Kadaba: ವಿದ್ಯಾರ್ಥಿಯಲ್ಲಿ ಬಸ್ ಪಾಸ್‌ನ ನಕಲು ಪ್ರತಿ
ಪೊಲೀಸ್ ಠಾಣೆಗೆ ಕರೆದೊಯ್ದ ಬಸ್ ನಿರ್ವಾಹಕ
Team Udayavani, Jan 25, 2024, 1:29 AM IST
ಕಡಬ: ಬಸ್ ಪಾಸ್‌ನ ನಕಲು ಪ್ರತಿಯನ್ನು ತೋರಿಸಿದ್ದಕ್ಕಾಗಿ ಬಸ್‌ನ ನಿರ್ವಾಹಕ ಕಾಲೇಜು ವಿದ್ಯಾರ್ಥಿಯನ್ನು ಪೊಲೀಸ್ ಠಾಣೆಗೆ ಕರೆದೊಯ್ದ ಘಟನೆ ಬುಧವಾರ ಬೆಳಗ್ಗೆ ಕಡಬದಲ್ಲಿ ಸಂಭವಿಸಿದೆ.
ನೂಜಿಬಾಳ್ತಿಲ ಕಲ್ಲುಗುಡ್ಡೆಯಿಂದ ಕಡಬ, ಶಾಂತಿಮೊಗರು ಮಾರ್ಗವಾಗಿ ಪುತ್ತೂರಿಗೆ ತೆರಳುತ್ತಿದ್ದ ಬಸ್ ನಲ್ಲಿ ಈ ಘಟನೆ ನಡೆದಿದೆ. ಕಡಬ ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ ಪ್ರಥಮ ಪಿಯುಸಿ ಓದುತ್ತಿರುವ ಕಲ್ಲುಗುಡ್ಡೆಯ ಪೇರಡ್ಕ ಸಮೀಪದ ರವಿ ಗಣೇಶ್ ಅವರು ಪೇರಡ್ಕ ಸಮೀಪ ಬಸ್ ಏರಿದ್ದರು. ನಿರ್ವಾಹಕ ಟಿಕೆಟ್ ಕೇಳುವ ವೇಳೆ ವಿದ್ಯಾರ್ಥಿ ಬಸ್ ಪಾಸ್‌ನ ನಕಲು ಪ್ರತಿ ತೋರಿಸಿದ್ದ . ನಕಲು ಬಸ್ ಪಾಸ್ ಪ್ರತಿ ಇರಿಸಿಕೊಳ್ಳುವುದು ಕಾನೂನು ರೀತಿಯಲ್ಲಿ ಅಪರಾಧ ಎಂದು ಹೇಳಿದ ನಿರ್ವಾಹಕ ವಿದ್ಯಾರ್ಥಿಯ ಕಾಲೇಜು ಗುರುತು ಚೀಟಿಯನ್ನು ಪಡೆದು ವಿದ್ಯಾರ್ಥಿಯನ್ನು ಕಡಬ ಠಾಣೆಗೆ ಬರುವಂತೆ ತಿಳಿಸಿದ್ದಾರೆ.
ಕಾಲೇಜಿನಲ್ಲಿ ನಡೆಯುತ್ತಿರುವ ಪ್ರಾಯೋಗಿಕ ಪರೀಕ್ಷೆಗೆ ತಡವಾಗುತ್ತಿರುವ ಬಗ್ಗೆ ವಿದ್ಯಾರ್ಥಿ ಹೇಳಿದರೂ ನಿರ್ವಾಹಕ ಆತನನ್ನು ಕೈಯಲ್ಲಿ ಹಿಡಿದುಕೊಂಡು ಠಾಣೆಗೆ ಕರೆದುಕೊಂಡು ಹೋಗಿದ್ದಾರೆ ಎಂದು ಸಹಪಾಠಿಗಳು ದೂರಿದ್ದಾರೆ. ಆ ವೇಳೆ ಸ್ಥಳದಲ್ಲಿದ್ದ ಸಾರ್ವಜನಿಕರು ಕಡಬದ ಬಸ್ ಸಂಚಾರ ನಿಯಂತ್ರಕರನ್ನು ತರಾಟೆಗೆ ತೆಗೆದುಕೊಂಡ ಘಟನೆಯೂ ನಡೆಯಿತು. ಪರೀಕ್ಷೆ ಇರುವ ಬಗ್ಗೆ ವಿದ್ಯಾರ್ಥಿಯ ತಂದೆ ಪೊಲೀಸರಿಗೆ ಮನವರಿಕೆ ಮಾಡಿದ ಬಳಿಕ ಕಾಲೇಜಿನ ಗುರುತು ಚೀಟಿ ಪಡೆದು ವಿದ್ಯಾರ್ಥಿ ಪರೀಕ್ಷೆಗೆ ಹಾಜರಾಗಿದ್ದಾನೆ.
ಈ ಹಿಂದೆ ಬಸ್ ಪಾಸ್ ಕಳೆದು ಹೋಗಿ ಎರಡು ದಿನಗಳ ಬಳಿಕ ಸಿಕ್ಕಿತ್ತು. ಆ ಸಂದರ್ಭದಲ್ಲಿ ಕಲರ್ ಜೆರಾಕ್ಸ್‌ನಲ್ಲಿ ಬಸ್ ಪಾಸ್‌ನ ನಕಲು ಪ್ರತಿ ಮಾಡಿ ತುರ್ತು ಸಂದರ್ಭಬಳಸುವ ಸಲುವಾಗಿ ಬ್ಯಾಗ್‌ನಲ್ಲಿ ಇರಿಸಿಕೊಂಡಿದ್ದೆ ಎಂದು ವಿದ್ಯಾರ್ಥಿ ತಿಳಿಸಿದ್ದಾನೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Puttur: ವಿದ್ಯುತ್ ಕಂಬ ಏರುವ ತರಬೇತಿ!; ಪವರ್‌ಮನ್ ಉದ್ಯೋಗಕ್ಕೆ ಸ್ಥಳೀಯರಿಗೆ ಪ್ರೋತ್ಸಾಹ
Belthangady: ಗ್ರಾಮೀಣ ರಸ್ತೆಗಳಲ್ಲೂ ಗುಂಡಿ
Bantwal: ತುಂಬೆ ಶ್ರೀಮಹಾಲಿಂಗೇಶ್ವರ ದೇವಸ್ಥಾನಕ್ಕೆ ಕನ್ನ; ಲಕ್ಷಾಂತರ ಮೌಲ್ಯದ ನಗನಗದು ಲೂಟಿ
Puttur: ಮಾದಕ ವಸ್ತು ಎಂಡಿಎಂಎ ಸಾಗಾಟ ಪ್ರಕರಣ; ಆರೋಪಿಗೆ ಜಾಮೀನು
Rain: ಸುಬ್ರಹ್ಮಣ್ಯದಲ್ಲಿ ಭಾರೀ ಮಳೆ; ರಸ್ತೆಗೆ ಬಿದ್ದ ಮರ; ತಪ್ಪಿದ ಭಾರೀ ಅನಾಹುತ
MUST WATCH
ಹೊಸ ಸೇರ್ಪಡೆ
Kanguva: 10 ಸಾವಿರಕ್ಕೂ ಹೆಚ್ಚಿನ ಸ್ಕ್ರೀನ್‌ನಲ್ಲಿ ಅದ್ಧೂರಿಯಾಗಿ ರಿಲೀಸ್ ಆಗಲಿದೆ ʼಕಂಗುವʼ
Urwa: ಬಾಯ್ದೆರೆದ ಕಾಂಕ್ರೀಟ್ ಚೇಂಬರ್‌ಗಳಿಗೆ ಬಿತ್ತು ಮುಚ್ಚಳ
Bypolls: ಯಡಿಯೂರಪ್ಪರನ್ನು ರಾಜಕೀಯವಾಗಿ ಮುಗಿಸಲು ಬೊಮ್ಮಾಯಿ ಪ್ಲ್ಯಾನ್: ಸಿದ್ದರಾಮಯ್ಯ
Shirola: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಕೊರತೆ… ರೋಗಿಗಳ ಪರದಾಟ
Karkala: ದುರ್ಗಾ ಗ್ರಾಮ ಪಂಚಾಯತ್; ರಸ್ತೆ ಸಂಪೂರ್ಣ ದುರವಸ್ಥೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.