ಬೆಳ್ತಂಗಡಿ : ಮೆದುಳಿನ ರಕ್ತಸ್ರಾವದಿಂದ ಕೊಕ್ಕಡದ ಗ್ರಾಮಕರಣಿಕ ರೂಪೇಶ್ ನಿಧನ
Team Udayavani, Mar 27, 2022, 6:53 PM IST
ಬೆಳ್ತಂಗಡಿ : ಮೆದುಳಿನ ರಕ್ತಸ್ರಾವದಿಂದ ಬಳಲಿ, ಆಸ್ಪತ್ರೆಯಲ್ಲಿ ಜೀವನ್ಮರಣ ಹೋರಾಟ ನಡೆಸುತ್ತಿದ್ದ ಬೆಳ್ತಂಗಡಿ ನಿವಾಸಿ, ಗ್ರಾಮಕರಣಿಕ ರೂಪೇಶ್(38) ಮಾ.27 ರಂದು ಮೃತಪಟ್ಟಿದ್ದಾರೆ.
ಬೆಂಗಳೂರಿನಲ್ಲಿ ಗ್ರಾಮಕರಣಿಕರಾಗಿ ಸೇವೆ ಸಲ್ಲಿಸಿದ್ದ ರೂಪೇಶ್ ಅವರು ಕೊಕ್ಕಡಕ್ಕೆ ವರ್ಗಾವಣೆಗೊಂಡು ಪ್ರಸ್ತುತ ಕೊಕ್ಕಡ, ಶಿಶಿಲ, ಶಿಬಾಜೆಯ ಗ್ರಾಮಕರಣಿಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು.
ಬೆಳ್ತಂಗಡಿಯಲ್ಲಿ ವಾಸ್ತವ್ಯವಿದ್ದು, ಮಾ.18 ರಂದು ರಾತ್ರಿ ವೇಳೆ ಅಸ್ವಸ್ಥಗೊಂಡ ಅವರನ್ನು ಕೂಡಲೇ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಗಂಭೀರ ಸ್ಥಿತಿಯಲ್ಲಿದ್ದ ಇವರನ್ನು ಉಡುಪಿಯ ಆದರ್ಶ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಶವವನ್ನು ಬೆಳ್ತಂಗಡಿ ಸರಕಾರಿ ಆಸ್ಪತ್ರೆಯ ಮರಣೋತ್ತರ ಪರೀಕ್ಷೆಗೆ ಇರಿಸಲಾಗಿದೆ.
ರೂಪೇಶ್ ಅವರು ಗ್ರಾಮಕರಣಿಕರಾಗಿ 16 ವರ್ಷ ಸೇವೆ ಸಲ್ಲಿಸಿದ್ದರು.
ಅವರು ಪತ್ನಿ ಹಾಗೂ ಇಬ್ಬರು ಪುತ್ರರನ್ನು ಅಗಲಿದ್ದಾರೆ.
ಇದನ್ನೂ ಓದಿ : ಮಣಿನಾಲ್ಕೂರು : ವೃದ್ಧೆಯ ಕೈ ಕಟ್ಟಿ, ಬಾಯಿಗೆ ಬಟ್ಟೆ ತುರುಕಿ ಚಿನ್ನಾಭರಣ ದೋಚಿದ ಕಳ್ಳರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Belthangady: ಬೈಕ್ ಸವಾರ ಸಾವು ಪ್ರಕರಣ; ಸರಕಾರಿ ಬಸ್ ಚಾಲಕನಿಗೆ ಶಿಕ್ಷೆ;ದಂಡ
Egg Thrown: ಶಾಸಕ ಮುನಿರತ್ನ ಮೇಲೆ ಮೊಟ್ಟೆ ಎಸೆತ: ಬಿಜೆಪಿ ನಾಯಕರು ಗರಂ
New Products KMF: ಮಾರುಕಟ್ಟೆಗೆ ಬಂತು “ನಂದಿನಿ’ ಇಡ್ಲಿ, ದೋಸೆ ಹಿಟ್ಟು
GST: ಖರೀದಿ, ಮಾರಾಟ ದರದ ವ್ಯತ್ಯಾಸಕ್ಕಷ್ಟೇ 18% ಜಿಎಸ್ಟಿ
Pro Kabaddi League-11: ಇಂದು ಎಲಿಮಿನೇಟರ್ ಸ್ಪರ್ಧೆ ಸೋತವರು ಮನೆಗೆ, ಗೆದ್ದವರು ಸೆಮಿಗೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.