ಸಿಲಿಕಾನ್ ಸಿಟಿ ರೀತಿ ಬೆಳ್ತಂಗಡಿ ಅಭಿವೃದ್ಧಿ
ಲಾೖಲ ಗ್ರಾ.ಪಂ.ನಲ್ಲಿ ವಿವಿಧ ಕಾಮಗಾರಿಗೆ ಚಾಲನೆ ನೀಡಿದ ಪೂಂಜ
Team Udayavani, Mar 27, 2022, 1:13 PM IST
ಬೆಳ್ತಂಗಡಿ: ಸಂಜೀವಿನಿ ಒಕ್ಕೂಟವು ಇಂದು ಗ್ರಾಮೀಣ ಮಹಿಳೆಯರನ್ನು ಆರ್ಥಿಕ ಸಶಕ್ತೀಕರಣ ಗೊಳಿಸುವ ಮೂಲಕ ಕುಟುಂಬ ನಿರ್ವಹಣೆಯಲ್ಲಿ ಸಶಕ್ತರನ್ನಾಗಿಸುವ ಶಕ್ತಿ ನೀಡಿದೆ. ಒಟ್ಟಾರೆಯಾಗಿ ನಮ್ಮ ಬೆಳ್ತಂಗಡಿಯೂ ಒಂದು ಪುಟ್ಟ ಸಿಲಿಕಾನ್ ಸಿಟಿಯಂತೆ ಅಭಿವೃದ್ಧಿ ಹೊಂದಬೇಕು ಎಂಬುದೇ ನಮ್ಮ ಆಶಯ ಎಂದು ಶಾಸಕ ಹರೀಶ್ ಪೂಂಜ ಹೇಳಿದರು.
ದ.ಕ. ಜಿ.ಪಂ., ತಾ.ಪಂ. ಬೆಳ್ತಂಗಡಿ, ಗ್ರಾ.ಪಂ. ಲಾೖಲ ವತಿಯಿಂದ ಮಾ.26 ರಂದು ಲಾೖಲ ಗ್ರಾ.ಪಂ.ನಲ್ಲಿ ಗ್ರಂಥಾಲಯ ಕಟ್ಟಡಕ್ಕೆ ಶಿಲಾನ್ಯಾಸ ಹಾಗೂ ವಿವಿಧ ಕಾಮಗಾರಿಗೆ ಚಾಲನೆ ನೀಡಿ ಬಳಿಕ ಭಾರತ್ ಮಾತಾ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದರು. ಸ್ವತ್ಛತೆ ದೃಷ್ಟಿಯಿಂದ ಲಾೖಲ ಗ್ರಾ.ಪಂ.ಗೆ ವಾಹನದ ವ್ಯವಸ್ಥೆ, ಸುಂದರ ಗ್ರಂಥಾಲಯ ಸ್ಥಾಪಿಸುವ ಕೆಲಸವಾಗಲಿದೆ ಎಂದು ಹೇಳಿದರು. ದ.ಕ. ಜಿ.ಪಂ. ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಡಾ| ಕುಮಾರ್ ಮಾತನಾಡಿ, ಅಧಿಕಾರಿಗಳು ಹಾಗೂ ಜನ ಪ್ರತಿನಿಧಿಗಳು ಸಾಮರಸ್ಯದಿಂದ ಕರ್ತವ್ಯ ನಿರ್ವಹಿಸಿದಾಗ ಗ್ರಾಮದ ತಳಮಟ್ಟದ ಅಭಿವೃದ್ಧಿ ಹೊಂದಲು ಸಾಧ್ಯ ಎಂದರು.
ಲಾೖಲ ಗ್ರಾ.ಪಂ. ಅಧ್ಯಕ್ಷೆ ಬೆನೆಡಿಕ್ಟ ಸಲ್ಡಾನ ಅಧ್ಯಕ್ಷತೆ ವಹಿಸಿ ಮಾತನಾಡಿದರು. ತಾ.ಪಂ. ಇಒ ಕುಸುಮಾಧರ್ ಬಿ., ಲಾೖಲ ಗ್ರಾ.ಪಂ. ಉಪಾಧ್ಯಕ್ಷ ಗಣೇಶ್, ಎನ್.ಆರ್. ಎಲ್.ಎಂ. ಜಿಲ್ಲಾ ಕಾರ್ಯಕ್ರಮ ವ್ಯವಸ್ಥಾಪಕ ಹರಿಪ್ರಸಾದ್, ಸಂಜೀವಿನಿ ಒಕ್ಕೂಟ ಅಧ್ಯಕ್ಷೆ ಯಶೋದಾ, ಪಿಡಿಒ ಪ್ರಕಾಶ್ ಶೆಟ್ಟಿ ನೊಚ್ಚ ಉಪಸ್ಥಿತರಿದ್ದರು.
ಮುಖ್ಯಮಂತ್ರಿ ಚಿನ್ನದ ಪದಕಕ್ಕೆ ಆಯ್ಕೆಯಾದ ಬೆಳ್ತಂಗಡಿ ಗೃಹರಕ್ಷಕ ದಳದ ಘಟಕಾಧಿಕಾರಿ ಜಯಾನಂದ ಲಾೖಲ ಹಾಗೂ ಜಿ.ಪಂ. ಸಿಇಒ ಡಾ| ಕುಮಾರ್ ಅವರನ್ನು ಸಮ್ಮಾನಿಸಲಾಯಿತು. ಲ್ಯಾಲ ಗ್ರಾ.ಪಂ. ವ್ಯಾಪ್ತಿಯ ಪ.ಜಾತಿ, ಪ. ಪಂಗಡದ ಫಲಾನುಭವಿಗಳಿಗೆ ಸಹಾಯಧನದ ಚೆಕ್ ವಿತರಣೆ, ಸ್ವಚ್ಛತಾ ವಾಹನ ಉದ್ಘಾಟನೆ ಗ್ರಂಥಾಲಯ ಕಟ್ಟಡಕ್ಕೆ ಶಿಲಾನ್ಯಾಸ, ಎನ್.ಆರ್.ಎಲ್. ಎಂ. ಕಟ್ಟಡ, ಸಮಗ್ರ ಸಂಜೀವಿನಿ ಮಹಿಳಾ ಒಕ್ಕೂಟದ ಕಾರ್ಯಾಲಯವನ್ನು ಹರೀಶ್ ಪೂಂಜ ಉದ್ಘಾಟಿಸಿದರು. ತಾ.ಪಂ. ಕಾರ್ಯಕ್ರಮ ಸಂಯೋಜಕ ಜಯಾನಂದ ಲಾೖಲ ನಿರೂಪಿಸಿದರು. ಕಾರ್ಯದರ್ಶಿ ಯಶೋಧರ ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Puttur: ನಿಯಂತ್ರಣ ತಪ್ಪಿ ಗುಂಡಿಗೆ ಬಿದ್ದ ಕಾರು; ಮೂವರ ದುರ್ಮರಣ
INDvsAUS: ವಿಚಿತ್ರ ರೀತಿಯಲ್ಲಿ ಔಟಾದ ರಿಷಭ್ ಪಂತ್ ವಿರುದ್ದ ಕಿಡಿಕಾರಿದ ಗಾವಸ್ಕರ್
Hathras: ಶಾಲೆಗೆ ರಜೆ ಸಿಗಬೇಕೆಂದು 2ನೇ ತರಗತಿ ಮಗುವನ್ನು ಕೊಂದ ವಿದ್ಯಾರ್ಥಿ!
Meghalaya: ಚರ್ಚ್‌ಗೆ ನುಗ್ಗಿ ಜೈ ಶ್ರೀರಾಮ್ ಘೋಷಣೆ: ಕೇಸು ದಾಖಲು
Honey Trap; ಗುತ್ತಿಗೆದಾರನನ್ನು ಟೀಗೆ ಕರೆದು ಖೆಡ್ಡಾಕ್ಕೆ ಕೆಡವಿದಳು!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.