ಸಮಗ್ರ ಅಭಿವೃದ್ಧಿಗೆ ಯುವ ಸಮೂಹ ಕೈಜೋಡಿಸಲಿ: ಸಂತೋಷ್
"ಸಶಕ್ತ ಭಾರತ ಸದೃಢ ಹೆಜ್ಜೆಗಳು' ರಾಷ್ಟ್ರೀಯ ವಿಚಾರಸಂಕಿರಣ
Team Udayavani, Feb 18, 2020, 1:14 AM IST
ಸಶಕ್ತ ಭಾರತ ಸದೃಢ ಹೆಜ್ಜೆಗಳು ರಾಷ್ಟ್ರ ಮಟ್ಟದ ವಿಚಾರ ಸಂಕಿರಣದಲ್ಲಿ ಮಾಳವಿಕಾ ಅವಿನಾಶ್ ದೀಪ ಬೆಳಗಿಸಿದರು.
ಕಲ್ಲಡ್ಕ: ದೇಶದ ಪ್ರಜೆಗಳನ್ನು ಸ್ವಾವಲಂಬಿ, ಸಶಕ್ತರನ್ನಾಗಿಸುವ ಬದ್ಧತೆ ಹೊಂದಿರುವ ಸರಕಾರವು ನವ
ಭಾರತದ ಸಂಕಲ್ಪವನ್ನು ಭಾರತೀಯರ ಮುಂದೆ ಇಟ್ಟಿದೆ. ವಿದ್ಯಾರ್ಥಿ ಯುವ ಸಮೂಹ ದೇಶದ ಸಮಗ್ರ ಅಭಿವೃದ್ಧಿಯಲ್ಲಿ ಕೈಜೋಡಿಸಬೇಕಾಗಿದೆ ಎಂದು ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಕರೆ ನೀಡಿದರು.
ಅವರು ಸೋಮವಾರ ಕಲ್ಲಡ್ಕ ಶ್ರೀರಾಮ ವಿದ್ಯಾಕೇಂದ್ರದಲ್ಲಿ ನಡೆದ ಸಶಕ್ತ ಭಾರತ ಸದೃಢ ಹೆಜ್ಜೆಗಳು ರಾಷ್ಟ್ರ ಮಟ್ಟದ ವಿಚಾರ ಸಂಕಿರಣದಲ್ಲಿ ಆರ್ಥಿಕ ಮತ್ತು ರಕ್ಷಣೆಯ ಪಾತ್ರ ವಿಷಯದ ಕುರಿತು ಮಾತನಾಡಿದರು. ಆರ್ಥಿಕವಾಗಿ ಹಿಂದೆ ಬಿದ್ದಿರುವ ಎಲ್ಲರನ್ನೂ ಮುಂದೆ ತರುವ ಕೆಲಸಕ್ಕೆ
ನಾವು ಬದ್ಧರಾಗಬೇಕು. ವ್ಯವಸ್ಥೆಯ ಆಧಾರದಲ್ಲಿ ದೇಶ ಪ್ರಗತಿ ಸಾಧಿಸಬೇಕು. ಅಂತಹ ದಿನಗಳು ಹತ್ತಿರ ಬರುತ್ತಿವೆ ಎಂದು ಸಂತೋಷ್ ತಿಳಿಸಿದರು. ಮಂಗಳೂರು ವಿ.ವಿ. ಪ್ರಾಧ್ಯಾಪಕ ಪಿ.ಎಲ್. ಧರ್ಮ ಸಮನ್ವಯಕಾರರಾಗಿದ್ದರು.
ಮೋದಿ ನಾಯಕತ್ವ
ಪುತ್ತೂರು ವಿವೇಕಾನಂದ ವಿದ್ಯಾ ವರ್ಧಕ ಸಂಘದ ಅಧ್ಯಕ್ಷ ಕಲ್ಲಡ್ಕ ಡಾ| ಪ್ರಭಾಕರ್ ಭಟ್ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಪ್ರಧಾನಿ ಮೋದಿ ನಾಯಕತ್ವ ಸಿಕ್ಕಿರುವುದು ನಮ್ಮ ಭಾಗ್ಯ. ಸದೃಢ ಭಾರತದ ಹೆಜ್ಜೆಗಾಗಿ, ಉತ್ತಮ ಸಮಾಜದ ನಿರ್ಮಾಣಕ್ಕಾಗಿ, ಉತ್ತಮ ವಿಚಾರಗಳ ಚರ್ಚೆ ಆಗಬೇಕಾಗಿದೆ, ಅದು ವಿದ್ಯಾರ್ಥಿಗಳ ಮೂಲಕ ಯಶಸ್ವಿ ಯಾಗಿ ನಡೆಯಬೇಕು ಎಂದರು.
ರಾಜಕೀಯ ಸಂಚು
ಸಾಮಾಜಿಕ ಕಾರ್ಯಕರ್ತೆ ಬೆಂಗಳೂರಿನ ಮಾಳವಿಕಾ ಅವಿನಾಶ್ ದೀಪ ಬೆಳಗಿಸಿ ಮಾತನಾಡಿ, ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿ ಹಿಂಸಾ ಪ್ರತಿಭಟನೆಯ ಹಿಂದೆ ವ್ಯವಸ್ಥಿತ ರಾಜಕೀಯದ ಸಂಚಿದೆ. ಮೂರು ತಿಂಗಳಿನ ಸುದೀರ್ಘ ಹೋರಾಟಕ್ಕೆ ಆರ್ಥಿಕ ಸಂಪನ್ಮೂಲ ನೀಡಿದ್ದು ಯಾರು. ಅಶಾಂತಿ ಸೃಷ್ಟಿಸುವುದು ಇದರ ಉದ್ದೇಶವಲ್ಲವೇ ಎಂದು ಪ್ರಶ್ನಿಸಿದರು. ಸಂಘದ ಪ್ರಚಾರಕ ಸುನಿಲ್ ಕುಲಕರ್ಣಿ ಸಮನ್ವಯಕಾರರಾಗಿದ್ದರು.
ಮೂರನೇ ವಿಚಾರಗೋಷ್ಠಿಯಲ್ಲಿ ಬೆಂಗಳೂರಿನ ಆರೋಹಿ ರಿಸರ್ಚ್ ಫೌಂಡೇಶನ್ ನಿರ್ದೇಶಕ ಎಂ.ಎಸ್. ಚೈತ್ರ “ಜನಸಂಖ್ಯೆ ಲಾಭವೇ- ಅಪಾಯವೇ’ ವಿಷಯದ ಬಗ್ಗೆ ಮಾತನಾಡಿದರು. ನಾಲ್ಕನೇ ವಿಚಾರಗೋಷ್ಠಿ ಯಲ್ಲಿ ಕರ್ನಾಟಕ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಮೈಸೂರಿನ ಬಿ.ವಿ. ವಸಂತ್ ಕುಮಾರ್ “ಬೌದ್ಧಿಕ ದಾಸ್ಯದಿಂದ ಮೇಲೇಳುತ್ತಿದೆಯೇ ಭಾರತ’ ಎಂಬ ವಿಷಯದ ಕುರಿತು ಮಾತನಾಡಿದರು.
ಕ್ಯಾಂಪ್ಕೋ ಅಧ್ಯಕ್ಷ ಸತೀಶ್ಚಂದ್ರ, ನಾರಾಯಣ ಸೋಮಯಾಜಿ, ವಸಂತ ಮಾಧವ ಉಪಸ್ಥಿತರಿದ್ದರು.
ಕೃಷ್ಣಪ್ರಸಾದ್ ಕಾಯರ್‌ಕಟ್ಟೆ ಸ್ವಾಗತಿಸಿ, ಯತಿರಾಜ್ ಪೆರಾಜೆ ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
ತಿರುಪತಿ ಮೃಗಾಲಯದಲ್ಲಿ ಬೆಂಗಳೂರಿನಿಂದ ತರಲಾಗಿದ್ದ ರಾಯಲ್ ಬೆಂಗಾಲ್ ಟೈಗರ್ ‘ಮಧು’ ಸಾ*ವು
Mohammed Siraj: ಬಿಟೌನ್‌ನ ಈ ಹಾಟ್ ಬೆಡಗಿ ಜತೆ ಕ್ರಿಕೆಟಿಗ ಸಿರಾಜ್ ಡೇಟಿಂಗ್?
Vijayapura: ಮಹಾನಗರ ಪಾಲಿಕೆ ಉಪ ಚುನಾವಣೆ… ವಾರ್ಡ್ ನಂ.29ರಲ್ಲಿ ಬಿಜೆಪಿ ಗೆಲುವು
By Election: ಕೊಪ್ಪಳ ನಗರಸಭೆ ಉಪಚುನಾವಣೆ… ಕಮಲಕ್ಕೊಂದು ಕೈಗೊಂದು ಗೆಲುವು
Arrested: ಕಾರು ಬಾಡಿಗೆ ಪಡೆದಿದ್ದ ವಿದ್ಯಾರ್ಥಿಗಳ ಅಪಹರಿಸಿ ಸುಲಿಗೆ; ಮೂವರ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.