Kadaba: ಶಾಲಾ ಕೊಠಡಿಯ ಗೋಡೆ, ಮೇಲ್ಛಾವಣಿ ಕುಸಿತ; ತಪ್ಪಿದ ಭಾರಿ ಅನಾಹುತ
ನಾಲ್ವರು ವಿದ್ಯಾರ್ಥಿಗಳಿಗೆ ಸಣ್ಣಪುಟ್ಟ ಗಾಯ
Team Udayavani, Aug 27, 2024, 4:13 PM IST
ಕಡಬ: ಶಾಲಾ ಕೊಠಡಿಯ ಗೋಡೆ ಹಾಗೂ ಮೇಲ್ಛಾವಣಿ ಕುಸಿದು ಬಿದ್ದ ಪರಿಣಾಮ ನಾಲ್ವರು ವಿದ್ಯಾರ್ಥಿಗಳು ಸಣ್ಣಪುಟ್ಟ ಗಾಯಗಳೊಂದಿಗೆ ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾದ ಘಟನೆ ಆ.27ರ ಮಂಗಳವಾರ ಮಧ್ಯಾಹ್ನ ಕುಂತೂರಿನಲ್ಲಿ ನಡೆದಿದೆ.
ಕುಂತೂರು ಸರಕಾರಿ ಶಾಲೆಯ ಕೊಠಡಿಯ ಮೇಲ್ಛಾವಣಿ ಹಾಗೂ ಗೋಡೆ ಕುಸಿದಿದ್ದು, ಲಕ್ಷಾಂತರ ರೂ. ನಷ್ಟ ಸಂಭವಿಸಿದೆ. ಕಟ್ಟಡದ ಬಳಿ ಜೆಸಿಬಿಯಲ್ಲಿ ಕೆಲಸ ನಡೆಯುತ್ತಿತ್ತು ಎನ್ನಲಾಗಿದ್ದು, ಆದ್ದರಿಂದಾಗಿ ಮೊದಲೇ ಶಿಥಿಲಗೊಂಡಿದ್ದ ಕಟ್ಟಡ ಕುಸಿದು ಬಿದ್ದಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ.
ಘಟನೆ ನಡೆಯುವ ವೇಳೆ ವಿದ್ಯಾರ್ಥಿಗಳು ಆಟದ ಮೈದಾನದಲ್ಲಿ ಇದ್ದುದರಿಂದ ಹೆಚ್ಚಿನ ಅಪಾಯ ಸಂಭವಿಸಿಲ್ಲ.
ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.