Kadaba ಒಕ್ಕಲಿಗ ಗೌಡ ಸಮುದಾಯ ಭವನಕ್ಕೆ ಇಂದು ಶಿಲಾನ್ಯಾಸ

ಕಡಬಕ್ಕೆ ಆದಿಚುಂಚನಗಿರಿ ಮಠದ ಡಾ| ನಿರ್ಮಲಾನಂದ ಸ್ವಾಮೀಜಿ ಆಗಮನ

Team Udayavani, Dec 25, 2023, 11:59 PM IST

Kadaba ಒಕ್ಕಲಿಗ ಗೌಡ ಸಮುದಾಯ ಭವನಕ್ಕೆ ಇಂದು ಶಿಲಾನ್ಯಾಸ

ಕಡಬ: ಕಡಬ ತಾಲೂಕು ಒಕ್ಕಲಿಗ ಗೌಡ ಸೇವಾ ಸಂಘದ ವತಿಯಿಂದ ಹೊಸಮಠದಲ್ಲಿ 15 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾಗಲಿರುವ ಒಕ್ಕಲಿಗ ಗೌಡ ಸಮುದಾಯ ಭವನದ ಶಿಲಾನ್ಯಾಸ, ನೂತನ ತಾಲೂಕು ಸಮಿತಿಯ ಪದಾಧಿಕಾರಿಗಳ ಪದಗ್ರಹಣ ಹಾಗೂ ಒಕ್ಕಲಿಗ ಸ್ಪಂದನಾ ಸಮುದಾಯ ಸಹಕಾರ ಸಂಘದ ಉದ್ಘಾಟನೆ ಡಿ. 26ರಂದು ನಡೆಯಲಿದೆ. ಸೋಮವಾರ ಹೊರೆಕಾಣಿಕೆ ಸಮರ್ಪಣೆ ಹಾಗೂ ಉಗ್ರಾಣ ಮುಹೂರ್ತ ನೆರವೇರಿತು.

ಕಡಬ ಶ್ರೀ ಶ್ರೀಕಂಠ ಸ್ವಾಮಿ ಮತ್ತು ಮಹಾಗಣಪತಿ ಮಹಾಗಣಪತಿ ದೇವಸ್ಥಾನದಲ್ಲಿ ಆದಿ ಚುಂಚನಗಿರಿ ಮಂಗಳೂರು ಶಾಖಾ ಮಠದ ಡಾ| ಧರ್ಮಪಾಲನಾಥ ಸ್ವಾಮೀಜಿ ಮೆರವಣಿಗೆಗೆ ಚಾಲನೆ ನೀಡಿ ಆಶೀರ್ವದಿಸಿದರು. ಕಡಬ ತಾಲೂಕು ಒಕ್ಕಲಿಗ ಗೌಡ ಸೇವಾ ಸಂಘದ ಕಡಬ ತಾಲೂಕು ಅಧ್ಯಕ್ಷ ಸುರೇಶ್‌ ಬೈಲು ಸೇರಿದಂತೆ ಪ್ರಮುಖರು ಹಾಜರಿದ್ದರು.

ಇಂದು ಶಿಲಾನ್ಯಾಸ
ಡಿ. 26ರಂದು ಬೆಳಿಗ್ಗೆ ಆದಿಚುಂಚ ನಗಿರಿ ಮಠದ ಡಾ| ನಿರ್ಮಲಾನಂದ ಸ್ವಾಮೀಜಿಯವರು ಸಭಾಭವನದ ಶಿಲಾನ್ಯಾಸ ನೆರವೇರಿಸಲಿದ್ದು, ಮಂಗಳೂರು ಶಾಖಾ ಮಠದ ಡಾ| ಧರ್ಮಪಾಲನಾಥ ಸ್ವಾಮೀಜಿ ಸಾನಿಧ್ಯ ವಹಿಸಲಿದ್ದಾರೆ.

ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ವಸತಿ ನಿಲಯದ ಶಿಲಾನ್ಯಾಸ ಹಾಗೂ ಮಾಜಿ ಮುಖ್ಯಮಂತ್ರಿ ಡಿ.ವಿ. ಸದಾನಂದ ಗೌಡ ವಾಣಿಜ್ಯ ಸಂಕೀರ್ಣಕ್ಕೆ ಶಿಲಾ ನ್ಯಾಸ ನೆರವೇರಿಸಲಿದ್ದಾರೆ.

ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಸಂಘದ ನೂತನ ಪದಾಧಿಕಾರಿಗಳ ಪಗ್ರಹಣ ನೆರವೇರಿಸಲಿದ್ದು, ವಿಪಕ್ಷದ ನಾಯಕ ಆರ್‌. ಅಶೋಕ್‌, ಮಾಜಿ ಉಪಮುಖ್ಯಮಂತ್ರಿ ಅಶ್ವತ್ಥ ನಾರಾಯಣ್‌, ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ರಾಜ್ಯ ಉನ್ನತ ಶಿಕ್ಷಣ ಸಚಿವ ಡಾ| ಎಂ.ಸಿ. ಸುಧಾಕರ್‌, ರಾಜ್ಯ ಒಕ್ಕಲಿಗ ಸಂಘದ ಅಧ್ಯಕ್ಷ ಹನುಮಂತಯ್ಯ, ಚಿತ್ರನಟ, ರಾಜ್ಯ ಸಭಾ ಸದಸ್ಯ ಜಗ್ಗೇಶ್‌, ಶಾಸಕರಾದ ಪ್ರಿಯಾಕೃಷ್ಣ, ಭೋಜೇ ಗೌಡ, ಮಂತರ್‌ ಗೌಡ, ಮಾಜಿ ಶಾಸಕಸಂಜೀವ ಮಠಂದೂರು, ಸುಳ್ಯದ ಅಕಾ ಡೆಮಿ ಆಫ್‌ ಲಿಬರಲ್‌ ಎಜ್ಯುಕೇಶನ್‌ ಧ್ಯಕ್ಷ ಡಾ| ಕೆ.ವಿ. ಚಿದಾನಂದ, ಸುಳ್ಯದ ಡಾ| ಜ್ಯೋತಿ ರೇಣುಕಾ ಪ್ರಸಾದ್‌ ಕುರುಂಜಿ, ಸ್ವಾತಂತ್ರ್ಯ ಹೋರಾಟಗಾರ ಕೆದಂಬಾಡಿ ರಾಮಯ್ಯ ಗೌಡ ಸ್ಮಾರಕ ಸ್ಥಾಪನ ಸಮಿತಿಯ ಅಧ್ಯಕ್ಷ ಕಿರಣ್‌ ಬುಡ್ಲೆಗುತ್ತು ಮತ್ತಿತರ ಗಣ್ಯರು ಭಾಗವಹಿಸಲಿದ್ದಾರೆ.

ಸಮಾಜದ ವಿವಿಧ ಕ್ಷೇತ್ರದ ಸಾಧಕ ರನ್ನು ಸಮ್ಮಾನಿಸಲಾಗುವುದು ಎಂದು ಸಂಘದ ಕಡಬ ತಾಲೂಕು ಅಧ್ಯಕ್ಷ ಸುರೇಶ್‌ ಗೌಡ ಬೈಲು ತಿಳಿಸಿದ್ದಾರೆ.

ಟಾಪ್ ನ್ಯೂಸ್

Yadiyurappa (2)

B. S. Yediyurappa ವಿರುದ್ಧ ಎಫ್ಐಆರ್‌ಗೆ ಸಚಿವರ ಒತ್ತಡ

PM ನರೇಂದ್ರ ಮೋದಿಗೆ ಡೊಮಿನಿಕಾದ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಗೌರವ

PM ನರೇಂದ್ರ ಮೋದಿಗೆ ಡೊಮಿನಿಕಾದ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಗೌರವ

K L RAhul

K.L. Rahul; ಕುಡ್ಲದ ಜನರ ಬೆಂಬಲವೇ ಸಾಧನೆಗೆ ಕಾರಣ

1-siddu

BJP ಸರಕಾರ ಕಾಲದ ಕೋವಿಡ್‌, ಗಣಿ ತನಿಖೆಗೆ ಎಸ್‌ಐಟಿ: ಸಚಿವ ಸಂಪುಟ ನಿರ್ಧಾರ

Mangaluru: ಸಮಾಜದ ಕರುಳು ಹಿಂಡುವ “ಆತ್ಮಹ*ತ್ಯೆ’  

Mangaluru: ಸಮಾಜದ ಕರುಳು ಹಿಂಡುವ “ಆತ್ಮಹ*ತ್ಯೆ’  

doctor 2

Karnataka; 7 ವೈದ್ಯಕೀಯ ಕಾಲೇಜುಗಳಲ್ಲಿ ಕ್ರಿಟಿಕಲ್‌ ಕೇರ್‌ ವಿಭಾಗ ಆರಂಭ

Beer

Bandh; ನ. 20ರಂದು ರಾಜ್ಯವ್ಯಾಪಿ ಮದ್ಯ ಮಾರಾಟ ಬಂದ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bantwal: ನಾಪತ್ತೆಯಾದವರ ಮೃತ*ದೇಹ ಉಳ್ಳಾಲ ರೈಲು ಹಳಿಯಲ್ಲಿ ಪತ್ತೆ

Bantwal: ನಾಪತ್ತೆಯಾದವರ ಮೃತ*ದೇಹ ಉಳ್ಳಾಲ ರೈಲು ಹಳಿಯಲ್ಲಿ ಪತ್ತೆ

1-nirmala

Dharmasthala; ಗ್ರಾಮಾಭಿವೃದ್ಧಿ ಯೋಜನೆ ಜನರ ನಾಡಿಮಿಡಿತ: ನಿರ್ಮಲಾ ಸೀತಾರಾಮನ್‌

Kadaba: ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ; ತಪ್ಪಿದ ಅನಾಹುತ

Kadaba: ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ; ತಪ್ಪಿದ ಅನಾಹುತ

ud

Puttur: ಮನೆ ಅಂಗಳದಲ್ಲಿ ನಿಲ್ಲಿಸಿದ್ದ ಸ್ಕೂಟರ್‌ ಕಳವು

2

Sullia: 10 ವರ್ಷದ ಬಳಿಕ ಚಿಂಗಾಣಿ ಗುಡ್ಡೆ ಟ್ಯಾಂಕ್‌ಗೆ ಕೊನೆಗೂ ನೀರು ಬಂತು!

MUST WATCH

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

udayavani youtube

ನನ್ನ ಎದುರು ನೀನು ಬಚ್ಚ ! ಏಕವಚದಲ್ಲಿ ಕಿತ್ತಾಡಿಕೊಂಡ ಲಾಯರ್ ಜಗದೀಶ್ & ಕುಡುಪಲಿ ನಾಗರಾಜ್

ಹೊಸ ಸೇರ್ಪಡೆ

Yadiyurappa (2)

B. S. Yediyurappa ವಿರುದ್ಧ ಎಫ್ಐಆರ್‌ಗೆ ಸಚಿವರ ಒತ್ತಡ

PM ನರೇಂದ್ರ ಮೋದಿಗೆ ಡೊಮಿನಿಕಾದ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಗೌರವ

PM ನರೇಂದ್ರ ಮೋದಿಗೆ ಡೊಮಿನಿಕಾದ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಗೌರವ

K L RAhul

K.L. Rahul; ಕುಡ್ಲದ ಜನರ ಬೆಂಬಲವೇ ಸಾಧನೆಗೆ ಕಾರಣ

1-siddu

BJP ಸರಕಾರ ಕಾಲದ ಕೋವಿಡ್‌, ಗಣಿ ತನಿಖೆಗೆ ಎಸ್‌ಐಟಿ: ಸಚಿವ ಸಂಪುಟ ನಿರ್ಧಾರ

Mangaluru: ಸಮಾಜದ ಕರುಳು ಹಿಂಡುವ “ಆತ್ಮಹ*ತ್ಯೆ’  

Mangaluru: ಸಮಾಜದ ಕರುಳು ಹಿಂಡುವ “ಆತ್ಮಹ*ತ್ಯೆ’  

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.