Kumbra: ಶಾಲೆ, ಸರಕಾರಿ ಕಚೇರಿಗಳಲ್ಲಿ ಸರಣಿ ಕಳ್ಳತನ
Team Udayavani, Sep 6, 2023, 12:17 AM IST
ಪುತ್ತೂರು: ಕುಂಬ್ರದಲ್ಲಿ ಸೋಮವಾರ ತಡರಾತ್ರಿ ಸರಣಿ ಕಳ್ಳತನ ನಡೆದಿದ್ದು ಮಂಗಳವಾರ ಬೆಳಗ್ಗೆ ಘಟನೆ ಬೆಳಕಿಗೆ ಬಂದಿದೆ.
ಒಳಮೊಗ್ರು ಗ್ರಾ.ಪಂ. ಕಚೇರಿ, ಗ್ರಾಮ ಆಡಳಿತಾಧಿಕಾರಿ ಕಚೇರಿ, ಕರ್ನಾಟಕ ಪಬ್ಲಿಕ್ ಸ್ಕೂಲ್ ಗೆ ಕಳ್ಳರು ಬಾಗಿಲು ಒಡೆದು ಒಳ ನುಗ್ಗಿದ್ದಾರೆ.
ಗ್ರಾ.ಪಂ ಕಚೇರಿಯಲ್ಲಿದ್ದ 7 ಸಾವಿರ ರೂ. ಮೌಲ್ಯದ ಸಿಸಿ ಕೆಮರಾದ ಡಿವಿಆರ್ ಕದ್ದೊಯ್ದಿದ್ದಾರೆ. ಗ್ರಾಮ ಕರಣಿಕ ಕಚೇರಿಯ ಪೀಠೊಪಕರಣಗಳಿಗೆ ಹಾನಿ ಎಸಗಿದ್ದಾರೆ.
ಕುಂಬ್ರ ಕರ್ನಾಟಕ ಪಬ್ಲಿಕ್ ಸ್ಕೂಲ್‌ಗೆ ನುಗ್ಗಿರುವ ಕಳ್ಳರು ಉಪ ಪ್ರಾಂಶುಪಾಲರ ಕೊಠಡಿಯ ಬೀಗ ಮುರಿದು ಒಳ ಪ್ರವೇಶಿಸಿದ್ದಾರೆ.
ಮೂರು ಅಲ್ಮೇರಾಗಳ ಬಾಗಿಲು ತೆರೆದಿದ್ದು 10 ಸಾವಿರ ನಗದು ಹಾಗೂ 15 ಸಾವಿರ ಮೌಲ್ಯದ 3 ಡಿವಿಆರ್‌ಗಳನ್ನು ಕಳವು ಮಾಡಿದ್ದಾರೆ.
ಕೆಪಿಎಸ್ ಪ್ರಾಥಮಿಕ ಶಾಲೆಯ ಏಳು ಅಲ್ಮೇರಾ, ಟೇಬಲ್‌ಗಳನ್ನು ಜಾಲಾಡಿದ್ದಾರೆ.ಶ್ವಾನದಳ ಹಾಗೂ ಬೆರಳಚ್ಚು ತಜ್ಞ ಸಚಿನ್ ಮತ್ತು ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಸಂಪ್ಯ ಠಾಣೆ ಎಸ್‌ಐ ಧನಂಜಯ ಮತ್ತು ಸಿಬಂದಿ ಪರಿಶೀಲಿಸಿದ್ದಾರೆ. ಸಂಪ್ಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kundapura: ಕಾರು ಢಿಕ್ಕಿ; ಸ್ಕೂಟರ್ ಸವಾರನಿಗೆ ಗಾಯ
Jammu and Kashmir; ಉಗ್ರವಾದ ಪರಿಸರ ವ್ಯವಸ್ಥೆ ಬಹುತೇಕ ಕೊನೆಗೊಂಡಿದೆ: ಶಾ
Bhadravathi:ಬಾಯ್ಲರ್ ಸ್ಫೋ*ಟದಿಂದ ರೈಸ್ಮಿಲ್ ಕುಸಿತ:7 ಮಂದಿಗೆ ಗಾಯ
Sringeri; ಅಸ್ಸಾಂ ಕಾರ್ಮಿಕನಿಂದ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿ*ಕ ದೌರ್ಜನ್ಯ
BJP vs Congress; ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರು,ಕಾಂಗ್ರೆಸ್ ಪ್ರತಿದೂರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.