Kukke Shri Subrahmanya Temple: ಅನ್ನ ಪ್ರಸಾದಕ್ಕೆ ವೈವಿಧ್ಯಮಯ ಪಾಯಸ
Team Udayavani, Oct 9, 2024, 7:35 AM IST
ಸುಬ್ರಹ್ಮಣ್ಯ: ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ವಾರ್ಷಿಕವಾಗಿ ಸುಮಾರು 55 ಲಕ್ಷಕ್ಕೂ ಮಿಕ್ಕಿ ಭಕ್ತರು ಭೋಜನ ಪ್ರಸಾದ ಸ್ವೀಕರಿಸುತ್ತಾರೆ. ಇದೀಗ ದೇಗುಲದ ಆಡಳಿತಾಧಿಕಾರಿ ಪುತ್ತೂರು ಉಪವಿಭಾಗದ ಸಹಾಯಕ ಆಯುಕ್ತ ಜುಬಿನ್ ಮೊಹಪಾತ್ರ ಅವರ ವಿಶೇಷ ಕಾಳಜಿಯಿಂದ ಭೋಜನ ವ್ಯವಸ್ಥೆಯಲ್ಲಿ ವಿತರಿಸುವ ಖಾದ್ಯಗಳಲ್ಲಿ ವಿನೂತನ ಬದಲಾವಣೆ ತರಲು ಉದ್ದೇಶಿಸಲಾಗಿದೆ.
ಈ ಹಿಂದೆ ವಿಶೇಷ ದಿನಗಳನ್ನು ಹೊರತು ಪಡಿಸಿ ಪ್ರತಿದಿನ ಒಂದೇ ರೀತಿಯ ಪಾಯಸವನ್ನು ವಿತರಿಸಲಾಗುತ್ತಿತ್ತು. ನೂತನ ಯೋಜನೆಯಂತೆ ಪ್ರತಿದಿನ ಬೇರೆ ಬೇರೆ ತೆರನಾದ ಪಾಯಸಗಳನ್ನು ಉಣಬಡಿಸುವ ವ್ಯವಸ್ಥೆ ಮಾಡಲಾಗಿದೆ.
ಕಡ್ಲೆ ಬೇಳೆ, ಹೆಸರು ಬೇಳೆ, ಕಡ್ಲೆ ಬೇಳೆ ಸಾಬಕ್ಕಿ, ಗೋಧಿ ಕಡಿ, ಹಾಲು ಪಾಯಸ, ಅಕ್ಕಿ ಪಾಯಸ, ಶ್ಯಾವಿಗೆ ಪಾಯಸ, ರವೆ ಪಾಯಸ ಮತ್ತು ಸಿರಿಧಾನ್ಯ ಸೇರಿದಂತೆ 10 ಬಗೆಯ ಪಾಯಸವನ್ನು ತಯಾರಿಸಿ ವಿತರಿಸಲಾಗುತ್ತದೆ. ಪ್ರಸಾದ ಭೋಜನವು ಅತ್ಯಂತ ಸ್ವಾದಿಷ್ಠ ಮತ್ತು ಪೌಷ್ಟಿಕಾಂಶಗಳಿಂದ ಇರಲು 15 ಬಗೆಯ ತರಕಾರಿಗಳನ್ನು ಪ್ರತಿದಿನ ಸಾಂಬಾರಿಗೆ ಉಪಯೋಗಿಸಲು ಚಿಂತಿಸಲಾಗಿದೆ.
ಕುಕ್ಕೆ ದೇಗುಲದಲ್ಲಿ ಪ್ರತಿನಿತ್ಯ ಬಾಳೆ ಎಲೆಯಲ್ಲಿ ಅನಾದಿ ಕಾಲದಿಂದ ಪ್ರಸಾದ ರೂಪದಲ್ಲಿ ಚಟ್ನಿ, ಪಲ್ಯ, ಅನ್ನ, ಸಾರು, ಸಾಂಬಾರು, ಪಾಯಸ, ಮಜ್ಜಿಗೆ ವಿತರಿಸಲಾಗುತ್ತದೆ. ಜಾತ್ರೆ ಮತ್ತು ಹೊಸ್ತಾರೋಗಣೆಯ ದಿನಗಳಲ್ಲಿ ಭಕ್ಷ್ಯಗಳ ಸಂಖ್ಯೆ ಹೆಚ್ಚಿರುತ್ತದೆ. ಏಕಾದಶಿ ದಿನ ಅವಲಕ್ಕಿ, ಉಪ್ಪಿಟ್ಟು ಮತ್ತು ಮಜ್ಜಿಗೆ ಮಾತ್ರವೇ ವಿತರಿಸಲಾಗುತ್ತದೆ.
ಶಿಕ್ಷಣಕ್ಕಾಗಿ ಅನ್ನದಾನ
ಶ್ರೀ ದೇಗುಲವು ತನ್ನ ಆಡಳಿತದಲ್ಲಿ ಅನೇಕ ವರ್ಷಗಳಿಂದ ನಡೆಸಿಕೊಂಡು ಬರುತ್ತಿರುವ ಎರಡು ಶಿಕ್ಷಣ ಸಂಸ್ಥೆಗಳಲ್ಲಿ ಕಲಿಯುತ್ತಿರುವ ವಿದ್ಯಾರ್ಥಿಗಳಿಗೆ ನಿತ್ಯವೂ ಶ್ರೀ ದೇಗುಲದಿಂದ ಪ್ರಸಾದ ಭೋಜನ ವಿತರಣೆಯಾಗುತ್ತಿದೆ. ಇದರ ಜತೆ ಕ್ಷೇತ್ರದ ಸನಿಹದ ಇತರ ಶಾಲೆಗಳಿಗೂ ಭೋಜನ ವಿತರಿಸುತ್ತಿದೆ. ಈ ಮೂಲಕ ವಿದ್ಯಾರ್ಥಿಗಳ ಶೈಕ್ಷಣಿಕ ಜ್ಞಾನ ಪ್ರಗತಿಗೆ ತನ್ನದೇ ಆದ ಕೊಡುಗೆ ನೀಡುತ್ತಿದೆ.
ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇಗುಲದಲ್ಲಿ ಭೋಜನವು ಒಂದು ಅಮೂಲ್ಯ ಪ್ರಸಾದ. ಹಿಂದಿನಿಂದಲೂ ಶ್ರೀ ದೇವರ ಅನ್ನಪ್ರಸಾದಕ್ಕೆ ಹೆಚ್ಚಿನ ಮಹತ್ವವಿದೆ. ಇದಕ್ಕಾಗಿ ಅತ್ಯಾಧುನಿಕ ತಂತ್ರಜ್ಞಾನದ ಹೈಟೆಕ್ ಪಾಕಶಾಲೆ ನಿರ್ಮಾಣವಾಗಿದೆ. ಮುಂದೆ ಭಕ್ತರಿಗೆ ಭೋಜನ ಪ್ರಸಾದ ಸ್ವೀಕರಿಸಲು ಉತ್ತಮ ಯೋಜನೆಯೊಂದಿಗೆ ಹೆಚ್ಚಿನ ವ್ಯವಸ್ಥೆ ಕಲ್ಪಿಸಲು ಪ್ರಯತ್ನಿಸಲಾಗುವುದು.
– ಜುಬಿನ್ ಮಹಪಾತ್ರ ಆಡಳಿತಾಧಿಕಾರಿ ಮತ್ತು ಪುತ್ತೂರು ಉಪ ವಿಭಾಗದ ಸಹಾಯಕ ಆಯುಕ್ತರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
T20 Asia Cup: ಬಾಂಗ್ಲಾ ವಿರುದ್ದ ಅಂಡರ್ 19 ವನಿತಾ ಏಷ್ಯಾಕಪ್ ಚಾಂಪಿಯನ್ ಆದ ಭಾರತ
BBK11: ವೀಕ್ಷಕರಿಗೆ ಸರ್ಪ್ರೈಸ್; ಮತ್ತೆ ಬಿಗ್ ಬಾಸ್‌ಗೆ ಗೋಲ್ಡ್ ಸುರೇಶ್
BGT 2024: ಮೆಲ್ಬೋರ್ನ್ ಪಂದ್ಯಕ್ಕೂ ಟೀಂ ಇಂಡಿಯಾಗೆ ಗಾಯಾಳುಗಳ ಸಮಸ್ಯೆ
Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು
Vijay Hazare Trophy: ಮತ್ತೊಂದು ದಾಖಲೆ ಬರೆದ 13ರ ಹರೆಯದ ವೈಭವ್ ಸೂರ್ಯವಂಶಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.