ಕರ್ನೂರು ಮಠ ಮೋರಿ ಕುಸಿತ: ತಾತ್ಕಾಲಿಕ ದುರಸ್ತಿ

"ಉದಯವಾಣಿ' ಸುದಿನ ವರದಿ ಪ್ರಕಟಿಸಿ ಎಚ್ಚರಿಸಿತ್ತು

Team Udayavani, Nov 8, 2019, 8:01 PM IST

ss-6

ಕುಸಿದ ಕರ್ನೂರು ಮಠ ಮೋರಿ

ಈಶ್ವರಮಂಗಲ: ಪಂಚೋಡಿ- ಕರ್ನೂರು- ಗಾಳಿಮುಖ ರಸ್ತೆಯ ಮೂಲಕ ಕೇರಳವನ್ನು ಸಂಪರ್ಕಿಸುವ ರಸ್ತೆಯ ಕರ್ನೂರು ಮಠ ಎಂಬಲ್ಲಿ ಗುರುವಾರ ಸಂಜೆ ಮೋರಿ ಕುಸಿದಿದ್ದು, ತಾತ್ಕಾಲಿಕ ಸಂಚಾರ ನಿರ್ಬಂಧಿಸಲಾಗಿತ್ತು. ಮೋರಿಯನ್ನು ತಾತ್ಕಾಲಿಕವಾಗಿ ದುರಸ್ತಿಗೊಳಿಸಿ ವಾಹನ ಸಂಚಾರಕ್ಕೆ ಅನುವು ಮಾಡಿಕೊಡಲಾಗಿದೆ.

ಕಾವು ಪಳ್ಳತ್ತೂರು ಲೋಕೋಪಯೋಗಿ ರಸ್ತೆಯಲ್ಲಿ ಪಳ್ಳತ್ತೂರು ಸೇತುವೆ ಕಾರ್ಯ ನಡೆಯುತ್ತಿರುವುದರಿಂದ ಪಂಚೋಡಿ ಕರ್ನೂರು ಗಾಳಿಮುಖ ರಸ್ತೆಯಲ್ಲಿ ವಾಹನ ಸಂಚಾರ ದಟ್ಟಣೆ ಹೆಚ್ಚಾಗಿತ್ತು. ನ. 5ರಂದು “ಉದಯವಾಣಿ’ ಸುದಿನದಲ್ಲಿ “ಕರ್ನಾಟಕ ಕೇರಳ ರಸ್ತೆ: ಸಂಪರ್ಕ ಕಡಿತಗೊಳ್ಳುವ ಭೀತಿ’ ಕರ್ನೂರು ಮಠದಲ್ಲಿ ಅಪಾಯಕಾರಿ ಹೊಂಡ ಶೀರ್ಷಿಕೆಯಲ್ಲಿ ವರದಿ ಪ್ರಕಟವಾಗಿತ್ತು. ಅದಾಗಿ ಎರಡೇ ದಿನಗಳಲ್ಲಿ ಮೋರಿ ಕುಸಿದಿದ್ದು, ಕೇರಳ ಸಂಪರ್ಕವನ್ನು ಕಳೆದುಕೊಂಡಿತ್ತು. ಯಾವುದೇ ಅನಾಹುತ ಸಂಭವಿಸುವ ಮೊದಲೇ ಕುಸಿಯುವ ಲಕ್ಷಣ ಕಂಡು ಬಂದಿರುವುದರಿಂದ ಸಂಚಾರ ನಿಬಂರ್ಧಿಸಲಾಗಿತ್ತು.

ತಾತ್ಕಾಲಿಕ ವ್ಯವಸ್ಥೆ
ಮೋರಿಯ ಎರಡೂ ಬದಿ ಕುಸಿದಿದ್ದು, ಜೆಸಿಬಿ ಮೂಲಕ ಮಣ್ಣು ತುಂಬಿಸಿ ತಾತ್ಕಾಲಿಕವಾಗಿ ದುರಸ್ತಿ ಮಾಡುವ ಕಾರ್ಯ ನಡೆದಿದೆ. ಮಳೆ ಜೋರಾಗಿ ಸುರಿದರೆ ತಾತ್ಕಾಲಿಕ ವ್ಯವಸ್ಥೆ ನೀರಿನಲ್ಲಿ ಕೊಚ್ಚಿ ಹೋಗಲಿದೆ. ಜನಪ್ರತಿನಿಧಿಗಳು, ಸಂಬಂಧಪಟ್ಟ ಅಧಿಕಾರಿಗಳು ಪರಿಶೀಲನೆ ಮಾಡಿದ್ದು, ಕೂಡಲೇ ಸ್ಪಂದಿಸಿ ಶಾಶ್ವತ ಪರಿಹಾರ ಕಂಡುಕೊಳ್ಳಬೇಕಾಗಿದೆ ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.

ಸ್ಥಳಕ್ಕೆ ಪುತ್ತೂರು ಗ್ರಾಮಾಂತರ ಠಾಣೆಯ ಉಪನಿರೀಕ್ಷಕ ಸತ್ತಿವೇಲು, ಈಶ್ವರಮಂಗಲ ಹೊರಠಾಣೆಯ ಎಎಸ್‌ಐ ಸುರೇಶ್‌ ರೈ, ಸಿಬಂದಿ, ನೆಟ್ಟಣಿಗೆ ಮುಟ್ನೂರು ಗ್ರಾ.ಪಂ. ಉಪಾಧ್ಯಕ್ಷ ಶ್ರೀರಾಮ್‌ ಪಕ್ಕಳ, ಸದಸ್ಯರು, ಗ್ರಾಮಸ್ಥರು ಆಗಮಿಸಿ ತಾತ್ಕಾಲಿಕ ದುರಸ್ತಿಗೆ ಸಹಕರಿಸಿದರು.

ಟಾಪ್ ನ್ಯೂಸ್

Air India pilot who didn’t fly because his work hours were over!

Pilot: ಕೆಲಸದ ಟೈಂ ಮುಗೀತು ಎಂದು ವಿಮಾನ ಹಾರಿಸದ ಏರ್‌ ಇಂಡಿಯಾ ಪೈಲಟ್‌!

A tiger named “Johnny” travelled 300 km in search of a mate!

Nanded: ಸಂಗಾತಿಯ ಅರಸುತ್ತಾ 300 ಕಿ.ಮೀ. ಸಂಚರಿಸಿದ “ಜಾನಿ’ ಎಂಬ ಹುಲಿ!

Maharashtra, Jharkhand assembly election today

Election: ಮಹಾರಾಷ್ಟ್ರ, ಜಾರ್ಖಂಡ್‌ ಅಸೆಂಬ್ಲಿಗೆ ಇಂದು ಚುನಾವಣೆ

ನಕ್ಸಲರನ್ನು ಮುಖ್ಯವಾಹಿನಿಗೆ ಕರೆತರುವ ಯತ್ನಕ್ಕೆ ಹಿನ್ನಡೆ?

ನಕ್ಸಲರನ್ನು ಮುಖ್ಯವಾಹಿನಿಗೆ ಕರೆತರುವ ಯತ್ನಕ್ಕೆ ಹಿನ್ನಡೆ?

Russian President Putin likely to visit India next year

Putin: ರಷ್ಯಾ ಅಧ್ಯಕ್ಷ ಪುಟಿನ್‌ ಮುಂದಿನ ವರ್ಷ ಭಾರತಕ್ಕೆ ಭೇಟಿ ಸಾಧ್ಯತೆ

Congress: ಸಂಪುಟದಲ್ಲಿ ನಮಗೂ ಅವಕಾಶ ಕೊಡಿ: ಇಬ್ಬರು ಕಾಂಗ್ರೆಸ್‌ ಶಾಸಕರ ಪಟ್ಟು

Congress: ಸಂಪುಟದಲ್ಲಿ ನಮಗೂ ಅವಕಾಶ ಕೊಡಿ: ಇಬ್ಬರು ಕಾಂಗ್ರೆಸ್‌ ಶಾಸಕರ ಪಟ್ಟು

IPL 2025: Rishabh Pant refutes Gavaskar’s statement

IPL 2025: ಗಾವಸ್ಕರ್‌ ಹೇಳಿಕೆಯನ್ನು ಅಲ್ಲಗಳೆದ ರಿಷಭ್‌ ಪಂತ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

police

Puttur: ಕಾಸರಗೋಡು ಮೂಲದ ಅಪ್ರಾಪ್ತೆಗೆ ಲೈಂಗಿಕ ಕಿರುಕುಳ; ಪೋಕ್ಸೊ ಕೇಸು

5

Sullia: ಆಡುಮರಿಯನ್ನು ಅಮಾನುಷವಾಗಿ ಎಳೆದೊಯ್ದ ಬಗ್ಗೆ ದೂರು

vital

Vitla: ಮನೆಗೆ ನುಗ್ಗಿ ಲಕ್ಷಾಂತರ ಮೌಲ್ಯದ ಚಿನ್ನಾಭರಣ ಕಳವು

14-sky

Subramanya: ಕುಕ್ಕೆಗೆ ಕ್ರಿಕೆಟಿಗ ಸೂರ್ಯಕುಮಾರ್ ಯಾದವ್ ದಂಪತಿ ಭೇಟಿ

2

Uppinangady: ಮಕ್ಕಳಿಗೆ ಚರಂಡಿ ಕೊಳಚೆಯಿಂದ ಮುಕ್ತಿ ಎಂದು?

MUST WATCH

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

udayavani youtube

ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ, ಗುಂಡಿನ ಚಕಮಕಿಯಲ್ಲಿ ಮೋಸ್ಟ್ ವಾಂಟೆಡ್‌ ನಕ್ಸಲ್ ಸಾವು

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

ಹೊಸ ಸೇರ್ಪಡೆ

Air India pilot who didn’t fly because his work hours were over!

Pilot: ಕೆಲಸದ ಟೈಂ ಮುಗೀತು ಎಂದು ವಿಮಾನ ಹಾರಿಸದ ಏರ್‌ ಇಂಡಿಯಾ ಪೈಲಟ್‌!

A tiger named “Johnny” travelled 300 km in search of a mate!

Nanded: ಸಂಗಾತಿಯ ಅರಸುತ್ತಾ 300 ಕಿ.ಮೀ. ಸಂಚರಿಸಿದ “ಜಾನಿ’ ಎಂಬ ಹುಲಿ!

Maharashtra, Jharkhand assembly election today

Election: ಮಹಾರಾಷ್ಟ್ರ, ಜಾರ್ಖಂಡ್‌ ಅಸೆಂಬ್ಲಿಗೆ ಇಂದು ಚುನಾವಣೆ

ನಕ್ಸಲರನ್ನು ಮುಖ್ಯವಾಹಿನಿಗೆ ಕರೆತರುವ ಯತ್ನಕ್ಕೆ ಹಿನ್ನಡೆ?

ನಕ್ಸಲರನ್ನು ಮುಖ್ಯವಾಹಿನಿಗೆ ಕರೆತರುವ ಯತ್ನಕ್ಕೆ ಹಿನ್ನಡೆ?

Russian President Putin likely to visit India next year

Putin: ರಷ್ಯಾ ಅಧ್ಯಕ್ಷ ಪುಟಿನ್‌ ಮುಂದಿನ ವರ್ಷ ಭಾರತಕ್ಕೆ ಭೇಟಿ ಸಾಧ್ಯತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.