Kukke Shree Subrahmanya: ನಾಣ್ಯದಲ್ಲಿ ತುಲಾಭಾರ ಸೇವೆ ಸಲ್ಲಿಸಿದ ಬಿ.ಎಸ್.ವೈ.
Team Udayavani, Jun 25, 2024, 12:32 AM IST
ಸುಬ್ರಹ್ಮಣ್ಯ: ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಸೋಮವಾರ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಭೇಟಿ ನೀಡಿದರು.
ಅವರನ್ನು ದೇವಸ್ಥಾನದ ವತಿಯಿಂದ ಹಾಗೂ ಶಾಸಕಿ ಭಾಗೀರಥಿ ಮುರುಳ್ಯ, ಮಾಜಿ ಸಚಿವ ಎಸ್.ಅಂಗಾರ ಸಹಿತ ಪಕ್ಷದ ಪ್ರಮುಖರು ಹೂಗುತ್ಛ ನೀಡಿ ಸ್ವಾಗತಿಸಿದರು.
ಯಡಿಯೂರಪ್ಪ ಅವರು 130 ಕೆ.ಜಿ. ನಾಣ್ಯದಲ್ಲಿ ದೇವರಿಗೆ ತುಲಾಭಾರ ಸೇವೆ ಮಾಡಿದರು. ಬಳಿಕ
ದೇವರಿಗೆ ಮಹಾಭಿಷೇಕ ಸೇವೆ ಸಲ್ಲಿಸಿ ಮಧ್ಯಾಹ್ನದ ಮಹಾಪೂಜೆ ನೆರವೇರಿಸಿದರು.
ಪೂಜೆಯ ಬಳಿಕ ದೇವಸ್ಥಾನ ಪ್ರಧಾನ ಅರ್ಚಕ ರಮೇಶ್ ಆಸ್ರಣ್ಣ ಅವರು ಯಡಿಯೂರಪ್ಪ ಅವರಿಗೆ ಶಾಲು ಹೊದಿಸಿ ದೇವರ ಪ್ರಸಾದ ನೀಡಿ ಹರಸಿದರು. ನರಸಿಂಹ ಸ್ವಾಮಿ ದರುಶನ ಮತ್ತು ಹೊಸಳಿಗಮ್ಮ ಗುಡಿಯ ಪೂಜೆಯಲ್ಲಿ ಪಾಲ್ಗೊಂಡು ಅನ್ನಪ್ರಸಾದ ಸ್ವೀಕರಿಸಿದರು.
ಬೆಳ್ತಂಗಡಿ ಶಾಸಕ ಹರೀಶ್ ಪೂಂಜ, ದೇಗುಲದ ಪ್ರಭಾರ ಕಾರ್ಯನಿರ್ವಹಣಾಧಿಕಾರಿ ಗೋವಿಂದ್ ನಾಯಕ್,ಸಹಾಯಕ ಕಾರ್ಯನಿರ್ವಹಣಾಧಿ ಕಾರಿ ಏಸುರಾಜ್, ಬಿಜೆಪಿ ಜಿಲ್ಲಾಧ್ಯಕ್ಷಸತೀಶ್ ಕುಂಪಲ, ಜಿಲ್ಲಾ ಉಪಾಧ್ಯಕ್ಷ ರಾದ ರವೀಂದ್ರ ಶೆಟ್ಟಿ, ರಾಕೇಶ್ ರೈ ಕೆಡೆಂಜಿ, ಬಿಜೆಪಿ ಜಿಲ್ಲಾ ಕೋಶಾಧಿಕಾರಿ ಸಂಜಯ್ ಪ್ರಭು ಮತ್ತಿತರರು ಉಪಸ್ಥಿತರಿದ್ದರು.
ಧರ್ಮಸ್ಥಳದಲ್ಲಿ ದೇವರ ದರ್ಶನ
ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರು ಸೋಮವಾರ ಮುಂಜಾನೆ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆ ಜತೆಯಲ್ಲಿ ಶ್ರೀ ಮಂಜುನಾಥ ಸ್ವಾಮಿ ದರ್ಶನ ಪಡೆದು ವಿಶೇಷ ಸೇವೆ ಸಲ್ಲಿಸಿದರು. ಅವರನ್ನು ಡಾ| ಹೆಗ್ಗಡೆಯವರು ಗೌರವಿಸಿದರು.
ಬಳಿಕ ಮಾಧ್ಯಮದ ಜತೆ ಮಾತನಾಡಿದ ಬಿಎಸ್‌ವೈ, 2019ರಲ್ಲಿ ಬೆಳ್ತಂಗಡಿಯಲ್ಲಿ ಪ್ರವಾಹಕ್ಕೆ ತುತ್ತಾದ ಸಂದರ್ಭದಲ್ಲಿ ಬೆಳ್ತಂಗಡಿ ಪ್ರವಾಸ ಬಂದಿದ್ದಾಗ ಶ್ರೀ ಕ್ಷೇತ್ರಕ್ಕೆ ಭೇಟಿ ನೀಡಿದ್ದೆ. ಬಹಳ ವರ್ಷಗಳ ಬಳಿಕ ಮತ್ತೆ ಬಂದಿದ್ದೇನೆ. ನಮ್ಮೂರಲ್ಲಿ ಬರಗಾಲ, ಊರಲ್ಲಿ ಮಳೆಯಾಗಿ ಸಮೃದ್ಧಿಯಿಂದ ಬೆಳೆಯಾಗಲಿ ಎಂದು ಮಂಜುನಾಥನಲ್ಲಿ ಪ್ರಾರ್ಥಿಸಿದ್ದೇನೆ. ವೀರೇಂದ್ರ ಹೆಗ್ಗಡೆಯವರ ಜತೆಗೆ ದೇವರ ದರ್ಶನ ಮಾಡಲು ಅವಕಾಶ ಸಿಕ್ಕಿದ್ದು ನನ್ನ ಸೌಭಾಗ್ಯ ಎಂದರು.
ಶಾಸಕ ಹರೀಶ್ ಪೂಂಜ, ಬೆಳ್ತಂಗಡಿ ಬಿಜೆಪಿ ಮಂಡಲ ಅಧ್ಯಕ್ಷ ಶ್ರೀನಿವಾಸ್ ರಾವ್, ಕ್ಷೇತ್ರದ ಕಚೇರಿ ವ್ಯವಸ್ಥಾಪಕ ಪಾರ್ಶ್ವನಾಥ್ ಜೈನ್ ಮತ್ತಿತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mangaluru: ಹುಟ್ಟೂರಿನತ್ತ ಯೋಧ ಅನೂಪ್ ಪಾರ್ಥಿವ ಶರೀರ… ಸಂಸದರಿಂದ ಅಂತಿಮ ನಮನ
Shirva ಹಳೆವಿದ್ಯಾರ್ಥಿ ಸಂಘ; ಡಿ.29: ದಶಮಾನೋತ್ಸವ, ನೂತನ ಉಪಹಾರ ಗೃಹ ಸಮರ್ಪಣೆ
ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: ಚಿಕಿತ್ಸೆ ಫಲಿಸದೆ ಇಬ್ಬರು ಮಾಲಾಧಾರಿಗಳು ಮೃ*ತ್ಯು
MT Vasudevan Nair: ಮಲಯಾಳಂ ಸಾಹಿತಿ, ಜ್ಞಾನಪೀಠ ಪುರಸ್ಕೃತ ಎಂಟಿ ವಾಸುದೇವನ್ ನಾಯರ್ ನಿಧನ
Goa: ಕ್ಯಾಲಂಗುಟ್ ಬೀಚ್‌ನಲ್ಲಿ ಪ್ರವಾಸಿ ಬೋಟ್ ಮುಳುಗಿ ಓರ್ವ ಸಾ*ವು, 20 ಮಂದಿ ರಕ್ಷಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.