ಮಾಣಿಲ ಶ್ರೀಧಾಮ-ಧರ್ಮಸ್ಥಳಕ್ಕೆ ಕೆಎಸ್‌ಆರ್‌ಟಿಸಿ ಬಸ್
Team Udayavani, Jun 16, 2019, 5:00 AM IST
ವಿಟ್ಲ: ಮಾಣಿಲ ಶ್ರೀಧಾಮ ಶ್ರೀ ಮಹಾಲಕ್ಷ್ಮೀ ಕ್ಷೇತ್ರದಿಂದ ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ ನೂತನವಾಗಿ ಪ್ರಾರಂಭ ಗೊಂಡ ಕೆಎಸ್‌ಆರ್‌ಟಿಸಿ ಬಸ್ ಸಂಚಾರಕ್ಕೆ ಶನಿವಾರ ಚಾಲನೆ ನೀಡಲಾಯಿತು.
ಮಾಣಿಲ ಗ್ರಾಮದ ಪಕಳಕುಂಜದಿಂದ ಧರ್ಮಸ್ಥಳಕ್ಕೆ ಪ್ರತಿನಿತ್ಯ ಬಸ್ ಸಂಚಾರ ಪ್ರಾರಂಭಿಸಬೇಕೆಂದು ಮಾಣಿಲ ಶ್ರೀಧಾಮ ಮಹಾಲಕ್ಷ್ಮೀ ಕ್ಷೇತ್ರದ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿ ನೇತೃತ್ವದಲ್ಲಿ ಮನವಿ ಸಲ್ಲಿಸಲಾಗಿತ್ತು. ಸಂಚಾರಕ್ಕೆ ಹಲವು ಅಡೆತಡೆಗಳು ಎದುರಾಗಿತ್ತು. ಬಳಿಕ ಹಲವು ಅಧಿಕಾರಿ ಗಳ, ಜನಪ್ರತಿನಿಧಿಗಳ, ಸಚಿವರ ಜತೆ ಮಾತುಕತೆ ಮಾಡಿ, ಕೆಎಸ್‌ಆರ್‌ಟಿಸಿ ವಿಭಾಗೀಯ ನಿಯಂತ್ರಣಾಧಿಕಾರಿ ದೀಪಕ್‌ಕುಮಾರ್ ಮೂಲಕ ಮನವಿ ಮಾಡಲಾಯಿತು. ಕೊನೆಗೂ ಬಸ್ ಸಂಚಾರಕ್ಕೆ ಅನುಮತಿ ದೊರಕಿದೆ.
ಬಸ್ಸಿಗೆ ಪೂಜೆ
ಬೆಳಗ್ಗೆ ಮಾಣಿಲ ಕ್ಷೇತ್ರದಲ್ಲಿ ಮೋಹನದಾಸ ಪರಮಹಂಸ ಸ್ವಾಮೀಜಿ ಅವರ ಮಾರ್ಗದರ್ಶನದಲ್ಲಿ ಬಸ್ಸಿಗೆ ಪೂಜೆ ಸಲ್ಲಿಸಲಾಯಿತು. ಬಳಿಕ ಪಕಳಕುಂಜ ದಲ್ಲಿ ಪೆರುವಾಯಿ ಫಾತಿಮಾ ಮಾತೆಯ ದೇವಾಲಯದ ಧರ್ಮಗುರು ವಿಶಾಲ್ ಮೋನಿಸ್, ಮಾಣಿಲ ಶ್ರೀಗಳು ಪ್ರಥಮ ಸಂಚಾರಕ್ಕೆ ಚಾಲನೆ ನೀಡಿದರು.
ಮಾಣಿಲ ಗ್ರಾ.ಪಂ. ಅಧ್ಯಕ್ಷ ರಾಜೇಶ್ ಕುಮಾರ್ ಬಾಳೆಕಲ್ಲು, ಉಪಾಧ್ಯಕ್ಷೆ ವಿಶಾಲಾಕ್ಷಿ, ಪೆರುವಾಯಿ ಗ್ರಾ.ಪಂ. ಅಧ್ಯಕ್ಷ ರಾಲ್ಫ್ ಡಿ’ಸೋಜಾ, ಜುಮಾ ಮಸೀದಿ ಅಧ್ಯಕ್ಷ ಮೊಹಿದು ಕುಟ್ಟಿ, ಸಾಮಾಜಿಕ ಹೋರಾಟಗಾರ್ತಿ ಕುಂಞಿಪಾತು, ಗೋಪಾಲಕೃಷ್ಣ ನಾಯಕ್, ತಾ.ಪಂ. ಮಾಜಿ ಸದಸ್ಯ ರಾಜೇಂದ್ರನಾಥ ರೈ, ನ್ಯಾಯವಾದಿ ವಿನೋದ್ ಪಕಳಕುಂಜ, ಅಶ್ರಫ್ ಕಾಮಜಲು, ಉದಯಕುಮಾರ್ ಪಕಳಕುಂಜ, ಚಂದ್ರಶೇಖರ್, ಪ್ರಭಾಕರ, ರಾಮ ಕುಲಾಲು ಸಾಯ, ವಿನಯ್, ಶ್ರೀಧರ್ ಬಾಳೆಕಲ್ಲು, ಸುಶೀಲ್ ಬಾಳೆಕಾನ, ಸತ್ಯಶಂಕರ್ ಭಟ್, ಮೀನಾಕ್ಷಿ ಸಾಯ, ಮಾಣಿಲ ಶ್ರೀ ಮಹಾಲಕ್ಷ್ಮೀ ಕ್ಷೇತ್ರದ ಮಹಿಳಾ ಸೇವಾ ಸಮಿತಿ ಅಧ್ಯಕ್ಷೆ ವನಿತಾ ವಿ.ಶೆಟ್ಟಿ, ಕಾರ್ಯದರ್ಶಿ ಗೀತಾ ಪುರುಷೋತ್ತಮ, ವಿಟ್ಟಲ ಶೆಟ್ಟಿ ಸುಣ್ಣಂಬಳ, ಶ್ರೀಧಾಮ ಮಿತ್ರ ಮಂಡಳಿ ಅಧ್ಯಕ್ಷ ಯೋಗೀಶ್ ಬಾಳೆಕಾನ ಉಪಸ್ಥಿತರಿದ್ದರು.
ವಿಟ್ಲ ಪರಿಸರದವರಿಗೂ ಪ್ರಯೋಜನ
ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿ ಆಶೀರ್ವಚನ ನೀಡಿ, ಮಾಣಿಲ ಕ್ಷೇತ್ರಕ್ಕೂ ಧರ್ಮಸ್ಥಳ ಕ್ಷೇತ್ರಕ್ಕೂ ಅವಿನಾಭಾವ ಸಂಬಂಧವಿದೆ. ಹಲವು ಜನರು ತಮ್ಮ ಕಷ್ಟಗಳನ್ನು ನಿವಾರಿಸಲು ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ ತೆರಳುತ್ತಿದ್ದಾರೆ. ಈ ಬಸ್ ಸೇವೆ ಭಕ್ತರಿಗೆ ಇನ್ನಷ್ಟು ಪ್ರಯೋಜನವಾಗಲಿದೆ. ಇದರಿಂದ ವಿಟ್ಲ ಪರಿಸರದವರಿಗೂ ಪ್ರಯೋಜನವಾಗಲಿದೆ. ಗ್ರಾಮದ ಅಭಿವೃದ್ಧಿಯಾಗಬೇಕಾದರೆ ಎಲ್ಲರೂ ಒಗ್ಗೂಟ್ಟಿನಿಂದ ಕೆಲಸ ಮಾಡಿದಾಗ ಸಾಧ್ಯವಾಗುತ್ತದೆ. ಸಮಾಜದಲ್ಲಿ ಏಕತೆ-ಸಾಮರಸ್ಯ ಉಂಟು ಮಾಡುವ ಕೆಲಸಗಳು ನಡೆಯಬೇಕು ಎಂದರು.
ವೇಳಾಪಟ್ಟಿ
ಪ್ರತಿದಿನ ಬೆಳಗ್ಗೆ 7.30ಕ್ಕೆ ಪಕಳಕುಂಜದಿಂದ ಹೊರಟು ವಿಟ್ಲ, ಉಪ್ಪಿನಂಗಡಿ ರಸ್ತೆಯಾಗಿ ಧರ್ಮಸ್ಥಳಕ್ಕೆ ತಲುಪಲಿದೆ. ಸಂಜೆ 5.30ಕ್ಕೆ ಪಕಳಕುಂಜಕ್ಕೆ ಹಿಂದಿರುಗಲಿದೆ ಎಂದು ಬಸ್ಸಿನ ನಿರ್ವಾಹಕರು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Delhi; ರಸ್ತೆಗಳು ಪ್ರಿಯಾಂಕಾ ಗಾಂಧಿ ಕೆನ್ನೆಯಂತಿರಬೇಕು: ಬಿಜೆಪಿ ನಾಯಕನ ಹೇಳಿಕೆಗೆ ಟೀಕೆ
Snuff: ನಶ್ಯ ತಂದಿಟ್ಟ ಸಮಸ್ಯೆ
Nagavalli Bangale Movie: ಸೆನ್ಸಾರ್ ಪಾಸಾದ ನಾಗವಲ್ಲಿ
Sky Force: ಭಾರತದ ಮೊದಲ ವೈಮಾನಿಕ ದಾಳಿಯ ʼಸ್ಕೈ ಫೋರ್ಸ್ʼ ಟ್ರೇಲರ್ ಔಟ್- ಮಿಂಚಿದ ಅಕ್ಷಯ್
Doddaballapura: ಘಾಟಿ ಕ್ಷೇತ್ರದಲ್ಲಿ ಶ್ರೀ ಸುಬ್ರಹ್ಮಣ್ಯಸ್ವಾಮಿ ಬ್ರಹ್ಮ ರಥೋತ್ಸವ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.