Gauri Lankesh Case: ಆರೋಪಿ ಮೋಹನ್ ನಾಯಕ್ನಿಗೆ ಜಾಮೀನು ಮಂಜೂರು
Team Udayavani, Dec 8, 2023, 9:54 PM IST
ಪುತ್ತೂರು: ಪತ್ರಕರ್ತೆ ಹಾಗೂ ಸಾಮಾಜಿಕ ಕಾರ್ಯಕರ್ತ ಗೌರಿ ಲಂಕೇಶ್ ಅವರ ಹತ್ಯೆ ಪ್ರಕರಣದ 11ನೇ ಆರೋಪಿ ಮೂಲತಃ ಪುತ್ತೂರು ಚಿಕ್ಕಮುಟ್ನೂರು ಕೆಮ್ಮಾಯಿನವಾಗಿರುವ, ಸುಳ್ಯ ತಾಲೂಕಿನ ಸಂಪಾಜೆ ನಿವಾಸಿ ಮೋಹನ್ ನಾಯಕ್ನಿಗೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ.
ಗೌರಿ ಲಂಕೇಶ್ ಅವರು 2017ರ ಸೆ.5ರಂದು ಹತ್ಯೆಗೀಡಾಗಿದ್ದು, ತನಿಖೆಗಾಗಿ ವಿಶೇಷ ತನಿಖಾ ದಳ ರಚಿಸಲಾಗಿತ್ತು. ಹತ್ಯೆ ಪ್ರಕರಣದಲ್ಲಿ 18 ಆರೋಪಿಗಳು ಬಂಧನಕ್ಕೊಳಗಾಗಿದ್ದು, 1200 ಪುರಾವೆ ಹಾಗೂ 438 ಸಾಕ್ಷ್ಯ ನ್ಯಾಯಾಲಯಕ್ಕೆ ಸಲ್ಲಿಕೆಯಾಗಿದೆ. ವಿಚಾರಣೆ ನಡೆಸಿರುವ ವಿಶೇಷ ನ್ಯಾಯಾಲಯ ತೀರ್ಪು ಕಾಯ್ದಿರಿಸಿದ 45 ದಿನಗಳ ಬಳಕ ಆರೋಪಿ ಮೋಹನ್ ನಾಯಕ್ ಅವರಿಗೆ ಜಾಮೀನು ಮಂಜೂರು ಮಾಡಿದೆ.
ನ್ಯಾಯಮೂರ್ತಿ ವಿಶ್ವಜೀತ್ ಶೆಟ್ಟಿ ಅವರಿದ್ದ ಏಕ ಸದಸ್ಯ ಪೀಠ ಜಾಮೀನು ಮಂಜೂರುಗೊಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.