ಕೊಕ್ಕಡ: ಎಂಡೋ ಸಂತ್ರಸ್ತರಿಗೆ ಸಮವಸ್ತ್ರ ವಿತರಣೆ
Team Udayavani, Mar 15, 2017, 12:39 PM IST
ನೆಲ್ಯಾಡಿ : ಮಹಿಳಾ ದಿನಾಚರಣೆ ಪ್ರಯುಕ್ತ ಜಿಲ್ಲಾ ಬಿಜೆಪಿ ಮಹಿಳಾ ಮೋರ್ಚಾದ ವತಿಯಿಂದ ಕೊಕ್ಕಡ ಎಂಡೋ ಪಾಲನ ಕೇಂದ್ರದಲ್ಲಿರುವ ಸಂತ್ರಸ್ತರಿಗೆ ಸಮವಸ್ತ್ರ ವಿತರಣೆ ಕಾರ್ಯಕ್ರಮ ನಡೆಯಿತು.
ಜಿಲ್ಲಾ ಬಿಜೆಪಿ ಮಹಿಳಾ ಮೋರ್ಚಾದ ಅಧ್ಯಕ್ಷೆ ಪೂಜಾ ಪೈ ಅಧ್ಯಕ್ಷತೆ ವಹಿಸಿ ಮಾತನಾಡಿ, ಮಹಿಳಾ ದಿನಾಚರಣೆಯ ಅಂಗವಾಗಿ ಜಿಲ್ಲಾ ಮಹಿಳಾ ಮೋರ್ಚಾದಿಂದ ವಿಶಿಷ್ಟವಾದ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಎಂಡೋ ಸಂತ್ರಸ್ತ ಮಹಿಳೆಯರಿಗೆ ಸಮವಸ್ತ್ರವನ್ನು ನೀಡುವ ಮೂಲಕ ಸಂತೈಸುವ ಕಾರ್ಯದಲ್ಲಿ ಆತ್ಮತೃಪ್ತಿಯಿದೆ. ದುರಂತಕ್ಕೊಳಗಾದ ಸಂತ್ರಸ್ತರನ್ನು ಕೈಲಾದ ಮಟ್ಟಿಗೆ ಸಂತೈಸಿ ಅವರಿಗೆ ಧ್ಯರ್ಯ ತುಂಬುವ ಕಾರ್ಯವನ್ನು ನಡೆಸುವುದು ನಮ್ಮ ಉದ್ದೇಶವಾಗಿದೆ ಎಂದರು.
ಜಿಲ್ಲಾ ಬಿಜೆಪಿ ಅಧ್ಯಕ್ಷ ಸಂಜೀವ ಮಠಂದೂರು ಮಾತನಾಡಿ, ಮಹಿಳಾ ದಿನಾಚರಣೆಯಂದು ಮಹಿಳಾ ಮೋರ್ಚಾದಿಂದ ಎಂಡೋ ಸಂತ್ರಸ್ತರಿಗೆ ಸಮವಸ್ತ್ರ ನೀಡಿರುವುದು ಅರ್ಥಪೂರ್ಣ ಕಾರ್ಯವಾಗಿದೆ ಎಂದರು.
ರಾಜ್ಯ ಕಾರ್ಯಕಾರಿಣಿ ಸದಸ್ಯೆಯರಾದ ರಜನಿ ದುಗ್ಗಣ್ಣ, ಜಯಂತಿ ನಾಯಕ್, ಜಿಲ್ಲಾ ಕಾರ್ಯದರ್ಶಿ ಪ್ರಭಾ ಮಾಲಿನಿ, ಮೋರ್ಚಾದ ಜಿಲ್ಲಾ ಉಪಾಧ್ಯಕ್ಷೆ ಶಾರದಾ ರೈ, ಧರ್ಮಸ್ಥಳ ತಾ.ಪಂ. ಸದಸ್ಯೆ ಧನಲಕ್ಷೀ¾ ಜನಾರ್ದನ್, ಜಿಲ್ಲಾ ಮಹಿಳಾ ಮೋರ್ಚಾದ ಪದಾಧಿಕಾರಿಗಳಾದ ಸೇವಂತಿ, ರೇಖಾ ಶೆಟ್ಟಿ, ಕೊಕ್ಕಡ ಜಿ.ಪಂ. ಸದಸ್ಯ ಕೊರಗಪ್ಪ ನಾಯ್ಕ, ಕೊಕ್ಕಡ ತಾ.ಪಂ. ಸದಸ್ಯ ಲಕ್ಷ್ಮೀನಾರಾಯಣ ಟಿ.ಎಂ., ಪೋಷಕ ಸಂಘದ ಅಧ್ಯಕ್ಷ ರಾಮಣ್ಣ ಗೌಡ, ಎಂಡೋ ಹೋರಾಟಗಾರ ಶ್ರೀಧರ ಗೌಡ ಕೆಂಗುಡೇಲು, ಕೊಕ್ಕಡ ಸೇವಾ ಸಹಕಾರ ಸಂಘದ ಅಧ್ಯಕ್ಷ ನಾರಾಯಣ ಗೌಡ ಪಿ. ಉಪಸ್ಥಿತರಿದ್ದರು. ರೇವತಿ ತಾಮಣಕರ್ ಸ್ವಾಗತಿಸಿ ಎಂಡೋ ಪಾಲನ ಕೇಂದ್ರದ ಸಂಯೋಜಕ ಸತೀಶ್ ನಾಯ್ಕ ವಂದಿಸಿದರು. ಎಂಡೋ ಪಾಲನ ಕೇಂದ್ರದಲ್ಲಿರುವ ಮಹಿಳೆಯರು, ಮಕ್ಕಳು ಮತ್ತು ಪುರುಷರಿಗೆ ಉಡುಪುಗಳು ಮತ್ತು ಸಮವಸ್ತ್ರ, ಸಿಹಿತಿಂಡಿ ವಿತರಿಸಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Bajpe: ಹೆಜ್ಜೇನು ಕಡಿತದಿಂದ ದಿನಪತ್ರಿಕೆ ವಿತರಕ ಸಾವು
BBK11: ಆರಂಭದಿಂದಲೂ ಮಂಜು ಮೋಸದಿಂದಲೇ ಆಡುತ್ತಾ ಬರುತ್ತಿದ್ದಾರೆ.. ಮೋಕ್ಷಿತಾ ಕಣ್ಣೀರು
Adani ವಿದ್ಯುತ್ ಖರೀದಿ ಅಕ್ರಮ: ಆರೋಪ ತಳ್ಳಿ ಹಾಕಿದ ಜಗನ್ ರೆಡ್ಡಿ
Mangaluru: ಗಾಂಜಾ ಸೇವನೆ; ಪ್ರತ್ಯೇಕ ಪ್ರಕರಣ; ಇಬ್ಬರು ವಶಕ್ಕೆ
IFFI 2024; ಟಾಕ್ಸಿಕ್ ಗೆ ಅತ್ಯುತ್ತಮ ಪ್ರಶಸ್ತಿ, ವಿಕ್ರಾಂತ್ ಮಸ್ಸೆಗೆ ವಾರ್ಷಿಕ ಪುರಸ್ಕಾರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.