Kadaba ಕರಾವಳಿಗೆ ಹೆಮ್ಮೆಯಾಗಲಿದೆ ಕೊಯಿಲದ ಪಶು ವೈದ್ಯಕೀಯ ಕಾಲೇಜು

ಮೊದಲ ಹಂತದ ಕಟ್ಟಡ ಕಾಮಗಾರಿ ಪೂರ್ಣ ; ಮುಂದಿನ ವರ್ಷದ ಕೊನೆಗೆ ತರಗತಿ ಪ್ರಾರಂಭಿಸುವ ಗುರಿ

Team Udayavani, Oct 26, 2023, 7:15 AM IST

Kadaba ಕರಾವಳಿಗೆ ಹೆಮ್ಮೆಯಾಗಲಿದೆ ಕೊಯಿಲದ ಪಶು ವೈದ್ಯಕೀಯ ಕಾಲೇಜು

ಕಡಬ: ಬೀದರ್‌ನ ಕರ್ನಾಟಕ ಪಶು ವೈದ್ಯಕೀಯ, ಪಶು ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾನಿಲಯದ ಅಧೀನದಲ್ಲಿ ಕಡಬ ತಾಲೂಕಿನ ಕೊಯಿಲದಲ್ಲಿ ತಲೆ ಎತ್ತುತ್ತಿರುವ ಪಶು ವೈದ್ಯಕೀಯ ಮಹಾವಿದ್ಯಾನಿಲಯವು ಮುಂದಿನ ವರ್ಷದ ಕೊನೆಗೆ ತರಗತಿಗಳನ್ನು ಪ್ರಾರಂಭಿಸುವ ಗುರಿ ಹೊಂದಿದ್ದು, ಕರಾವಳಿ ಭಾಗಕ್ಕೆ ಹೆಮ್ಮೆಯ ಸಂಸ್ಥೆಯಾಗಿ ರೂಪುಗೊಳ್ಳಲಿದೆ.

ನಾಲ್ಕು ಹಂತಗಳಲ್ಲಿ ನಿರ್ಮಾಣಗೊಳ್ಳಲಿರುವ ಕಾಲೇಜಿನ ಪ್ರಥಮ ಹಂತದ ಕಾಮಗಾರಿಯು 136 ಕೋಟಿ ರೂ. ವೆಚ್ಚದಲ್ಲಿ ಪೂರ್ಣಗೊಂಡು ಈಗಾಗಲೇ ಕಟ್ಟಡ ಉದ್ಘಾಟನೆಗೊಂಡಿದೆ. ಅದರಲ್ಲಿ ಕಾಲೇಜು ಕಟ್ಟಡ, ಬಾಲಕರ, ಬಾಲಕಿಯರ ಹಾಸ್ಟೆಲ್‌, ಅತಿಥಿ ಗೃಹ, ಪಶು ವೈದ್ಯಕೀಯ ಚಿಕಿತ್ಸಾ ಸಂಕೀರ್ಣ ಕಟ್ಟಡಗಳ ನಿರ್ಮಾಣವಾಗಿದೆ.

2ನೇ ಹಂತಕ್ಕೆ 245 ಕೋಟಿ ರೂ.
247 ಎಕರೆ ಪ್ರದೇಶದಲ್ಲಿ ಕಾರ್ಯಾಚರಿಸಲಿರುವ ಈ ಪಶು ವೈದ್ಯಕೀಯ ಕಾಲೇಜಿಗೆ ಎರಡನೇ ಹಂತದಲ್ಲಿ ಗ್ರಂಥಾಲಯ, ಸಭಾಂಗಣ, ಕಾಂಕ್ರಿಟ್‌ ರಸ್ತೆ, ಆವರಣ ಗೋಡೆ, ಸಿಬಂದಿ ವಸತಿಗೃಹ, ವಿದ್ಯಾರ್ಥಿ ಕಲಿಕಾ ಸಭಾಂಗಣ, ಹಾಸ್ಟೆಲ್‌ಗ‌ಳು, ಕುರಿ, ಮೇಕೆ , ಹಸು ಸಾಕಾಣಿಕೆಯ ಕಟ್ಟಡ ಮುಂತಾದವು ನಿರ್ಮಾಣಗೊಳ್ಳಲಿವೆ. ಉಪಕರಣ, ಪ್ರಯೋಗಾಲಯಗಳ ಸ್ಥಾಪನೆ ಮತ್ತು ಬೋಧಕರ ನೇಮಕಾತಿ ಮೂರು ಮತ್ತು ನಾಲ್ಕನೇ ಹಂತಗಳಲ್ಲಿ ನಡೆಯುತ್ತದೆ. ಅದಕ್ಕಾಗಿ 245 ಕೋಟಿ ರೂ. ಅನುದಾನಕ್ಕೆ ಪ್ರಸ್ತಾವನೆ ಸಲ್ಲಿಕೆಯಾಗಿದ್ದು, ಸರಕಾರ ಮಟ್ಟದಲ್ಲಿ ಅನುಮೊದನೆಗೊಂಡು ಶೀಘ್ರ ಟೆಂಡರ್‌ ಪ್ರಕ್ರಿಯೆ ನಡೆಯುವ ನಿರೀಕ್ಷೆಯಿದೆ.

ಸಿಬಂದಿ ಹುದ್ದೆ ಮಂಜೂರು
ಕಾಲೇಜಿಗೆ ಬೋಧಕ ಹಾಗೂ ಬೋಧಕೇತರ ಸಿಬಂದಿಗಳ ಹುದ್ದೆಗಳನ್ನು ಭರ್ತಿ ಮಾಡುವ ಪ್ರಕ್ರಿಯೆಗಳು ಈಗಾಗಲೇ ಆರಂಭಗೊಂಡಿದ್ದು, ಒಟ್ಟು 175 ಹುದ್ದೆಗಳ ಬೇಡಿಕೆಯನ್ನು ಸರಕಾರಕ್ಕೆ ಸಲ್ಲಿಸಲಾಗಿದೆ. ಆ ಪೈಕಿ ಪ್ರಥಮ ವರ್ಷದ ತರಗತಿಗಳನ್ನು ಆರಂಭಿಸಲು ಅನುಕೂಲವಾಗುವಂತೆ 25 ಮಂದಿ ಬೋಧಕರು, 15 ಮಂದಿ ಬೋಧಕೇತರರು ಹಾಗೂ 17 ಅಧಿಕಾರಿ ಹುದ್ದೆಗಳು ಸೇರಿ ಒಟ್ಟು 57 ಹುದ್ದೆಗಳನ್ನು ಸರಕಾರವು ಪ್ರಥಮ ಹಂತದಲ್ಲಿ ಮಂಜೂರುಗೊಳಿಸಿದೆ. ಹುದ್ದೆಗಳು ಭರ್ತಿಯಾದ ಬಳಿಕ ದಿಲ್ಲಿಯಲ್ಲಿರುವ ಭಾರತೀಯ ಪಶು ವೈದ್ಯಕೀಯ ಪರಿಷತ್‌ (ವಿಸಿಐ) ನಿಗದಿಪಡಿಸಿದ ಎಲ್ಲ ಅಗತ್ಯತೆಗಳನ್ನು ಅಳವಡಿಸಿಕೊಳ್ಳಲಾಗಿದೆ ಎಂದು ತಪಾಸಣೆ ನಡೆಸಿ ಖಚಿತ ಪಡಿಸಿಕೊಂಡ ಬಳಿಕವಷ್ಟೇ ಕಾಲೇಜಿಗೆ ಕೋರ್ಸ್‌ಗಳನ್ನು ನಡೆಸಲು ಹಾಗೂ ವಿದ್ಯಾರ್ಥಿಗಳನ್ನು ದಾಖಲಿಸಿಕೊಳ್ಳಲು ಅನುಮತಿ ದೊರೆಯಲಿದೆ.

7ನೇ ಪಶುವೈದ್ಯ ಕಾಲೇಜು
ಕೊಯಿಲದಲ್ಲಿ ಆರಂಭಗೊಳ್ಳಲಿರುವ ಕಾಲೇಜು ಕರ್ನಾಟಕದ ಏಳನೇ ಪಶು ವೈದ್ಯಕೀಯ ಕಾಲೇಜಾಗಿದೆ. ಮಾಜಿ ಮುಖ್ಯಮಂತ್ರಿ ಡಿ.ವಿ. ಸದಾನಂದ ಗೌಡ 2012-13ರ ಬಜೆಟ್‌ನಲ್ಲಿ ಕಾಲೇಜನ್ನು ಘೋಷಿಸಿದ್ದರು. ಕಾಲೇಜಿನ ಕಟ್ಟಡ ನಿರ್ಮಾಣ ಕಾಮಗಾರಿಗೆ 2016ರಲ್ಲಿ ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯ ಶಂಕುಸ್ಥಾಪನೆ ನೆರವೇರಿಸಿದ್ದರು. ಆದರೆ 2018ರ ವೇಳೆಗೆ ಪೂರ್ಣಗೊಳ್ಳಬೇಕಿದ್ದ ಮೊದಲ ಹಂತದ ಕಟ್ಟಡದ ಕಾಮಗಾರಿಯು 5 ವರ್ಷಗಳ ವಿಳಂಬದ ಬಳಿಕ 2023ರ ಎಪ್ರಿಲ್‌ ತಿಂಗಳಲ್ಲಿ ಪೂರ್ಣಗೊಂಡು ಉದ್ಘಾಟನೆಯಾಗಿತ್ತು.

ಕಳಪೆ ಕಾಮಗಾರಿಯ ಆರೋಪ
ಮೊದಲ ಹಂತದ ಕಟ್ಟಡದ ಕಾಮಗಾರಿ ಕಳಪೆಯಾಗಿದೆ ಎನ್ನುವುದು ಸ್ಥಳೀಯರ ದೂರು. ಆಮೆಗತಿಯಲ್ಲಿ ಕಾಮಗಾರಿ ನಡೆದಿದ್ದು, ಕಾಂಕ್ರೀಟ್‌ ಕಾಮಗಾರಿಯ ಸಂದರ್ಭದಲ್ಲಿ ಅಗತ್ಯ ಅನುಷ್ಠಾನ ಕ್ರಮಗಳನ್ನು ಕೈಗೊಳ್ಳದೇ ಇದ್ದುದರಿಂದ ಕಾಂಕ್ರೀಟ್‌ ಛಾವಣಿಗಳು ಸೋರುತ್ತಿದ್ದವು. ಬಳಿಕ ಅದರ ಮೇಲೆ ಶೀಟ್‌ ಮಾದರಿಯ ಬೇರೊಂದು ಪದರ ಹಾಕಲಾಗಿದೆ. ಆದುದರಿಂದ ಕಟ್ಟಡವನ್ನು ಹಸ್ತಾಂತರ ಪಡೆಯುವುದಕ್ಕೆ ಮೊದಲು ಗುಣಮಟ್ಟದ ಪರೀಕ್ಷೆ ನಡೆಯಬೇಕು ಎಂದು ಸ್ಥಳೀಯರು ಶಾಸಕರಿಗೆ ದೂರು ನೀಡಿದ್ದಾರೆ.

ಭಾರತೀಯ ಪಶು ವೈದ್ಯಕೀಯ ಪರಿಷತ್‌ (ವಿಸಿಐ) ನ ಮಾನದಂಡಗಳನ್ನು ಕಟ್ಟುನಿಟ್ಟಾಗಿ ಪೂರ್ಣಗೊಳಿಸಿದ ಬಳಿಕಷವೆrà ಕಾಲೇಜು ಅನುಮತಿ ಪಡೆದು ವಿದ್ಯಾರ್ಥಿಗಳನ್ನು ದಾಖಲಿಸಿಕೊಳ್ಳಲಿದೆ. ಪ್ರಥಮ ಹಂತದ ಕೆಲಸಗಳು ಪೂರ್ಣಗೊಂಡಿದ್ದು, ಮುಂದಿನ ಹಂತದ ಕೆಲಸ ಕಾರ್ಯಗಳು ಶೀಘ್ರ ಆರಂಭಗೊಳ್ಳಲಿವೆ. 2024ರ ಕೊನೆಯೊಳಗೆ ಎಲ್ಲ ಕೆಲಸಗಳು ಪೂರ್ಣಗೊಂಡು ವಿದ್ಯಾರ್ಥಿಗಳ ದಾಖಲಾತಿಗೆ ಸಿದ್ಧಗೊಳ್ಳುವ ನಿರೀಕ್ಷೆ ಇದೆ.
-ಡಾ| ಎಲ್‌.ರಂಗನಾಥ್‌, ವಿಶೇಷ ಕರ್ತವ್ಯಾಧಿಕಾರಿ,
ಕೊಯಿಲ ಪಶು ವೈದ್ಯಕೀಯ ಮಹಾವಿದ್ಯಾನಿಲಯ

-ನಾಗರಾಜ್‌ ಎನ್‌.ಕೆ.

ಟಾಪ್ ನ್ಯೂಸ್

ಕಸ್ತೂರಿಂಗನ್‌ ವರದಿ ತಿರಸ್ಕಾರ ಆಗ್ರಹಿಸಿ “ಬೆಂಗಳೂರು ಚಲೋ’

ಕಸ್ತೂರಿಂಗನ್‌ ವರದಿ ತಿರಸ್ಕಾರ ಆಗ್ರಹಿಸಿ “ಬೆಂಗಳೂರು ಚಲೋ’

1-lll

Border-Gavaskar Test series ಇಂದಿನಿಂದ: ಹೋರಾಟಕ್ಕೆ ಭಾರತ-ಆಸ್ಟ್ರೇಲಿಯ ಸಿದ್ಧ

ರಾಷ್ಟ್ರ ರಾಜಧಾನಿಗೆ ನಂದಿನಿ ಲಗ್ಗೆ: ಹೈನುಗಾರರಿಗೂ ಸಿಗಲಿ ಮನ್ನಣೆ

New Delhi: ರಾಷ್ಟ್ರ ರಾಜಧಾನಿಗೆ ನಂದಿನಿ ಲಗ್ಗೆ: ಹೈನುಗಾರರಿಗೂ ಸಿಗಲಿ ಮನ್ನಣೆ

Yasin Malik

Yasin Malik ವಿಚಾರಣೆಗೆ ತಿಹಾರ್‌ ಜೈಲಿನಲ್ಲೇ ಕೋರ್ಟ್‌ ರೂಂ: ಸುಪ್ರೀಂ

court

Himachal Pradesh;ನಷ್ಟದಲ್ಲಿರುವ ಹೊಟೇಲ್‌ ಮುಚ್ಚಲು ಹೈಕೋರ್ಟ್‌ ಆದೇಶ

1-moi

Prime Minister Modi; ಗಯಾನಾ, ಡೊಮಿನಿಕಾ ಗೌರವ ಪ್ರದಾನ

Dinesh Gundu Rao: ಅನರ್ಹರ ಕಾರ್ಡ್‌ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ

Dinesh Gundu Rao: ಅನರ್ಹರ ಕಾರ್ಡ್‌ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಯಾತ್ರಾರ್ಥಿಯಿಂದ ಸೌತಡ್ಕ ಕ್ಷೇತ್ರದ ಸಿಬಂದಿ ಮೇಲೆ ಹಲ್ಲೆ

Kokkada: ಯಾತ್ರಾರ್ಥಿಯಿಂದ ಸೌತಡ್ಕ ಕ್ಷೇತ್ರದ ಸಿಬಂದಿ ಮೇಲೆ ಹಲ್ಲೆ

Puttur: ಸ್ಕೂಲ್‌ ಬಸ್‌ಗೆ ಢಿಕ್ಕಿಯಾಗುವುದನ್ನು ತಪ್ಪಿಸಿ ಮನೆಗೆ ನುಗ್ಗಿದ ಖಾಸಗಿ ಬಸ್‌

Puttur: ಸ್ಕೂಲ್‌ ಬಸ್‌ಗೆ ಢಿಕ್ಕಿಯಾಗುವುದನ್ನು ತಪ್ಪಿಸಿ ಮನೆಗೆ ನುಗ್ಗಿದ ಖಾಸಗಿ ಬಸ್‌

Puttur: ಕಾರು ಚಾಲಕನಿಗೆ ಮೂರ್ಛೆ ರೋಗ: ಅಪಾಯದಿಂದ ಪಾರು

Puttur: ಕಾರು ಚಾಲಕನಿಗೆ ಮೂರ್ಛೆ ರೋಗ: ಅಪಾಯದಿಂದ ಪಾರು

Shishila:ಮಕ್ಕಳನ್ನು ಶಾಲೆಗೆ ಕಳುಹಿಸುವ ವೇಳೆ ಕಾಡಾನೆ ದಾಳಿ;ಸೊಂಡಿಲಿನಿಂದ ಬೈಕ್ ಕೆಡವಿದ ಆನೆ

Shishila:ಮಕ್ಕಳನ್ನು ಶಾಲೆಗೆ ಕಳುಹಿಸುವ ವೇಳೆ ಕಾಡಾನೆ ದಾಳಿ;ಸೊಂಡಿಲಿನಿಂದ ಬೈಕ್ ಕೆಡವಿದ ಆನೆ

5-vitla

Vitla: ಕೊಳೆತ ಸ್ಥಿತಿಯಲ್ಲಿ ಮೃತದೇಹ ಪತ್ತೆ; 2 ದಿನಗಳ ಹಿಂದೆ ಮೃತಪಟ್ಟಿರುವುದಾಗಿ ಶಂಕೆ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

ಕಸ್ತೂರಿಂಗನ್‌ ವರದಿ ತಿರಸ್ಕಾರ ಆಗ್ರಹಿಸಿ “ಬೆಂಗಳೂರು ಚಲೋ’

ಕಸ್ತೂರಿಂಗನ್‌ ವರದಿ ತಿರಸ್ಕಾರ ಆಗ್ರಹಿಸಿ “ಬೆಂಗಳೂರು ಚಲೋ’

1-lll

Border-Gavaskar Test series ಇಂದಿನಿಂದ: ಹೋರಾಟಕ್ಕೆ ಭಾರತ-ಆಸ್ಟ್ರೇಲಿಯ ಸಿದ್ಧ

ರಾಷ್ಟ್ರ ರಾಜಧಾನಿಗೆ ನಂದಿನಿ ಲಗ್ಗೆ: ಹೈನುಗಾರರಿಗೂ ಸಿಗಲಿ ಮನ್ನಣೆ

New Delhi: ರಾಷ್ಟ್ರ ರಾಜಧಾನಿಗೆ ನಂದಿನಿ ಲಗ್ಗೆ: ಹೈನುಗಾರರಿಗೂ ಸಿಗಲಿ ಮನ್ನಣೆ

Yasin Malik

Yasin Malik ವಿಚಾರಣೆಗೆ ತಿಹಾರ್‌ ಜೈಲಿನಲ್ಲೇ ಕೋರ್ಟ್‌ ರೂಂ: ಸುಪ್ರೀಂ

1-GM

General Motors;1,000 ಉದ್ಯೋಗಿಗಳು ಕೆಲಸದಿಂದ ವಜಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.