Kukke: ಸಂಭ್ರಮದ ಚಂಪಾಷಷ್ಠಿ ಸಂಪನ್ನ

ಸಾಕ್ಷಿಯಾದ ಸಹಸ್ರಾರು ಭಕ್ತರು; ಇಂದು ನೌಕಾ ವಿಹಾರ; ಡಿ.12: ನೀರುಬಂಡಿ ಉತ್ಸವ,ದೈವಗಳ ನಡಾವಳಿ

Team Udayavani, Dec 8, 2024, 12:51 PM IST

1

ಸುಬ್ರಹ್ಮಣ್ಯ: ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಚಂಪಾ ಷಷ್ಠಿ ಮಹೋತ್ಸವದಲ್ಲಿ ಸಹಸ್ರಾರು ಭಕ್ತರ ಸಮ್ಮುಖದಲ್ಲಿ ಶುಕ್ರವಾರ ರಾತ್ರಿ ಪಂಚಮಿ ರಥೋತ್ಸವ ಜರಗಿ ಶನಿವಾರ ಮುಂಜಾನೆ ಮಹಾ ರಥೋತ್ಸವ ಜರಗಿತು.

ಶುಕ್ರವಾರ ರಾತ್ರಿ ಮಹಾಪೂಜೆಯ ಬಳಿಕ ಹೊರಾಂಗಣ ಉತ್ಸವ ಆರಂಭ ವಾಯಿತು. ವಿಶೇಷ ಹೂವಿನ ಅಲಂಕಾರ ದೊಂದಿಗೆ ರಾರಾಜಿಸುತ್ತಿದ್ದ ಪಲ್ಲಕ್ಕಿಯಲ್ಲಿ ದೇವರ ಉತ್ಸವ ಮತ್ತು ಬಂಡಿ ಉತ್ಸವ ನೆರವೇರಿತು. ರಥಬೀದಿಗೆ ಆಗಮಿಸಿದ ದೇವರು ಪಂಚಮಿ ರಥದಲ್ಲಿ ಉತ್ಸವ ಸ್ವೀಕರಿಸಿದರು. ಪಾಸ್‌ ಇದ್ದವರಿಗೆ ಮಾತ್ರ ರಥ ಬೀದಿಗೆ ಪ್ರವೇಶಕ್ಕೆ ಅವಕಾಶ ನೀಡಲಾಗಿತ್ತು. ಸವಾರಿ ಮಂಟಪದ ಸವಾರಿ ಕಟ್ಟೆಯಲ್ಲಿ ಪೂಜೆ ನೆರವೇರಿತು. ಈ ಸಂದರ್ಭ ಕುಕ್ಕೆಬೆಡಿ ಬಾನಂಗಳದಲ್ಲಿ ಚಿತ್ತಾರ ಮೂಡಿಸಿತು.

ಚಂಪಾಷಷ್ಠಿ ಮಹೋತ್ಸವದ ವಿವಿಧ ಕೆಲಸ ಕಾರ್ಯಗಳಲ್ಲಿ ವಿವಿಧ ಸಂಘ- ಸಂಸ್ಥೆಗಳ ಸದಸ್ಯರು ಸ್ವಯಂ ಸೇವಕರಾಗಿ ಸೇವೆ ಸಲ್ಲಿಸಿದರು. ಊರ ಪರ ಊರ ಭಕ್ತರ ಅನುಕೂಲಕ್ಕಾಗಿ ಸರಿಯಾಗಿ ಪಾರ್ಕಿಂಗ್‌ ವ್ಯವಸ್ಥೆ ಮಾಡಲಾಗಿತ್ತು.

ಶಾಸಕಿ ಭಾಗೀರಥಿ ಮುರುಳ್ಯ, ಜಿಲ್ಲಾಧಿಕಾರಿ ಮುಲ್ಲೆ„ಮುಗಿಲನ್‌, ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಯತೀಶ್‌ ಎನ್‌., ದೇಗುಲದ ಆಡಳಿತಾಧಿಕಾರಿ ಹಾಗೂ ಪುತ್ತೂರು ಎಸಿ ಜುಬಿನ್‌ ಮೊಹಪಾತ್ರ, ಮಾಜಿ ಸಚಿವ ಬಿ.ರಮಾನಾಥ ರೈ, ಬ್ರಹ್ಮರಥ ದಾನಿ ಅಜಿತ್‌ ಶೆಟ್ಟಿ ಕಡಬ, ರಾಜ್ಯ ಧಾರ್ಮಿಕ ಪರಿಷತ್‌ ಸದಸ್ಯೆ ಮಲ್ಲಿಕಾ ಪಕ್ಕಳ, ದೇಗುಲದ ಕಾರ್ಯನಿರ್ವಹಣಾಧಿಕಾರಿ ಅರವಿಂದ ಅಯ್ಯಪ್ಪ ಸುತಗುಂಡಿ, ಸಹಾಯಕ ಕಾರ್ಯನಿರ್ವಹಣಾಧಿಕಾರಿ ಯೇಸುರಾಜ್‌, ಪ್ರೊಬೆಷನರಿ ಐಎಎಸ್‌ ಅ ಧಿಕಾರಿ ಶ್ರವಣ್‌, ಪ್ರೊಬೆಷನರಿ ಐಪಿಎಸ್‌ ಅಧಿಕಾರಿ ಮನೀಶ, ಕಡಬ ತಹಶಿಲ್ದಾರ್‌ ಪ್ರಭಾಕರ ಖಜೂರೆ, ಸುಳ್ಯ ತಹಶಿಲ್ದಾರ್‌ ಮಂಜುಳಾ, ವ್ಯವಸ್ಥಾಪನಾ ಸಮಿತಿ ನಿಕಟಪೂರ್ವಾಧ್ಯಕ್ಷ ಮೋಹನ್‌ರಾಂ.ಎಸ್‌.ಸುಳ್ಳಿ, ಮಾಜಿ ಅಧ್ಯಕ್ಷರಾದ ನಿತ್ಯಾನಂದ ಮುಂಡೋಡಿ, ಕೇನ್ಯ ರವೀಂದ್ರನಾಥ ಶೆಟ್ಟಿ, ಡಿವೈಎಸ್‌ಪಿ ಡಾ| ಅರುಣ್‌ ನಾಗೇಗೌಡ, ವೃತ್ತ ನಿರೀಕ್ಷಕ ತಿಮ್ಮಪ್ಪ ನಾಯ್ಕ, ಸುಬ್ರಹ್ಮಣ್ಯ ಠಾಣಾಧಿಕಾರಿ ಕಾರ್ತಿಕ್‌ ಕೆ., ಮಾಸ್ಟರ್‌ ಪ್ಲ್ರಾನ್‌ ಸಮಿತಿ ಸದಸ್ಯರಾದ ಸತೀಶ್‌ ಕೂಜುಗೋಡು, ಲೋಲಾಕ್ಷ ಕೈಕಂಬ, ಪವನ್‌ ಎಂ.ಡಿ, ಅಚ್ಯುತ ಗೌಡ ಆಲ್ಕಬೆ, ದೇಗುಲದ ಅಭಿಯಂತರ ಉದಯಕುಮಾರ್‌, ಲೋಕೋಪಯೋಗಿ ಅಭಿಯಂತರ ಪ್ರಮೋದ್‌ ಕುಮಾರ್‌, ದೇಗುಲದ ಅಧೀಕ್ಷಕ ಪದ್ಮನಾಭ ಶೆಟ್ಟಿಗಾರ್‌, ಹೆಬ್ಟಾರ್‌ ಪ್ರಸನ್ನ ಭಟ್‌, ಪಾಟಾಳಿ ಲೋಕೇಶ್‌ ಎ.ಆರ್‌ ಅ ಧಿಕಾರಿಗಳು, ಜನಪ್ರತಿನಿಧಿಗಳು, ಸೇರಿದಂತೆ ಭಕ್ತರು ಉಪಸ್ಥಿತರಿದ್ದರು.

ಇಂದು ಅವಭೃಥೋತ್ಸವ
ಡಿ.8ರಂದು ಬೆಳಗ್ಗೆ ದೇವಸ್ಥಾನದಿಂದ ಬಂಡಿರಥದಲ್ಲಿ ಉತ್ಸವಮೂರ್ತಿಯ ಅವಭೃಥೋತ್ಸವ ಸವಾರಿ ಹೊರಟು, ಬಿಲದ್ವಾರ ಕಟ್ಟೆಯಲ್ಲಿ ಪೂಜೆ ನಡೆದು. ಕುಮಾರಧಾರ ನದಿಯಲ್ಲಿ ದೇವರ ನೌಕಾವಿಹಾರ ಹಾಗೂ ಅವಭƒಥೋತ್ಸವ ಜರುಗಲಿದೆ. ಡಿ.12ರಂದು ಕೊಪ್ಪರಿಗೆ ಇಳಿಯುವುದು, ರಾತ್ರಿ ನೀರುಬಂಡಿ ಉತ್ಸವ, ದೈವಗಳ ನಡಾವಳಿ ಜರಗಲಿದೆ.

ಟಾಪ್ ನ್ಯೂಸ್

indian-flag

Republic Day: ವಿವಿಧ ಕ್ಷೇತ್ರದ 10,000 ಸಾಧಕರಿಗೆ ಆಹ್ವಾನ

ISRO 2

ಉಪಗ್ರಹ ಜೋಡಣೆ: ತಾಂತ್ರಿಕ ಸಮಸ್ಯೆ ನಿವಾರಿಸಿದ ಇಸ್ರೋ

PM Mod

ಜ. 13ಕ್ಕೆ ಪ್ರಧಾನಿಯಿಂದ ಕಾಶ್ಮೀರದ ಜೆಡ್‌ ಮೋರ್‌ ಸುರಂಗ ಉದ್ಘಾಟನೆ?

Udupi: ಗೀತಾರ್ಥ ಚಿಂತನೆ-151: ದೇಶ, ಕಾಲವೂ ಅನಾದಿ, ಅನಂತ

Udupi: ಗೀತಾರ್ಥ ಚಿಂತನೆ-151: ದೇಶ, ಕಾಲವೂ ಅನಾದಿ, ಅನಂತ

ಜ.14: ಶಬರಿಮಲೆಯಲ್ಲಿ ಮಕರ ಸಂಕ್ರಮಣ ಪೂಜೆ

ಜ.14: ಶಬರಿಮಲೆಯಲ್ಲಿ ಮಕರ ಸಂಕ್ರಮಣ ಪೂಜೆ

kejriwal-2

Distribution of money ಆರೋಪ: ಬಿಜೆಪಿ ಅಭ್ಯರ್ಥಿ ಸ್ಪರ್ಧೆ ನಿರ್ಬಂಧಕ್ಕೆ ಕೇಜ್ರಿ ಮನವಿ

Vitla ಬೋಳಂತೂರು ಮನೆ ದರೋಡೆ ಪ್ರಕರಣ: ತನಿಖೆ ಚುರುಕು

Vitla ಬೋಳಂತೂರು ಮನೆ ದರೋಡೆ ಪ್ರಕರಣ: ತನಿಖೆ ಚುರುಕು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vitla ಬೋಳಂತೂರು ಮನೆ ದರೋಡೆ ಪ್ರಕರಣ: ತನಿಖೆ ಚುರುಕು

Vitla ಬೋಳಂತೂರು ಮನೆ ದರೋಡೆ ಪ್ರಕರಣ: ತನಿಖೆ ಚುರುಕು

Narimogru: ಕಾಲೇಜು ವಿದ್ಯಾರ್ಥಿನಿ ಆತ್ಮಹ*ತ್ಯೆ

Narimogru: ಕಾಲೇಜು ವಿದ್ಯಾರ್ಥಿನಿ ಆತ್ಮಹ*ತ್ಯೆ

Uppinangady: ಚಿನ್ನಾಭರಣ ಕಳವು ಪ್ರಕರಣ: ಆರೋಪಿ ಮಹಿಳೆ ಸೆರೆ

Uppinangady: ಚಿನ್ನಾಭರಣ ಕಳವು ಪ್ರಕರಣ: ಆರೋಪಿ ಮಹಿಳೆ ಸೆರೆ

Sullia: Airavata bus stopped

Sullia: ಕೆಟ್ಟು ನಿಂತ ಐರಾವತ ಬಸ್‌

ಬೈಕ್‌-ಬಸ್‌ ಢಿಕ್ಕಿ:ವಿದ್ಯಾರ್ಥಿಗಳಿಗೆ ಗಾಯ

Puttur: ಬೈಕ್‌-ಬಸ್‌ ಢಿಕ್ಕಿ:ವಿದ್ಯಾರ್ಥಿಗಳಿಗೆ ಗಾಯ

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

robbers

Pakistan; ಡಕಾಯಿತರಿಂದ 3 ಹಿಂದೂ ಯುವಕರ ಅಪಹರಣ

indian-flag

Republic Day: ವಿವಿಧ ಕ್ಷೇತ್ರದ 10,000 ಸಾಧಕರಿಗೆ ಆಹ್ವಾನ

naksal (2)

ಸುಕ್ಮಾ ಎನ್‌ಕೌಂಟರ್‌: ಮೂವರು ನಕ್ಸಲರ ಹ*ತ್ಯೆ

ISRO 2

ಉಪಗ್ರಹ ಜೋಡಣೆ: ತಾಂತ್ರಿಕ ಸಮಸ್ಯೆ ನಿವಾರಿಸಿದ ಇಸ್ರೋ

PM Mod

ಜ. 13ಕ್ಕೆ ಪ್ರಧಾನಿಯಿಂದ ಕಾಶ್ಮೀರದ ಜೆಡ್‌ ಮೋರ್‌ ಸುರಂಗ ಉದ್ಘಾಟನೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.