

6-gangolli

Gangolli: ಮರದ ದಿಮ್ಮಿಗೆ ಡಿಕ್ಕಿ ಹೊಡೆದ ಮೀನುಗಾರಿಕಾ ದೋಣಿ

BBK11: ಫಿನಾಲೆ ಓಟದಿಂದ ಚೈತ್ರಾಳನ್ನು ಹೊರಗಿಟ್ಟ ಮನೆಮಂದಿ..ಕಣ್ಣೀರಿಟ್ಟ ಫೈಯರ್ ಬ್ರ್ಯಾಂಡ್‌

BBK11: ಫಿನಾಲೆ ಓಟದಿಂದ ಚೈತ್ರಾಳನ್ನು ಹೊರಗಿಟ್ಟ ಮನೆಮಂದಿ..ಕಣ್ಣೀರಿಟ್ಟ ಫೈಯರ್ ಬ್ರ್ಯಾಂಡ್‌

1-kadkona

Mudigere; ಕಾಫಿ ಎಸ್ಟೇಟ್ ನಲ್ಲಿ ಕಾಡುಕೋಣ ದಾಳಿ: ಅಸ್ಸಾಂ ಮೂಲದ ಕಾರ್ಮಿಕ ಮಹಿಳೆ ಮೃ*ತ್ಯು

1-H-R

Bollywood ನಲ್ಲಿ ಹೃತಿಕ್ ರೋಷನ್ 25 ವರ್ಷ; ಸಂಕೋಚ, ಆತಂಕ ಈಗಲೂ ಇದೆ!

Arrested: ಪೈಂಟ್‌ ಕೆಲಸಕ್ಕೆ ಬಂದು ಖ್ಯಾತ ನಟಿಯ ಮನೆಗೆ ಕನ್ನ; ಆರೋಪಿ ಬಂಧನ

Arrested: ಪೈಂಟ್‌ ಕೆಲಸಕ್ಕೆ ಬಂದು ಖ್ಯಾತ ನಟಿಯ ಮನೆಗೆ ಕನ್ನ; ಆರೋಪಿ ಬಂಧನ

v-narayanan

ISRO ಮುಂದೆ ಪ್ರಮುಖ ಕಾರ್ಯ ಯೋಜನೆಗಳಿವೆ: ನೂತನ ಅಧ್ಯಕ್ಷ ವಿ.ನಾರಾಯಣನ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

ಹೊಸ ಸೇರ್ಪಡೆ

7

Belman: ಅಗ್ನಿ ದುರಂತದ ಅಪಾಯ; ಟ್ರಾನ್ಸ್‌ಫಾರ್ಮರ್‌ ಸುತ್ತ ಸ್ವಚ್ಛತೆ

6

‌Network Problem: ಹಲೋ…ಹಲೋ…ಹಲೋ ಟೆಸ್ಟಿಂಗ್‌!

Visa Extended: ಬಾಂಗ್ಲಾ ಮಾಜಿ ಪ್ರಧಾನಿ ಶೇಖ್ ಹಸೀನಾ ಅವರ ವೀಸಾ ಅವಧಿ ವಿಸ್ತರಿಸಿದ ಭಾರತ

Visa Extended: ಬಾಂಗ್ಲಾ ಮಾಜಿ ಪ್ರಧಾನಿ ಶೇಖ್ ಹಸೀನಾ ಅವರ ವೀಸಾ ಅವಧಿ ವಿಸ್ತರಿಸಿದ ಭಾರತ

6-gangolli

Gangolli: ಮರದ ದಿಮ್ಮಿಗೆ ಡಿಕ್ಕಿ ಹೊಡೆದ ಮೀನುಗಾರಿಕಾ ದೋಣಿ

BBK11: ಫಿನಾಲೆ ಓಟದಿಂದ ಚೈತ್ರಾಳನ್ನು ಹೊರಗಿಟ್ಟ ಮನೆಮಂದಿ..ಕಣ್ಣೀರಿಟ್ಟ ಫೈಯರ್ ಬ್ರ್ಯಾಂಡ್‌

BBK11: ಫಿನಾಲೆ ಓಟದಿಂದ ಚೈತ್ರಾಳನ್ನು ಹೊರಗಿಟ್ಟ ಮನೆಮಂದಿ..ಕಣ್ಣೀರಿಟ್ಟ ಫೈಯರ್ ಬ್ರ್ಯಾಂಡ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.