Belthangady ಕಟ್ಟಿ ಹಾಕಿದ್ದ 2 ಕರುಗಳನ್ನು ಕೊಂದು ತಿಂದ ಚಿರತೆ
Team Udayavani, Dec 4, 2023, 10:52 PM IST
ಬೆಳ್ತಂಗಡಿ: ಮುಂಡೂರು ಗ್ರಾಮದ ಕೇರಿಯಾರ್ ಗುರುವಪ್ಪ ಸಾಲ್ಯಾನ್ ಅವರಿಗೆ ಸೇರಿದ ಎರಡು ದನದ ಕರುಗಳ ಮೇಲೆ ಚಿರತೆ ದಾಳಿ ಮಾಡಿ ಕೊಂದು ಹಾಕಿರುವ ಘಟನೆ ರವಿವಾರ ರಾತ್ರಿ ಸಂಭವಿಸಿದೆ.
ಗುರುವಪ್ಪ ತಮ್ಮ ಮನೆ ಸಮೀಪ ಕರುಗಳನ್ನು ಕಟ್ಟಿ ಹಾಕಿದ್ದರು. ರಾತ್ರಿ ಅಲ್ಲಿಗೆ ಆಗಮಿಸಿದ ಚಿರತೆ ಕರುಗಳ ಮೇಲೆ ದಾಳಿ ಮಾಡಿ ಕೊಂದು ಅನಂತರ ತೋಟಕ್ಕೆ ಎಳೆದೊಯ್ದು ತಿಂದು ಹಾಕಿರುವುದು ಕಂಡುಬಂದಿದೆ.
ಎರಡನೇ ಘಟನೆ
ಒಂದೂವರೆ ತಿಂಗಳ ಹಿಂದೆ ರಾತ್ರಿ ಬಂದ ಚಿರತೆ ಕರುವೊಂದರ ಮೇಲೆ ದಾಳಿ ನಡೆಸಿ ತಿಂದು ಹಾಕಿತ್ತು. ಇದರ ಬಗ್ಗೆಯೂ ಅರಣ್ಯ ಇಲಾಖೆಗೆ ದೂರು ನೀಡಲಾಗಿತ್ತು.
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.