ಕಾಞಂಗಾಡ್-ಕಾಣಿಯೂರು ರೈಲ್ವೇ ಯೋಜನೆಗೆ ಮರುಜೀವ
Team Udayavani, Aug 27, 2021, 6:45 AM IST
ಕಾಣಿಯೂರು: ಕೇರಳ-ಕರ್ನಾಟಕ ರಾಜ್ಯಗಳನ್ನು ಬೆಸೆಯುವ ಕಾಞಂಗಾಡ್-ಕಾಣಿಯೂರು ರೈಲ್ವೇ ಯೋಜನೆಯನ್ನು ಮುಂದುವರಿಸುವುದಾಗಿ ಕೇರಳ ಸರಕಾರ ತಿಳಿಸಿದ್ದು, ನೇಪಥ್ಯಕ್ಕೆ ಸರಿದಂತಿದ್ದ ಯೋಜನೆಯೊಂದು ಮತ್ತೆ ಮುನ್ನೆಲೆಗೆ ಬಂದಿದೆ.
ವಾಣಿಜ್ಯ, ಪ್ರವಾಸೋದ್ಯಮ ಅಭಿವೃದ್ಧಿ ಮೊದಲಾದ ಕಾರಣಗಳಿಂದ ಈ ಯೋಜನೆ ದಶಕಗಳ ಹಿಂದೆ ಪ್ರಸ್ತಾವಗೊಂಡಿದ್ದರೂ ಬಳಿಕ ಪೂರಕ ಪ್ರಕ್ರಿಯೆಗಳಾಗಿರಲಿಲ್ಲ. 2019-20ರ ಬಜೆಟ್‌ನಲ್ಲಿ ಕೇರಳದ ಭಾಗದಲ್ಲಿ ಯೋಜನೆಯ ಭೂ ಸ್ವಾ ಧೀನ ಮೊದಲಾದ ಪ್ರಕ್ರಿಯೆಗಳಿಗೆ 20 ಕೋಟಿ ರೂ. ಅನುದಾನ ಮೀಸಲಿರಿಸಿತ್ತು. ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಇತ್ತೀಚೆಗೆ ವಿಧಾನಸಭೆಯಲ್ಲಿ 92 ಕಿ.ಮೀ. ಉದ್ದದ ಈ ರೈಲ್ವೇ ಯೋಜನೆಯನ್ನು ಮುಂದುವರಿಸುವುದಾಗಿ ಘೋಷಿಸಿದ್ದಾರೆ.
1,300 ಕೋ.ರೂ. ಯೋಜನೆ:
ಕೇಂದ್ರ ಸರಕಾರ, ಕೇರಳ ಮತ್ತು ಕರ್ನಾಟಕ ಸರಕಾರಗಳ ಪಾಲುದಾರಿಕೆಯಲ್ಲಿ ಯೋಜನೆ ನಿರ್ವಹಿಸಬಹುದು ಎಂಬುದು ಕೇಂದ್ರ ಸರಕಾರದ ನಿಲುವು. 14 ವರ್ಷಗಳ ಹಿಂದೆ ಯೋಜನೆಯ ಆಶಯ ರೂಪುಗೊಂಡಾಗ 92 ಕಿ.ಮೀ. ಕಾಮಗಾರಿ 400 ಕೋಟಿ ರೂ.ಗಳಲ್ಲಿ ಪೂರ್ಣಗೊಳ್ಳಬಹುದು ಎಂದು ಅಂದಾಜಿಸಲಾಗಿತ್ತು. 2015ರಲ್ಲಿ ಸಮೀಕ್ಷೆ ಪೂರ್ತಿಗೊಂಡಾಗ 1,300 ಕೋ.ರೂ. ಬೇಕಾಗಬಹುದು ಎಂದು ಅಂದಾಜಿಸಲಾಗಿತ್ತು. ಯೋಜನೆ ಆರಂಭಗೊಂಡ ಬಳಿಕ ಇನ್ನಷ್ಟು ಏರಿಕೆಯಾಗಬಹುದು.
92 ಕಿ.ಮೀ. ಉದ್ದದ ಹಳಿ:
ಕಾಞಂಗಾಡ್‌ನಿಂದ ಪಾಣತ್ತೂರು ವರೆಗೆ 41 ಕಿ.ಮೀ. ಮತ್ತು ಪಾಣತ್ತೂರಿನಿಂದ ಕಾಣಿಯೂರಿಗೆ 51 ಕಿ.ಮೀ. ಸೇರಿದಂತೆ ಒಟ್ಟು 92 ಕಿ. ಮೀ. ಹಳಿ ನಿರ್ಮಿಸಿ ರೈಲ್ವೇ ಸಂಪರ್ಕ ಸಾ ಧಿಸುವುದು ಯೋಜನೆಯ ಉದ್ದೇಶ. ಕಾಞಂಗಾಡ್‌ನಿಂದ ಕೊಟ್ಟೋಡಿ, ಬಳಾಂತೋಡ್, ಪಾಣತ್ತೂರು, ಕಲ್ಲಪಳ್ಳಿ, ಆಲೆಟ್ಟಿ, ಸುಳ್ಯ ಮೂಲಕ ಕಾಣಿಯೂರಿನಲ್ಲಿ ಮಂಗಳೂರು-ಬೆಂಗಳೂರು ಹಳಿಯನ್ನು ಸಂಧಿಸಿ ರೈಲ್ವೇ ಸಂಪರ್ಕ ಸಾಧಿಸುವುದು ಯೋಜನೆಯ ರೂಪ.
ಹಳಿಯ ಹಾದಿ:
2006-07ರಲ್ಲಿ ಕಾಞಂಗಾಡ್-ಕಾಣಿಯೂರು ರೈಲ್ವೇ ಹಳಿ ಎಂಬ ಕನಸಿನ ಯೋಜನೆಯ ಆಶಯ ರೂಪುಗೊಂಡಿತು. ರೈಲ್ವೇ ಸಚಿವ ಲಾಲೂ ಪ್ರಸಾದ್ ಯಾದವ್ 2008-09ರ ರೈಲ್ವೇ ಬಜೆಟ್‌ನಲ್ಲಿ ಪ್ರಥಮವಾಗಿ ಸರ್ವೇಗೆ ಅನುದಾನ ಮೀಸಲಿರಿಸಿದ್ದರು. ಪ್ರಥಮ ಹಂತದಲ್ಲಿ ಕಾಞಂಗಾಡ್‌ನಿಂದ ಪಾಣತ್ತೂರು ವರೆಗೆ ಸಮೀಕ್ಷೆ ನಡೆಸಲಾಯಿತು. 2010-11ರ ಬಜೆಟ್‌ನಲ್ಲಿ ಎರಡನೇ ಹಂತದಲ್ಲಿ ಪಾಣತ್ತೂರಿನಿಂದ ಕಾಣಿಯೂರು ತನಕ ಸರ್ವೇಗೆ ಅನುದಾನ ಮೀಸಲಿರಿಸಿದರೂ ಸರ್ವೇ ನಡೆಯಲಿಲ್ಲ. 2012-2013ರಲ್ಲಿಯೂ ಸರ್ವೇಗೆ ಆದೇಶ ನೀಡಿದರೂ ಕೈಗೂಡಿಲ್ಲ. ಡಿ.ವಿ. ಸದಾನಂದ ಗೌಡರು ರೈಲ್ವೇ ಸಚಿವರಾಗಿ ಮಂಡಿಸಿದ 2014-15ನೇ ಸಾಲಿನ ರೈಲ್ವೇ ಬಜೆಟ್‌ನಲ್ಲಿ ಕಾಞಂಗಾಡ್‌ನಿಂದ ಕಾಣಿಯೂರು ವರೆಗೆ ಪೂರ್ತಿ ಸರ್ವೇಗೆ ಅನುದಾನ ಮೀಸಲಿರಿಸಿದರು. 2015ರ ಮಾರ್ಚ್‌ನಲ್ಲಿ ಸಮೀಕ್ಷೆ ಪೂರ್ತಿಗೊಳಿಸಿ ವರದಿ ಸಲ್ಲಿಸಲಾಗಿದೆ. ಬಳಿಕ ರಾಜ್ಯ ಸರಕಾರಗಳ ಪಾಲುದಾರಿಕೆಯ ಒಪ್ಪಿಗೆ ಮತ್ತಿತರ ಪ್ರಕ್ರಿಯೆಗಳು ನಡೆಯದ ಕಾರಣ ಯೋಜನೆ ಮುಂದೆ ಸಾಗಿಲ್ಲ.
ಏನು ಪ್ರಯೋಜನ?:
- ಕೇರಳ, ಕರ್ನಾಟಕದ ಗಡಿಯಲ್ಲಿರುವ ಗ್ರಾಮಗಳಿಗೆ ರೈಲು ಸಂಪರ್ಕ ಕಲ್ಪಿಸಿ ಸಂಚಾರ ಕ್ರಾಂತಿ ಸಾಧ್ಯವಾಗಿಸುವುದರ ಜತೆಗೆ ಎರಡೂ ರಾಜ್ಯಗಳ ಗ್ರಾಮಗಳ ಅಭಿವೃದ್ಧಿಗೆ ದೊಡ್ಡ ಕೊಡುಗೆ ನೀಡಬಹುದು
- ಕೇರಳಕ್ಕೆ ಬೆಂಗಳೂರು, ಮೈಸೂರು ಇನ್ನಷ್ಟು ಹತ್ತಿರ
- ಕೃಷಿ ಉತ್ಪನ್ನಗಳಿಗೆ ಉತ್ತಮ ಬೆಲೆ, ಮಾರುಕಟ್ಟೆ ದೊರೆಯಲಿದೆ
- ಶಿಕ್ಷಣ ಕೇಂದ್ರವಾದ ಸುಳ್ಯಕ್ಕೆ ಕೇರಳದಿಂದ ಬರುವವರಿಗೆ ಸುಲಭ ಪ್ರಯಾಣ
- ಬೇಕಲ ಕೋಟೆ, ರಾಣಿಪುರಂ, ಕೊಡಗಿನ ಪ್ರವಾಸೀ ತಾಣಗಳ ಅಭಿವೃದ್ಧಿಗೆ ವಿಪುಲ ಅವಕಾಶ
- ಶಬರಿಮಲೆ, ತಲಕಾವೇರಿ, ಸುಬ್ರಹ್ಮಣ್ಯ, ಧರ್ಮಸ್ಥಳ ಯಾತ್ರಿಕರಿಗೆ ಹೆಚ್ಚಿನ ಅನುಕೂಲ
ಕಾಞಂಗಾಡ್-ಕಾಣಿಯೂರು ರೈಲು ಹಳಿ ನಿರ್ಮಾಣಕ್ಕೆ ಕೇರಳ ಸರಕಾರ ಒಪ್ಪಿಗೆ ನೀಡಿದ್ದು ಬಜೆಟ್‌ನಲ್ಲಿ ಅನುದಾನವನ್ನೂ ಮೀಸಲಿರಿಸಿದೆ. ಯೋಜನೆಗೆ ಕರ್ನಾಟಕ ಸರಕಾರವೂ ಅನುದಾನ ಬಿಡುಗಡೆ ಮಾಡಿ ಅನುಷ್ಠಾನಕ್ಕೆ ಪ್ರಯತ್ನ ನಡೆಸಬೇಕಾಗಿದೆ. ಇದಕ್ಕಾಗಿ ಕೇಂದ್ರ ಮತ್ತು ರಾಜ್ಯದ ಸಚಿವರು, ಸಂಸದರು ಮತ್ತು ಶಾಸಕರ ಪ್ರಯತ್ನ ಅಗತ್ಯ.– ಪಿ.ಬಿ. ಸುಧಾಕರ ರೈ, ಕಾರ್ಯದರ್ಶಿ ಕಾಞಂಗಾಡ್-ಕಾಣಿಯೂರು ರೈಲ್ವೇ ಹಳಿ ಕ್ರಿಯಾ ಸಮಿತಿ
-ಪ್ರವೀಣ್ ಚೆನ್ನಾವರ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Ullala: ಗ್ಯಾಸ್ ಸಿಲಿಂಡರ್ ಸ್ಫೋ*ಟ ಪ್ರಕರಣ: ಸಾವಿನ ಸಂಖ್ಯೆ 2ಕ್ಕೆ ಏರಿಕೆ
Actress: ರೊಮ್ಯಾನ್ಸ್ ಮಾಡಿಕೊಂಡು ಇರುತ್ತೇನೆ ಮದುವೆ ಆಗೋದೆ ಇಲ್ಲ ಎಂದ ನಟಿ ಶ್ರುತಿ ಹಾಸನ್
Nyamathi: ಕಾಡುಪ್ರಾಣಿಗಳಿಗೆ ಇರಿಸಿದ್ದ 32 ನಾಡ ಬಾಂಬ್ ಗಳು ಪತ್ತೆ
INDvAUS: ಬ್ಯಾನ್ ತಪ್ಪಿಸಿಕೊಂಡ ವಿರಾಟ್ ಕೊಹ್ಲಿ; ಆದರೂ ಶಿಕ್ಷೆ ತಪ್ಪಲಿಲ್ಲ
Belagavi: ಪಿಒಕೆ ಬಗ್ಗೆ ಕಾಂಗ್ರೆಸ್ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.