ಕೊಯಿಲ ಕೆ. ಸಿ. ಫಾರ್ಮ್ ಶಾಲೆ: ಅಡಿಕೆ ಸಸಿ ನಾಟಿ
Team Udayavani, Apr 26, 2022, 9:51 AM IST
ಆಲಂಕಾರು: ಸರಕಾರಿ ಶಾಲೆಯೊಂದರ ಶಾಲಾಭಿವೃದ್ಧಿ ಸಮಿತಿ, ಶಿಕ್ಷಕರು, ಶಿಕ್ಷಣ ಪ್ರೇಮಿಗಳು ಒಟ್ಟಾಗಿ ಶಾಲೆಯ ಅರ್ಥಿಕತೆಯನ್ನು ಪೋಷಿಸುವ ಸಲುವಾಗಿ ಶಾಲಾ ಆವರಣದ ಸುತ್ತ ಅಡಿಕೆ ತೋಟ ನಿರ್ಮಾಣ ಮಾಡಿದ್ದಾರೆ.
ಕೊಯಿಲ ಕೆ ಸಿ ಫಾರ್ಮ್ ಉನ್ನತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಈ ಕಾರ್ಯ ಮಾಡಲಾಗಿದೆ. ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಶಶಿ ಪುತ್ಯೆ ಮುಂದಾಳತ್ವದಲ್ಲಿ ಈ ಕಾರ್ಯ ನಡೆದಿದೆ. ಶಾಲೆ ಹಿಂಭಾಗದಲ್ಲಿ ಖಾಲಿ ಇರುವ ಜಾಗದಲ್ಲಿ ಸುಮಾರು 450 ಅಡಿಕೆ ಸಸಿ ನಾಟಿ ಮಾಡಲಾಗಿದೆ. ಅಲ್ಲದೆ ಶಾಲಾ ಆವರಣದ ಸುತ್ತ ಸುಮಾರು 30 ತೆಂಗಿನ ಸಸಿ ನೆಡುವ ಸಲುವಾಗಿ ಹೊಂಡ ನಿರ್ಮಾಣ ಕಾರ್ಯ ನಡೆಯುತ್ತಿದೆ. ಕೃಷಿ ಕಾರ್ಯಕ್ಕೆಲ್ಲ ಶಾಲೆಯ ಕೊಳವೆ ಬಾವಿಯಿಂದ ನೀರು ಪೂರೈಸಲಾಗುತ್ತದೆ. ನೀರಾವರಿಗಾಗಿ ಪೈಪ್‌ಗ್ಳನ್ನು ಅಳವಡಿಸಲಾಗಿದೆ. ಅಡಿಕೆ ಕೃಷಿಯ ಆರಂಭದಲ್ಲಿ ನೆಲ ಸಮತಟ್ಟುಗೊಳಿಸಿ ಬಳಿಕ ನರೇಗಾ ಯೋಜನೆಯಡಿ ಹೊಂಡ ನಿರ್ಮಾಣ ಮಾಡಲಾಗಿದೆ. ವಿವಿಧ ದಾನಿಗಳ ನೆರವಿನಲ್ಲಿ ಈ ತೋಟ ನಿರ್ಮಾಣವಾಗಿದೆ.
ಆರ್ಥಿಕ ಚೈತನ್ಯಕ್ಕೆ ಈ ಯೋಜನೆ
ನಾಟಿ ಮಾಡಲಾದ ಅಡಿಕೆ ಕೃಷಿಯನ್ನು ಮುಂದಿನ ದಿನಗಳಲ್ಲಿ ಮುಂದುವರಿಸಿಕೊಂಡು ಹೋಗುವ ಜವಾಬ್ದಾರಿಯನ್ನು ಶಾಲಾಭಿವೃದ್ಧಿ ಸಮಿತಿ ವಹಿಸಿಕೊಳ್ಳಲಿದೆ. ಇದರಿಂದ ಬರುವ ಆದಾಯವನ್ನು ಶಾಲೆಯ ಅಭಿವೃದ್ಧಿಗೆ ಬಳಸಿಕೊಳ್ಳಲು ಉದ್ದೇಶಿಸಲಾಗಿದೆ ಎಂದು ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಶಶಿ ಕುಮಾರ್ ಪುತ್ಯೆ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Bhadravathi:ಬಾಯ್ಲರ್ ಸ್ಫೋ*ಟದಿಂದ ರೈಸ್‌ಮಿಲ್ ಕುಸಿತ:7 ಮಂದಿಗೆ ಗಾಯ
Sringeri; ಅಸ್ಸಾಂ ಕಾರ್ಮಿಕನಿಂದ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿ*ಕ ದೌರ್ಜನ್ಯ
BJP vs Congress; ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರು,ಕಾಂಗ್ರೆಸ್ ಪ್ರತಿದೂರು
Laxmi Hebbalkar; ಅವಾಚ್ಯ ಪದ ಬಳಕೆ ಕೇಸ್: ಸಿ.ಟಿ.ರವಿ ಪೊಲೀಸರ ವಶಕ್ಕೆ
Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.