ಕುದುರೆಪಾಯ: ಉಸ್ಮಾನ್ ಕೊಲೆ ಆರೋಪಿಗಳ ಸೆರೆ
Team Udayavani, Jul 17, 2023, 6:36 AM IST
ಅರಂತೋಡು: ಚೆಂಬು ಗ್ರಾಮದ ಕುದ್ರೆಪಾಯದಲ್ಲಿ ಆಸ್ತಿ ವಿವಾದಕ್ಕೆ ಸಹೋದರ ಉಸ್ಮಾನ್‌ನಿಗೆ ಚೂರಿ ಇರಿದು ಕೊಲೆಗೈದು ಪರಾರಿಯಾಗಿದ್ದ ಆರೋಪಿಗಳನ್ನು ಶನಿವಾರ ರಾತ್ರಿ ಕೇರಳದಲ್ಲಿ ಪೊಲೀಸರು ಬಂಧಿಸಿದ್ದಾರೆ ಎಂದು ತಿಳಿದು ಬಂದಿದೆ.
ಹತ್ಯೆ ಆರೋಪಿಗಳಾಗಿದ್ದ ಸತ್ತಾರ್ ಮತ್ತು ರಫೀಕ್ ಚೂರಿಯಿಂದ ಇರಿದು ರಿಕ್ಷಾದಲ್ಲಿ ಪರಾರಿಯಾಗಿದ್ದರು. ಘಟನೆಗೆ ಸಂಬಂಧಿಸಿ ರಿಕ್ಷಾ ಚಾಲಕನನ್ನು ವಿಚಾರಣೆಗೆ ಒಳಪಡಿಸಲಾಗಿತ್ತು, ಆದರೆ ಆರೋಪಿಗಳು ನಾಪತ್ತೆಯಾಗಿದ್ದರು. ಪೋಲಿಸರು ಆರೋಪಿಗಳ ಜಾಡು ಹಿಡಿದು ಶೋಧಕಾರ್ಯ ನಡೆಸಿದ್ದರು. ಆರೋಪಿಗಳು ಕೇರಳಕ್ಕೆ ಪರಾರಿಯಾಗಿರುವ ಶಂಕೆ ವ್ಯಕ್ತವಾಗಿತ್ತು. ಈ ಹಿನ್ನೆಲೆಯಲ್ಲಿ ತೀವ್ರ ಕಾರ್ಯಚರಣೆ ನಡೆಸಿದ ಪೋಲಿಸರು ಆರೋಪಿಗಳನ್ನು ಎರ್ನಾಕುಳಂನಲ್ಲಿ ಬಂದಿಸಿದ್ದಾರೆ ಎಂದು ತಿಳಿದು ಬಂದಿದೆ.
ಕಳೆದ ಶುಕ್ರವಾರ ಕುದ್ರೆಪಾಯದ ಜಾಗದಲ್ಲಿ ಸರ್ವೆ ಇತ್ತೆನ್ನಲಾಗಿದೆ. ಅದಕ್ಕಾಗಿ ಉಸ್ಮಾನ್ ಅವರಲ್ಲದೆ ರಫೀಕ್ ಮತ್ತು ಸತ್ತಾರ್ ಕೂಡ ಬಂದಿದ್ದರು. ಸರ್ವೆಗೆ ಬಂದಿದ್ದ ಅಧಿಕಾರಿಗಳು ತಮ್ಮ ಕಾರ್ಯ ಮುಗಿಸಿ ದೂರದಲ್ಲಿ ಇದ್ದ ಸಂದರ್ಭ ಉಸ್ಮಾನ್, ರಫೀಕ್, ಸತ್ತಾರ್‌ಅವರ ಜಾಗದ ಸಮೀಪ ರಸ್ತೆ ಬದಿ ನಿಂತು ಮಾತನಾಡುತ್ತಿದ್ದರು. ಮಾತಿಗೆ ಮಾತು ಬೆಳೆದು ತಮ್ಮಂದಿರಾದ ರಫೀಕ್ ಮತ್ತು ಸತ್ತಾರ್ ಅಣ್ಣ ಉಸ್ಮಾನ್‌ರಿಗೆ ಚೂರಿಯಿಂದ ಇರಿದಿದ್ದರು. ಪರಿಣಾಮವಾಗಿ ಉಸ್ಮಾನ್ ಕುಸಿದು ಬಿದ್ದರು. ದೂರದಲ್ಲಿದ್ದ ಸರ್ವೆ ಅಧಿಕಾರಿಗಳು ಮತ್ತಿತರರು ಕಿರುಚಾಟದ ಶಬ್ದ ಕೇಳಿ ಸ್ಥಳಕ್ಕೆ ಓಡಿ ಬಂದಾಗ ರಫೀಕ್ ಮತ್ತು ಸತ್ತಾರ್ ಪರಾರಿಯಾಗಿದ್ದಾರು. ಅವರು ರಿಕ್ಷಾವೊಂದರಲ್ಲಿ ಸುಳ್ಯದ ಕಡೆಗೆ ಬಂದು ಕೇರಳಕ್ಕೆ ತೆರಳಿದ್ದರು.
ಕೊಡಗು ಪೊಲೀಸರು ತತ್‌ಕ್ಷಣ ತನಿಖೆ ಚುರುಕುಗೊಳಿಸಿ ಡಿವೈಎಸ್‌ಪಿ ಸುಂದರ್‌ರಾಜ್ ಮತ್ತು ಸರ್ಕಲ್ ಇನ್‌ಸ್ಪೆಕ್ಟರ್‌ಹಾಗೂ ಸಬ್ ಇನ್‌ಸ್ಪೆಕ್ಟರ್ ನೇತೃತ್ವದಲ್ಲಿ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ತಿಳಿದು ಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Kuno National Park; ಮರಿಗಳಿಗೆ ಜನ್ಮ ನೀಡಿದ ಚೀತಾ ನೀರ್ವಾ: ಸಂಖ್ಯೆ ಹೆಚ್ಚಳ
Adani funding; 100 ಕೋಟಿ ನಿಧಿಯನ್ನು ಸ್ವೀಕರಿಸುವುದಿಲ್ಲ ಎಂದ ರೇವಂತ್ ರೆಡ್ಡಿ
Katpadi: ಹೆದ್ದಾರಿ ಅಂಚಿನಲ್ಲಿ ಅಪಾಯ!; ರಸ್ತೆ ಬದಿಯಲ್ಲಿ ಉದ್ದಕ್ಕೂ ಹೊಂಡಗುಂಡಿ
ಒಕ್ಕಲಿಗ ಸಂಘದ ಕಾರ್ಯಕ್ರಮದಲ್ಲಿ ಕೆ.ಜೆ.ಜಾರ್ಜ್ ಭಾಷಣಕ್ಕೆ ಆಕ್ಷೇಪ: ಕ್ಷಮೆಯಾಚಿಸಿದ ಸಚಿವರು
Gurupura: ನಾಡಕಚೇರಿ ಕಟ್ಟಡ ಉದ್ಘಾಟನೆಗೆ ಸಿದ್ಧ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.