ಕುಟ್ರಾಪ್ಪಾಡಿ: ಸರಕಾರಿ ಕೆರೆಗಳ ಅಭಿವೃದ್ಧಿಗೆ ತಯಾರಿ

ಹಳೆಸ್ಟೇಶನ್‌ನ ಪೊಟ್ಟುಕೆರೆ, ಹೊಸಕೆರೆ ಅಭಿವೃದ್ಧಿಗೆ ಯೋಜನಾ ವರದಿ ಸಿದ್ಧ

Team Udayavani, Mar 11, 2020, 5:43 AM IST

government-lakes

ಕಡಬ: ಅಂತರ್ಜಲ ಮಟ್ಟ ಕುಸಿತದಿಂದಾಗಿ ಗ್ರಾಮೀಣ ಪ್ರದೇಶಗಳಲ್ಲಿಯೂ ನೀರಿಗಾಗಿ ತತ್ವಾರ ಎದುರಾಗಿರುವುದು ಆತಂಕಕಾರಿ ವಿಚಾರ. ಇಂತಹ ಸಂದರ್ಭದಲ್ಲಿ ಜಲ ಸಂರಕ್ಷಣೆಯ ಉದ್ದೇಶದಿಂದ ಗ್ರಾಮದಲ್ಲಿನ ಕೆರೆಗಳ ಹೂಳೆತ್ತಿ ಅವುಗಳನ್ನು ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ಕಡಬ ತಾಲೂಕಿನ ಕುಟ್ರಾಪಾಡಿ ಗ್ರಾ.ಪಂ.ಆಡಳಿತವು ಅನುಕರಣೀಯ ಕ್ರಮಗಳನ್ನು ಕೈಗೊಂಡಿದೆ.

ಗ್ರಾ.ಪಂ. ವ್ಯಾಪ್ತಿಯ ಕಡಬ- ಸುಬ್ರಹ್ಮಣ್ಯ ರಾಜ್ಯಹೆದ್ದಾರಿಯ ಪಕ್ಕ ದಲ್ಲಿರುವ ಹಳೆಸ್ಟೇಶನ್‌ನ ಸುಮಾರು 5 ಎಕರೆ ವಿಸ್ತೀರ್ಣದ ಪೊಟ್ಟುಕೆರೆ ಹಾಗೂ ಅದರ ಹತ್ತಿರದಲ್ಲಿರುವ ಸುಮಾರು 7 ಎಕರೆ ವಿಸ್ತೀರ್ಣದ ಹೊಸಕೆರೆಯನ್ನು ಹೂಳೆತ್ತಲು ತೀರ್ಮಾನಿಸಲಾಗಿದ್ದು, ಗ್ರಾ.ಪಂ. ವ್ಯಾಪ್ತಿಯ ಪ್ರಮುಖರನ್ನು ಒಳಗೊಂಡ ಕೆರೆ ಅಭಿವೃದ್ಧಿ ಸಮಿತಿ ರಚಿಸಿ ಕೆರೆಗಳ ಅಭಿವೃದ್ಧಿಗೆ ಕಾರ್ಯಯೋಜನೆ ರೂಪಿಸಲಾಗಿದೆ. ಕೆರೆಗಳ ಹೂಳೆತ್ತಿದ ಬಳಿಕ ಗ್ರಾ.ಪಂ.ನ ಆದಾಯ ಹೆಚ್ಚಿಸುವ ಸಲುವಾಗಿ ಆ ಕೆರೆಗಳಲ್ಲಿ ಮೀನು ಸಾಕಣೆ ಮಾಡುವ ಉದ್ದೇಶವೂ ಇದೆ.

ಕೆರೆಯ ಸುತ್ತ ಒತ್ತುವರಿ ತೆರವುಗೊಳಿಸಿ ಬೇಲಿ ನಿರ್ಮಿಸಿ ಭದ್ರಪಡಿಸುವುದರೊಂದಿಗೆ ಪಾರ್ಕ್‌ ನಿರ್ಮಾಣ ಮಾಡಲು ಸಮಗ್ರ ಅಭಿವೃದ್ಧಿಗಾಗಿ ತಲಾ ಅಂದಾಜು 1 ಕೋಟಿ ರೂ. ವೆಚ್ಚದ ಯೋಜನಾ ವರದಿ ತಯಾರಿಸಿ, ಅನುದಾನಕ್ಕಾಗಿ ಸರಕಾರಕ್ಕೆ ಬರೆದುಕೊಳ್ಳುವ ಸಿದ್ಧತೆ ನಡೆದಿದೆ.

ಕೆರೆ ಕಬಳಿಕೆ ಸಂಚು ವಿಫಲ
ಹಳೆಸ್ಟೇಶನ್‌ನ ಪೊಟ್ಟುಕೆರೆಯ ಪರಂಬೋಕು ಪ್ರದೇಶವನ್ನು ಪಹಣಿ ಪತ್ರದಲ್ಲಿ ತಿದ್ದುಪಡಿ ಮಾಡಿ ಸರಕಾರಿ ಜಮೀನು ಎಂದು ನಮೂದಿಸಿ ಅತಿಕ್ರಮಣ ಮಾಡಲು ನಡೆದಿದ್ದ ಹುನ್ನಾರವನ್ನು ಗ್ರಾ.ಪಂ.ನ ನಿರಂತರ ಪ್ರಯತ್ನದಿಂದಾಗಿ ವಿಫಲಗೊಳಿಸಲಾಗಿದೆ. ಎರಡು ವರ್ಷಗಳ ಹಿಂದೆ ಕುಟ್ರಾಪ್ಪಾಡಿ ಗ್ರಾಮದ ಸರ್ವೆ ನಂ. 40ರಲ್ಲಿ ಇರುವ ಹಳೆಸ್ಟೇಶನ್‌ನ ಪೊಟ್ಟುಕೆರೆಯನ್ನು ಉದ್ಯೋಗ ಖಾತರಿ ಯೋಜನೆಯಡಿ ಹೂಳೆತ್ತಿ ಅಭಿವೃದ್ಧಿಪಡಿಸುವ ಉದ್ದೇಶದಿಂದ ಮಾಹಿತಿ ಪಡೆದಾಗ ಈ ಹಿಂದೆ ಕೈಬರಹದ ಪಹಣಿ ಪತ್ರದಲ್ಲಿ ಕೆರೆ ಪರಂಬೋಕು ಎಂದು ಇರುವ ಜಾಗವನ್ನು ಸರಕಾರಿ ಜಾಗ ಎಂದು ದಾಖಲಿಸಿ, ಕೆರೆಯನ್ನು ಖಾಸಗಿ ಉದ್ದೇಶಕ್ಕೆ ಬಳಸುವ ಸಂಚು ಬೆಳಕಿಗೆ ಬಂದಿತ್ತು. ಹಳೆಯ ಕೈಬರಹದ ಪಹಣಿ ಪತ್ರದಲ್ಲಿ ಕೆರೆ ಪರಂಬೋಕು ಎಂದು ನಮೂದಾಗಿರುವುದನ್ನು ಅಕ್ರಮವಾಗಿ ತಿದ್ದಿ ಸರಕಾರಿ ಜಮೀನು ಎಂದು ತಿದ್ದುಪಡಿ ಮಾಡಲಾಗಿತ್ತು. ಈ ಕುರಿತು ಜಿಲ್ಲಾಧಿಕಾರಿಗಳಿಗೆ ದೂರು ನೀಡಿದ್ದ ಗ್ರಾ.ಪಂ. ಆಡಳಿತ ಮಂಡಳಿ ಹಾಗೂ ಅಭಿವೃದ್ಧಿ ಅಧಿಕಾರಿಯ ಸತತ ಎರಡು ವರ್ಷಗಳ ಪ್ರಯತ್ನದ ಬಳಿಕ ಪಹಣಿ ಪತ್ರ ಸರಿಪಡಿಸಿಕೊಳ್ಳುವಲ್ಲಿ ಸಫಲರಾಗಿದ್ದರು.

ಕಾರ್ಯ ಯೋಜನೆ ರೂಪಿಸಿದ್ದೇವೆ
ಗ್ರಾಮದ ವ್ಯಾಪ್ತಿಯ ಕೆರೆಗಳ ಹೂಳೆತ್ತಿ ಅಭಿವೃದ್ಧಿಪಡಿಸಿ ಅಂತರ್ಜಲಮಟ್ಟ ಏರಿಕೆಯಾಗಲು ಪ್ರಯತ್ನಿಸಬೇಕೆನ್ನುವ ಸೂಚನೆ ಸರಕಾರದಿಂದ ಇದೆ. ಹೈಕೋರ್ಟ್‌ ಕೂಡ ರಾಜ್ಯದ ಎಲ್ಲ ಕೆರೆಗಳ ಸರ್ವೆ ನಡೆಸಿ ವರದಿ ಸಲ್ಲಿಸುವಂತೆ ಸರಕಾರಕ್ಕೆ ಆದೇಶಿಸಿದೆ. ನೀರಿನ ಬರ ಹೋಗಲಾಡಿಸಲು ಕೆರೆಗಳ ಪುನರುಜ್ಜೀವನ ಅತ್ಯಗತ್ಯ. ನಮ್ಮ ಗ್ರಾಮದ ವ್ಯಾಪ್ತಿಯಲ್ಲಿರುವ ಕೆರೆಗಳನ್ನು ಸಂರಕ್ಷಣೆ ಮಾಡಬೇಕೆನ್ನುವ ಉದ್ದೇಶದಿಂದ ಕಾರ್ಯಯೋಜನೆ ರೂಪಿಸಿ ದ್ದೇವೆ. ಸರಕಾರ, ಸಂಘ ಸಂಸ್ಥೆಗಳು ಹಾಗೂ ಸಮುದಾಯದ ಸಹಕಾರ ಯಾಚಿಸುತ್ತಿದ್ದೇವೆ.
-ವಿಲ್ಫ್ರೆಡ್‌ ಲಾರೆನ್ಸ್‌ ರೋಡ್ರಿಗಸ್‌, ಕುಟ್ರಾಪ್ಪಾಡಿ ಪಿಡಿಒ

ಕೆರೆ ಉಳಿಸುವ ಪ್ರಯತ್ನ
ಕೆರೆಗಳೆಂದರೆ ಪ್ರಕೃತಿಯ ಹಸುರು ಸಿರಿಗೆ ಬಲುದೊಡ್ಡ ಕೊಡುಗೆಗಳು. ನಮ್ಮ ಜೀವ ವೈವಿಧ್ಯ ಮತ್ತು ಕೃಷಿ ಸಂಸ್ಕೃತಿಯ ಭಾಗಗಳಾಗಿದ್ದ ಸಾಕಷ್ಟು ಕೆರೆಗಳು ಇಂದು ಕಾಲಗರ್ಭದಲ್ಲಿ ಕಣ್ಮರೆಯಾಗಿವೆ. ಇರುವ ಕೆರೆಗಳನ್ನಾದರೂ ಉಳಿಸಿಕೊಳ್ಳಬೇಕೆಂಬ ಪ್ರಯತ್ನ ನಮ್ಮದು. ಎಲ್ಲರ ಸಕಾರಾತ್ಮಕ ಸ್ಪಂದನೆ ಲಭಿಸಿದರೆ ಇದೇನು ಕಷ್ಟದ ಕೆಲಸವಲ್ಲ.
-ವಿದ್ಯಾ ಕಿರಣ್‌ ಗೋಗಟೆ , ಅಧ್ಯಕ್ಷೆ, ಕುಟ್ರಾಪ್ಪಾಡಿ ಗ್ರಾ.ಪಂ.

ನಾಗರಾಜ್‌ ಎನ್‌.ಕೆ. ಕಡಬ

ಟಾಪ್ ನ್ಯೂಸ್

1-ree

IPL Mega Auction:1.1 ಕೋಟಿ ರೂ.ಗೆ ಹರಾಜಾದ 13ರ ಬಾಲಕ !!

isrel netanyahu

Israel; ಹೆಜ್ಬುಲ್ಲಾ ಜತೆ ‘ತಾತ್ವಿಕವಾಗಿ’ ಕದನ ವಿರಾಮ ಒಪ್ಪಂದ :ವರದಿ

Madikeri-1

Madikeri: ರೈಲ್ವೆ ಕಂಬಿಯ ಬೇಲಿಗೆ ಸಿಲುಕಿದ ಕಾಡಾನೆಯ ರಕ್ಷಣೆ

Kharge

JPC on Adani issue;ನಿಯಮ 267 ಅಡಿಯಲ್ಲಿ ಪ್ರಸ್ತಾಪಿಸಲು ಅವಕಾಶ ನೀಡದ್ದಕ್ಕೆ ಖರ್ಗೆ ಆಕ್ರೋಶ

ಅಗ್ಗಕ್ಕೆ ಸೇಲಾದ ಪಾಂಡೆ, ಬೆಂಗಳೂರಿಗೆ ಬಂದ ಆಸೀಸ್‌ ಆಟಗಾರ

IPL Auction: ಅಗ್ಗಕ್ಕೆ ಸೇಲಾದ ಪಾಂಡೆ, ಜ್ಯಾಕ್ಸ್‌ ಗೆ ಬಂಪರ್‌, ಬೆಂಗಳೂರಿಗೆ ಬಂದ ಡೇವಿಡ್

1-Chamundeshwari

Mysuru; ಚಾಮುಂಡೇಶ್ವರಿ ದೇವಿಗೆ ಚಿನ್ನದ ರಥ: ಪ್ರಸ್ತಾವನೆ ಸಲ್ಲಿಸುವಂತೆ ಸಿದ್ದರಾಮಯ್ಯ ಸೂಚನೆ

chetah

Kuno National Park; ಮರಿಗಳಿಗೆ ಜನ್ಮ ನೀಡಿದ ಚೀತಾ ನೀರ್ವಾ: ಸಂಖ್ಯೆ ಹೆಚ್ಚಳ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3

Gurupura: ನಾಡಕಚೇರಿ ಕಟ್ಟಡ ಉದ್ಘಾಟನೆಗೆ ಸಿದ್ಧ

2

Puttur: ಚೆನ್ನಾಗಿ ಮಳೆ ಬಂದರೂ ಕುಸಿದ ಅಂತರ್ಜಲ ಮಟ್ಟ

1

Belthangady: ಕಡೆಗೂ ಬಂತು ಇಂದಿರಾ ಕ್ಯಾಂಟೀನ್‌

Veerendra Heggade: ಡಾ.ಡಿ.ವೀರೇಂದ್ರ ಹೆಗ್ಗಡೆಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ ಪ್ರಶಸ್ತಿ

Veerendra Heggade: ಡಾ.ಡಿ.ವೀರೇಂದ್ರ ಹೆಗ್ಗಡೆಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ ಪ್ರಶಸ್ತಿ

Puttur: ಮೃ*ತದೇಹವನ್ನು ರಸ್ತೆ ಬದಿ ಇರಿಸಿ ಹೋದ ಪ್ರಕರಣ; ಪ್ರಮುಖ ಆರೋಪಿ ಸಹಿತ ಮೂವರ ಬಂಧನ

Puttur: ಮೃ*ತದೇಹವನ್ನು ರಸ್ತೆ ಬದಿ ಇರಿಸಿ ಹೋದ ಪ್ರಕರಣ; ಪ್ರಮುಖ ಆರೋಪಿ ಸಹಿತ ಮೂವರ ಬಂಧನ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

1-ree

IPL Mega Auction:1.1 ಕೋಟಿ ರೂ.ಗೆ ಹರಾಜಾದ 13ರ ಬಾಲಕ !!

Udupi: ಶ್ರೀ ಕೃಷ್ಣಮಠ; 18 ದಿನಗಳ ಭಗವದ್ಗೀತಾ ಹರಿಕಥಾ ಸರಣಿ ಕಾರ್ಯಕ್ರಮಕ್ಕೆ ಚಾಲನೆ

Udupi: ಶ್ರೀ ಕೃಷ್ಣಮಠ; 18 ದಿನಗಳ ಭಗವದ್ಗೀತಾ ಹರಿಕಥಾ ಸರಣಿ ಕಾರ್ಯಕ್ರಮಕ್ಕೆ ಚಾಲನೆ

isrel netanyahu

Israel; ಹೆಜ್ಬುಲ್ಲಾ ಜತೆ ‘ತಾತ್ವಿಕವಾಗಿ’ ಕದನ ವಿರಾಮ ಒಪ್ಪಂದ :ವರದಿ

Untitled-1

Mangaluru: ಸೆಕ್ಯುರಿಟಿ ಕೆಲಸ ಮಾಡುತ್ತಿದ್ದ ವ್ಯಕ್ತಿ ನಾಪತ್ತೆ

Madikeri-1

Madikeri: ರೈಲ್ವೆ ಕಂಬಿಯ ಬೇಲಿಗೆ ಸಿಲುಕಿದ ಕಾಡಾನೆಯ ರಕ್ಷಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.