ನೆರೆ ಸಂತ್ರಸ್ತರಿಗೆ ಕಿಟ್ ವಿತರಣೆ
Team Udayavani, Aug 24, 2018, 12:49 PM IST
ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ಮೂರು ಹೋಬಳಿಯಲ್ಲಿ ತಲಾ 16 ಮಂದಿಯಂತೆ ಒಟ್ಟು 48 ಮಂದಿ ನೆರೆ ಸಂತ್ರಸ್ತರಿಗೆ ದ.ಕ. ಜಿಲ್ಲಾಡಳಿತ, ಜಿಲ್ಲಾ ಭಾರತೀಯ ರೆಡ್‌ಕ್ರಾಸ್ ಸಂಸ್ಥೆ, ತಾಲೂಕು ಆಡಳಿತದ ಸಹಯೋಗದಲ್ಲಿ ಪರಿಹಾರ ಸಾಮಗ್ರಿಗಳ ಕಿಟ್ ಅನ್ನು ಗುರುವಾರ ಇಲ್ಲಿನ ಮಿನಿ ವಿಧಾನಸೌಧ ಸಭಾಂಗಣದಲ್ಲಿ ವಿತರಿಸಲಾಯಿತು.
ಇಂಡಿಯನ್ ರೆಡ್‌ಕ್ರಾಸ್‌ನ ರಾಜ್ಯ ಸಮಿತಿಯ ಸಂಯೋಜಕ ಎ.ಬಿ. ಶೆಟ್ಟಿ ಮಾತನಾಡಿ, ರೆಡ್‌ಕ್ರಾಸ್ ಸಂಸ್ಥೆಯು ರಕ್ತದಾನದ ಮೂಲಕ ವಿಶೇಷ ಸಾಧನೆ ಮಾಡಿದ್ದು, ಪ್ರಸ್ತುತ ಎಲ್ಲ ಭಾಗಗಳ ಅಶಕ್ತರಿಗೂ ನೆರವು ನೀಡುತ್ತಾ ಬಂದಿದೆ. ಈ ಬಾರಿಯ ವಿಪರೀತ ಮಳೆಯಿಂದಾಗಿ ಪ್ರವಾಹ ಬಂದು, ಸಾಕಷ್ಟು ಮಂದಿ ಸಂತ್ರಸ್ತರಾಗಿದ್ದಾರೆ. ಹೀಗಾಗಿ ಸಂಸ್ಥೆಯು ಜಿಲ್ಲಾಡಳಿತದ ಮೂಲಕ ಅಗತ್ಯ ಪರಿಕರಗಳನ್ನು ವಿತರಿಸುವ ಕಾರ್ಯ ಮಾಡಲಾಗುತ್ತಿದೆ. ಬೆಂಗಳೂರಿನಲ್ಲಿ ಒಂದೇ ದಿವಸ 3,334 ಯುನಿಟ್ ರಕ್ತ ಸಂಗ್ರಹಿಸಿ ರೆಡ್‌ಕ್ರಾಸ್ ಗಿನ್ನೆಸ್ ದಾಖಲೆ ಪಡೆದಿದೆ ಎಂದರು. ರೆಡ್‌ಕ್ರಾಸ್ ಜಿಲ್ಲಾ ಸಂಯೋಜಕ ಪ್ರವೀಣ್ ಕುಮಾರ್, ರೆಡ್‌ಕ್ರಾಸ್ ಬ್ಲಿಡ್ ಬ್ಯಾಂಕ್‌ನ ಎಡ್ವರ್ಡ್ ವಾಸ್, ಕಂದಾಯ ಅಧಿಕಾರಿಗಳಾದ ರವಿಕುಮಾರ್, ಪವಾಡಪ್ಪ ದೊಡ್ಡಮನಿ, ಪ್ರತೀಶ್ ಎಚ್. ಆರ್., ಗ್ರಾಮಕರಣಿಕರಾದ ಮೇಘನಾ, ಪ್ರದೀಪ್ ಉಪಸ್ಥಿತರಿದ್ದರು.
ಪರಿಹಾರ ಸಾಮಗ್ರಿ
ತಹಶೀಲ್ದಾರ್ ಮದನ್ ಮೋಹನ್ ಅವರು ಸಂತ್ರಸ್ತರಿಗೆ ಪರಿಹಾರ ಸಾಮಗ್ರಿಗಳನ್ನು ವಿತರಿಸಿದರು. ಪರಿಹಾರ ಕಿಟ್‌ನಲ್ಲಿ ಅಡುಗೆ ಪರಿಕರಗಳು, ಸೊಳ್ಳೆ ಪರದೆ, ಹೊದಿಕೆ, ಧೋತಿ, ಸೀರೆ, ಬಕೆಟ್, ಬಾತ್ ಟವೆಲ್, ಕೊಡೆಗಳಿದ್ದವು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.