Kadaba: ವೃದ್ದ ದಂಪತಿಗಳ ಮನೆ ದ್ವಂಸ ಪ್ರಕರಣ; ಅಧಿಕಾರಿಗಳ ದೌರ್ಜನ್ಯ ಖಂಡಿಸಿ ಪ್ರತಿಭಟನೆ
Team Udayavani, Nov 20, 2024, 12:26 PM IST
ಕಡಬ: ತಾಲೂಕಿನ ಕೌಕ್ರಾಡಿ ಗ್ರಾ.ಪಂ. ವ್ಯಾಪ್ತಿಯ ಕಾಪಿನ ಬಾಗಿಲು ಎಂಬಲ್ಲಿ ವೃದ್ದ ದಂಪತಿಗಳ ಮನೆ ದ್ವಂಸ ಪ್ರಕರಣಕ್ಕೆ ಸಂಬಂಧಿಸಿ ಅಧಿಕಾರಿಗಳ ದೌರ್ಜನ್ಯ ಖಂಡಿಸಿ ನ.20ರ ಬುಧವಾರ ಕಡಬ ತಹಶೀಲ್ದಾರ್ ಕಚೇರಿಯ ಮುಂದೆ ಪ್ರತಿಭಟನೆ ಆರಂಭಗೊಂಡಿದೆ.
ಸಾಮಾಜಿಕ ಹೋರಾಟಗಾರ, ನೀತಿ ತಂಡದ ರಾಜ್ಯಾಧ್ಯಕ್ಷ ಜಯಂತ್ ಟಿ., ನ್ಯಾಯವಾದಿ ಬಿ.ಎಂ.ಭಟ್, ಕೆ.ಆರ್.ಎಸ್. ಪಕ್ಷದ ವೇಣುಗೋಪಾಲ್ ಅವರು ನೇತೃತ್ವ ವಹಿಸಿದ್ದು, ತಹಶೀಲ್ದಾರ್ ಕಚೇರಿ ಪಕ್ಕದ ರಸ್ತೆ ಬದಿ ಅಧಿಕ ಸಂಖ್ಯೆಯಲ್ಲಿ ಜನ ಸೇರಿದ್ದಾರೆ. ವೃದ್ದ ದಂಪತಿ ನಜ್ಜುಗುಜ್ಜುಗೊಂಡ ಪಾತ್ರೆ ಪರಿಕರಗಳ ಜೊತೆ ಆಗಮಿಸಿ ಉರಿ ಬಿಸಿಲಿನಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದಾರೆ. ಸಮಾನ ಮನಸ್ಕರು ಪ್ರತಿಭಟನೆಗೆ ಕೈ ಜೋಡಿಸಿದ್ದಾರೆ.
ಮನೆ ಕಳೆದುಕೊಂಡ ವೃದ್ದ ದಂಪತಿ ನನಗೆ ಜೀವ ಬೇಡ ಎಂದು ನೆಲದಲ್ಲಿ ಒದ್ದಾಡಿದ್ದು, ಅಧಿಕಾರಿಗಳು ಮೂಕಪ್ರೇಕ್ಷಕರಾಗಿ ನೋಡುತ್ತಿರುವುದು ಕಂಡು ಬಂತು.
ಪ್ರತಿಭಟನೆಗೆ ಅನುಮತಿ ಇಲ್ಲ ಎಂದು ಅಧಿಕಾರಿ ಹೇಳಿದ ಹಿನ್ನೆಲೆ ಪ್ರತಿಭಟನಾಕಾರರು ಆಕೋಶಗೊಂಡು ರಸ್ತೆ ಸಮೀಪ ಗುಂಪು ಸೇರಿದ್ದಾರೆ.
ಕಡಬ ಠಾಣಾ ಎಸ್.ಐ. ಅಭಿನಂದನ್ ಹಾಗೂ ನೆರೆಯ ಠಾಣೆಗಳ ಪೊಲೀಸರು ಬಂದೋ ಬಸ್ತ್ ಏರ್ಪಡಿಸಿದ್ದಾರೆ. ಹೋರಾಟಗಾರರಾದ ಹಕೀಮ್ ಕೊಕ್ಕಡ, ಈಶ್ವರಿ, ಸಿಮಿ ಉಂಡಿಲ ಸೇರಿದಂತೆ ಹಲವಾರು ಮಂದಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.