Leopard attack: ನಯನಾಡು; ಚಿರತೆ ದಾಳಿಗೆ ಕರು ಬಲಿ
Team Udayavani, Dec 20, 2023, 4:35 PM IST
ಪುಂಜಾಲಕಟ್ಟೆ: ಚಿರತೆಯೊಂದು ಹಟ್ಟಿಯಲ್ಲಿದ್ದ ಕರುವಿನ ಮೇಲೆ ದಾಳಿ ನಡೆಸಿ ಕೊಂದು ತಿಂದು ಹಾಕಿದ ಘಟನೆ ಬುಧವಾರ ಬಂಟ್ವಾಳ ತಾಲೂಕಿನ ಪಿಲಾತಬೆಟ್ಟು ಗ್ರಾಮದ ನಯನಾಡು ಎಂಬಲ್ಲಿ ಸಂಭವಿಸಿದೆ.
ಇಲ್ಲಿನ ವಿಟ್ಠಲ ಶೆಟ್ಟಿ ಎಂಬವರ ಮನೆಯ ಸಮೀಪದಲ್ಲಿರುವ ಹಟ್ಟಿಯಲ್ಲಿ ಈ 6 ತಿಂಗಳ ಕರುವನ್ನು ಕಟ್ಟಿಹಾಕಲಾಗಿತ್ತು. ಮಧ್ಯರಾತ್ರಿ ವೇಳೆ ಚಿರತೆ ದಾಳಿ ಮಾಡಿ ಕರುವನ್ನು ಹಟ್ಟಿಯಿಂದ ಸುಮಾರು 50 ಮೀ.ದೂರದ ಅಡಿಕೆ ತೋಟಕ್ಕೆ ಎಳೆದುಕೊಂಡು ಹೋಗಿ ಕೊಂದು ಬಳಿಕ ತಿಂದಿದೆ.
ಈ ಹೊತ್ತಿನಲ್ಲಿ ನಾಯಿಗಳ ಬೊಗಳಿಕೆ ಕೇಳಿದೆಯಾದರೂ ಚಿರತೆಯ ಬಗ್ಗೆ ಯೋಚನೆ ಮಾಡಿರಲಿಲ್ಲ. ಇದುವರೆಗೆ ಈ ಪರಿಸರದಲ್ಲಿ ಚಿರತೆ ಹಾವಳಿ ಇರಲಿಲ್ಲ , ಇದೀಗ ಘಟನೆಯಿಂದ ಪರಿಸರದಲ್ಲಿ ಆತಂಕ ಉಂಟಾಗಿದೆ ಎಂದು ಗ್ರಾಮಸ್ಥರು ತಿಳಿಸಿದ್ದಾರೆ.
ಘಟನೆಯ ಬಗ್ಗೆ ಅರಣ್ಯ ಇಲಾಖೆ ಹಾಗೂ ಪುಂಜಾಲಕಟ್ಟೆ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Rishabh Pant: ಅಪಘಾತದ ವೇಳೆ ನೆರವಾದವರಿಗೆ ಗಿಫ್ಟ್ ನೀಡಿದ ರಿಷಭ್ ಪಂತ್
Prabhutva movie review: ಪ್ರಗತಿ ಪಥದಲ್ಲಿ ಕ್ರಾಂತಿಯ ಕಿಡಿ
BBK11: ಇವತ್ತು ಬಿಗ್‌ಬಾಸ್ ಮನೆಯಿಂದ ಆಚೆ ಬರುವುದು ಇವರೇ ನೋಡಿ
Vijayapura: ಜಿಲ್ಲಾಸ್ಪತ್ರೆಯಲ್ಲಿ ಒಂದು ವರ್ಷದ ಮಗು ಅಪಹರಣ: ಸಿಸಿಟಿವಿಯಲ್ಲಿ ದೃಶ್ಯ
Kundgol: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಬೈಕ್; ಸವಾರರು ಕಣ್ಮರೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.