Kadaba: ಆತ್ಮಹತ್ಯೆಗೆ ಯತ್ನಿಸಿ ಕುಮಾರಧಾರ ನದಿಯ ಮಧ್ಯೆ ಸಿಲುಕಿದ ಯುವಕನ ರಕ್ಷಣೆ
Team Udayavani, Jul 8, 2024, 10:04 AM IST
ಕಡಬ: ಇಲ್ಲಿನ ಪುಳಿಕುಕ್ಕು ಎಂಬಲ್ಲಿ ಯುವಕನೊಬ್ಬ ಕುಮಾರಧಾರ ನದಿಯ ನೆರೆ ನೀರಿನಲ್ಲಿ ಸಿಲುಕಿಕೊಂಡು ಸಹಾಯಕ್ಕಾಗಿ ಬೊಬ್ಬಿಡುತ್ತಿರುವ ದೃಶ್ಯ ಸೋಮವಾರ ಬೆಳಗ್ಗೆ ಕಂಡುಬಂದಿದ್ದು ಕೂಡಲೇ ಕಾರ್ಯಪ್ರವೃತ್ತರಾದ ಅಗ್ನಿಶಾಮಕ ಸಿಬಂದಿ ಯುವಕನನ್ನು ರಕ್ಷಣೆ ಮಾಡಿದ್ದಾರೆ.
ಯುವಕ ಆತ್ಮಹತ್ಯೆ ಮಾಡಿಕೊಳ್ಳಲು ನದಿಗೆ ಹಾರಿ ನದಿಯ ನಡುವೆ ಇರುವ ಪೊದೆಯಲ್ಲಿ ಸಿಲುಕಿಕೊಂಡಿರುವ ಸಾಧ್ಯತೆ ಇದೆ ಎನ್ನಲಾಗಿದೆ.
ಅದಕ್ಕೆ ಪೂರಕವಾಗಿ ಪುಳಿಕುಕ್ಕು ಸೇತುವೆ ಬಳಿಯ ಬಸ್ ತಂಗುದಾಣದಲ್ಲಿ ಆತನದ್ದು ಎನ್ನಲಾದ ಬ್ಯಾಗ್ ಪತ್ತೆಯಾಗಿದೆ. ಅಗ್ನಿಶಾಮಕ ದಳದ ಸಿಬಂದಿಗಳು ಯುವಕನನ್ನು ರಕ್ಷಿಸುವ ಕಾರ್ಯಾಚರಣೆ ಆರಂಭಿಸಿದ್ದಾರೆ. ಕಡಬ ಪೊಲೀಸರು ಸ್ಥಳದಲ್ಲಿದ್ದಾರೆ.
ಯುವಕನ ರಕ್ಷಣೆ:
ಅಗ್ನಿಶಾಮಕ ದಳದ ಸಿಬಂದಿಗಳು ಕಾರ್ಯಾಚರಣೆ ನಡೆಸಿ ಯುವಕನನ್ನು ಹೊಳೆಯಿಂದ ಮೇಲಕ್ಕೆ ತಂದು ಕಡಬ ಸಮುದಾಯ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆ ಗಾಗಿ ಪುತ್ತೂರು ಆಸ್ಪತ್ರೆ ಗೆ ಸಾಗಿಸಲಾಗಿದೆ.
ಹೊಳೆಗೆ ಹರಿದಾತ ಬೆಂಗಳೂರು ಮೂಲದ ರವಿಕುಮಾರ್ (40) ಎಂದು ತಿಳಿದುಬಂದಿದೆ. ಆತನ ಕೈಯಲ್ಲಿ ಹರಿತವಾದ ಆಯುಧದಿಂದ ಕೊಯ್ದುಕೊಂಡ ಹಸಿ ಗಾಯವುಕಂಡುಬಂದಿದೆ.
ಕಡಬ ತಹಸೀಲ್ದಾರ್ ಪ್ರಭಾಕರ ಖಜೂರೆ, ಪಟ್ಟಣ ಪಂಚಾಯತ್ ಮುಖ್ಯಧಿಕಾರಿ ಲೀಲಾವತಿ, ಕಡಬ ಎಸ್ ಐ ಅಭಿನಂದನ್ ಸ್ಥಳದಲ್ಲಿದ್ದಾರೆ.
ಕಾರ್ಯಾಚರಣೆಯಲ್ಲಿ ಅಗ್ನಿಶಾಮಕ ದಳದ ಸಿಬಂದಿಗಳ ಜೊತೆ ಶ್ರೀ ಧರ್ಮಸ್ಥಳ ಶೌರ್ಯ ತಂಡದ ಸದಸ್ಯರು ಶ್ರಮಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Puttur: ವಿದ್ಯುತ್ ಕಂಬ ಏರುವ ತರಬೇತಿ!; ಪವರ್‌ಮನ್ ಉದ್ಯೋಗಕ್ಕೆ ಸ್ಥಳೀಯರಿಗೆ ಪ್ರೋತ್ಸಾಹ
Belthangady: ಗ್ರಾಮೀಣ ರಸ್ತೆಗಳಲ್ಲೂ ಗುಂಡಿ
Bantwal: ತುಂಬೆ ಶ್ರೀಮಹಾಲಿಂಗೇಶ್ವರ ದೇವಸ್ಥಾನಕ್ಕೆ ಕನ್ನ; ಲಕ್ಷಾಂತರ ಮೌಲ್ಯದ ನಗನಗದು ಲೂಟಿ
Puttur: ಮಾದಕ ವಸ್ತು ಎಂಡಿಎಂಎ ಸಾಗಾಟ ಪ್ರಕರಣ; ಆರೋಪಿಗೆ ಜಾಮೀನು
Rain: ಸುಬ್ರಹ್ಮಣ್ಯದಲ್ಲಿ ಭಾರೀ ಮಳೆ; ರಸ್ತೆಗೆ ಬಿದ್ದ ಮರ; ತಪ್ಪಿದ ಭಾರೀ ಅನಾಹುತ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.