ಕಳಾರ ಅಂಗನವಾಡಿ ಕೇಂದ್ರ : ಕುಸಿಯುವ ಸ್ಥಿತಿಯಲ್ಲಿ ಕಟ್ಟಡ
Team Udayavani, Nov 21, 2021, 3:00 AM IST
ಕಡಬ: ಇಲ್ಲಿನ ಕಳಾರ ಅಂಗನವಾಡಿ ಕೇಂದ್ರದ ಹಳೆಯ ಕಟ್ಟಡ ಸಂಪೂರ್ಣ ಶಿಥಲಗೊಂಡಿದ್ದು, ನೂತನ ಕಟ್ಟಡದ ನಿರ್ಮಾಣ ಕಾಮಗಾರಿ ಅರ್ಧ ದಲ್ಲಿಯೇ ಸ್ಥಗಿತಗೊಂಡ ಕಾರಣದಿಂದಾಗಿ ಕೇಂದ್ರದ ಪುಟಾಣಿಗಳು ಅತಂತ್ರ ಸ್ಥಿತಿ ಎದುರಿಸುತ್ತಿದ್ದಾರೆ.
ಪ್ರಸ್ತುತ ಇರುವ ಸುಮಾರು 30 ವರ್ಷ ಹಳೆಯದಾದ ಕಟ್ಟಡ ಶಿಥಿಲಗೊಂಡಿರುವ ಕಾರಣ ದಿಂದಾಗಿ ಅಂಗನವಾಡಿ ಪುಟಾ ಣಿಗಳನ್ನು ಸುರಕ್ಷತೆಯ ದೃಷ್ಟಿಯಿಂದ ಹತ್ತಿರದಲ್ಲಿರುವ ಕಳಾರ ಸರಕಾರಿ ಕಿ.ಪ್ರಾ.ಶಾಲೆಯ ಕೊಠಡಿಯೊಂದಕ್ಕೆ ಸ್ಥಳಾಂತರಿಸ ಲಾಗಿತ್ತು. ಆದರೆ ಸ್ಥಳಾಂತರ ಗೊಂಡ ಕಟ್ಟಡದ ಛಾವಣಿಯೂ ಅಪಾಯದ ಸ್ಥಿತಿಯಲ್ಲಿದೆ. ಅಂಗನವಾಡಿಗೆ ನಿರ್ಮಿಸ ಲಾಗುತ್ತಿರುವ ಹೊಸ ಕಟ್ಟಡ ಕಾಮಗಾರಿ ಪೂರ್ಣಗೊಂಡಿಲ್ಲ, ಈ ಹಿನ್ನೆಲೆಯಲ್ಲಿ ಪುಟಾಣಿಗಳಿಗೆ ಹಳೆಯ ಕಟ್ಟಡವೂ ಇಲ್ಲದೆ, ಹೊಸಕಟ್ಟಡವೂ ಪೂರ್ಣಗೊಳ್ಳದೆ ಅತಂತ್ರ ಸ್ಥಿತಿ ಅನುಭವಿಸುವಂತಾಗಿದೆ. 15 ದಿನದೊಳಗೆ ಕಾಮಗಾರಿ ಪೂರ್ಣಗೊಂಡು ಅಂಗನವಾಡಿ ಕೇಂದ್ರ ಹೊಸ ಕಟ್ಟಡದಲ್ಲಿ ಪ್ರಾರಂಭವಾಗದಿದ್ದರೆ ಪ್ರತಿಭಟನೆ ಮಾಡಲಾಗುವುದು ಎಂದು ಸ್ಥಳೀಯ ಮುಂದಾಳು ಕಡಬ ಗ್ರಾ.ಪಂ. ಮಾಜಿ ಅಧ್ಯಕ್ಷ ಹನೀಫ್ ಕೆ.ಎಂ. ಎಚ್ಚರಿಸಿದ್ದಾರೆ.
10 ಲಕ್ಷ ರೂ. ವೆಚ್ಚದ ಕಟ್ಟಡ:
ಕಳಾರ ಅಂಗನವಾಡಿಗೆ ಹೊಸ ಕಟ್ಟಡ ಅಗಬೇಕೆಂಬ ಸ್ಥಳೀಯರ ಬೇಡಿಕೆಯ ಅನ್ವಯ ಕಡಬ ಗ್ರಾ.ಪಂ. ಅವಧಿಯಲ್ಲಿ ಉದ್ಯೋಗ ಖಾತರಿ ಯೋಜನೆಯಿಂದ 5 ಲಕ್ಷ ರೂ. ಹಾಗೂ ಎಂಆರ್‌ಪಿಎಲ್ ಸಿಎಸ್‌ಆರ್ ನಿಧಿಯಿಂದ 5 ಲಕ್ಷ ರೂ. ಸೇರಿ ಒಟ್ಟು 10 ಲಕ್ಷ ರೂ. ಅನುದಾನದಲ್ಲಿ ಕಾಮಗಾರಿ ಆರಂಭಗೊಂಡಿತ್ತು. ಕಟ್ಟಡ ಕಾಮಗಾರಿ ಬಹುತೇಕ ಪೂರ್ಣಗೊಂಡಿದ್ದು, ಟೈಲ್ಸ್ ಅಳವಡಿಕೆ, ಕಿಟಕಿ ಸೇರಿದಂತೆ ಸಣ್ಣ ಪುಟ್ಟ ಕೆಲಸಗಳು ಬಾಕಿಯಾಗಿದೆ. ಕಟ್ಟಡದ ಹೆಚ್ಚಿನ ಕೆಲಸವನ್ನು ಪೂರ್ಣಗೊಳಿಸಿದ ಗುತ್ತಿಗೆದಾರರು ಬಾಕಿ ಉಳಿದ ಕೆಲಸವನ್ನು ಮುಗಿಸಿದರೆ ಸಮಸ್ಯೆ ಬಗೆಹರಿಯಲಿದೆ. ಈ ಬಗ್ಗೆ ಮಾಹಿತಿಯನ್ನು ಪಡೆಯಲು ಪಟ್ಟಣ ಪಂಚಾಯತ್ ಎಂಜಿನಿಯರ್ ಅವರನ್ನು ಸಂಪರ್ಕಿಸಲು ಪ್ರಯತ್ನಿಸಿದರೂ ಅವರು ದೂರವಾಣಿ ಕರೆ ಸ್ವೀಕರಿಸುತ್ತಿಲ್ಲ ಎಂದು ಕೆ.ಎಂ.ಹನೀಫ್ ದೂರಿದ್ದಾರೆ.
ಕಳಾರ ಅಂಗನವಾಡಿಯ ಹೊಸ ಕಟ್ಟಡದ ಕಾಮಗಾರಿ ವಿಳಂಬದಿಂದಾಗಿ ಸಮಸ್ಯೆ ಎದುರಾಗಿದೆ. ಸಂಬಂಧಪಟ್ಟವರಲ್ಲಿ ಈ ಕುರಿತು ಚರ್ಚಿಸಿದ್ದು, ವಾರದೊಳಗೆ ಕಾಮಗಾರಿ ಮುಗಿಸಿಕೊಡುವುದಾಗಿ ಗುತ್ತಿಗೆದಾರರು ತಿಳಿಸಿದ್ದಾರೆ. ವಾರದೊಳಗೆ ಕಾಮಗಾರಿ ಪೂರ್ಣಗೊಳ್ಳುವ ಭರವಸೆ ಇದೆ. -ಶ್ರೀಲತಾ, ಸಿಡಿಪಿಒ, ಪುತ್ತೂರು
-ನಾಗರಾಜ್ ಎನ್.ಕೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Allu Arjun; ತಪ್ಪು ಮಾಹಿತಿ, ಚಾರಿತ್ರ್ಯ ಹರಣಕ್ಕೆ ಯತ್ನ: ರೇವಂತ್ ರೆಡ್ಡಿಗೆ ತಿರುಗೇಟು
R Ashwin: ಅಶ್ವಿನ್‌ಗೆ ಖೇಲ್ ರತ್ನ; ಕ್ರೀಡಾ ಸಚಿವರಿಗೆ ಸಂಸದರಿಂದ ಪತ್ರ
Virat Kohli: ಬಾಕ್ಸಿಂಗ್ ಡೇ ಟೆಸ್ಟ್‌ಗೂ ಮುನ್ನ ವಿರಾಟ್ ನೂತನ ಕೇಶ ವಿನ್ಯಾಸ
Hala Modi; ಮಿನಿ ಹಿಂದೂಸ್ಥಾನಕ್ಕೆ ಸಾಕ್ಷಿಯಾಗುತ್ತಿದ್ದೇನೆ: ಕುವೈಟ್ ನಲ್ಲಿ ಮೋದಿ
Kumble: ಯುವಕನ ಕೊಲೆ; ಆರು ಮಂದಿ ಅಪರಾಧಿಗಳು ಡಿ. 23ರಂದು ಶಿಕ್ಷೆ ತೀರ್ಪು ಘೋಷಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.